Sunday, April 20, 2025

Latest Posts

ಪಾರ್ಲಿಮೆಂಟ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ…

- Advertisement -

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ.

ಈ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ, ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡ್ತಾರೆ. ಪಾರ್ಲಿಮೆಂಟ್ ಏನ್ ಕಟ್ಟಿದ್ದಾರೆ ಅದರು ಭಾರಿ ಘೋರವಾಗಿರುತ್ತೆ ಸಂಭವ ಅನ್ನೋದು ವೀರ ಬ್ರಹ್ಮ‌ಸ್ವಾಮಿ ಚರಿತ್ರೆಯಲ್ಲಿ ಬರೆದಿದ್ದಾರೆ. ತ್ರೀಕೋನಾತ್ಮಿಕ ದೀಪಿಕ, ಯಾವುದೇ ಪಾರ್ಲಿಮೆಂಟ್ ಗುಂಡಾಗಿರಬೇಕು, ಇಲ್ಲ ಚೌಕವಾಗಿರಬೇಕು. ಚಂದ್ರ ಇಲ್ಲ ಪೂರ್ತಿಯಾಗಿ ಕುಜನಾಂಶವಾಗಿರಬೇಕು. ತ್ರಿಕೋನ ಮಾಡಿದಾಗ ಉಗ್ರವಾಗಿರುತ್ತೆ. ದೇಶದ ಮೇಲೆ, ಜನಗಳ ಮೇಲೆ ಒತ್ತಾಯ, ಒತ್ತಡಗಳು ಜಾಸ್ತಿ ಆಗುತ್ತೆ. ಮೊದಲು ಕದ್ದುಮುಚ್ಚಿ ಲಂಚ ತೆಗೆದುಕೊಳ್ಳುತ್ತಿದ್ದರು, ಈಗ ಎಲ್ಲಾ ಓಪನ್. ದಂಡಂ ದಶಗುಣಂ ಭಗವಂತ ಆ ಸಮಯಕ್ಕೆ ಬಂದೇ ಬರುತ್ತಾನೆ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ.

ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ..

ಅಲ್ಲದೇ, ಕಲಿಯುಗ ಅಂತ್ಯ ಕಾಲಕ್ಕೆ ರೋಗ ರುಜಿನೆಗಳು ಜಾಸ್ತಿ ಆಗುತ್ತೆ. ಡಿಸೆಂಬರ್ ಅಂತ್ಯಕ್ಕೆ ಐದು ಗ್ರಹಗಳು ಒಟ್ಟಿಗೆ ಬರುತ್ತೆ ಒಂಭತ್ತು ತಿಂಗಳು ಕೂರುತ್ತೆ. ಎರಡು ಗ್ರಹಣಗಳ ಹತ್ತಿರ ಬರಬಾರದು. ಜನರಿಗೆ ನೀರಿನ‌ ಅಭಾವ, ಬೆಂಕಿ, ಗಲಾಟೆ, ಘರ್ಷಣೆ, ಸ್ವಂತದವರ ಹತ್ತಿರ ಘರ್ಷಣೆಗಳು ನಡೆಯುತ್ತದೆ. ರಾಜ್ಯದಲ್ಲಿ ಯಾರೂ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ.

- Advertisement -

Latest Posts

Don't Miss