Tuesday, April 15, 2025

Latest Posts

ಜಯನಗರ ಸೇರಿ 25 ಕ್ಷೇತ್ರಗಳಲ್ಲಿ ಟಿಕೆಟ್​​​ಗೆ ಬ್ರಾಹ್ಮಣ ಸಮುದಾಯ ಒತ್ತಾಯ

- Advertisement -

Political News

ಬೆಂಗಳೂರು(ಫೆ.11): ಎಲೆಕ್ಷನ್ ಸಮೀಪಿಸ್ತಿದ್ದಂತೆ ಎಲ್ಲಾ ಸಮುದಾಯಗಳು ತಮಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸ್ತಿವೆ. ಅದೇ ರೀತಿ ಬ್ರಾಹ್ಮಣ ಸಮುದಾಯ ಹೆಚ್ಚಾಗಿರೋ ಸುಮಾರು25 ವಿಧಾನಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಕೇಳಿ ಬಂದಿದೆ.

ಬೆಂಗಳೂರಿನಲ್ಲಿ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯಕಾರಣಿ ನಡೀತು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ನೇತೃತ್ವದಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದಿದ್ದ ಮುಖಂಡರು ಭಾಗವಹಿಸಿದ್ರು. ಕಾರ್ಯಕಾರಣಿಯಲ್ಲಿ ಪ್ರಮುಖವಾಗಿ ಬ್ರಾಹ್ಮಣ ಸಮುದಾಯಕ್ಕೆ ರಾಜಕೀಯದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಚರ್ಚೆ ಆಯ್ತು. ಬೆಂಗಳೂರಿನ ಜಯನಗರ, ಬಸವನಗುಡಿ ಸೇರಿದಂತೆ ರಾಜ್ಯಾದ್ಯಂತ ಸುಮಾರು 20-25 ಕ್ಷೇತ್ರಗಳಲ್ಲಿ ಬ್ರಾಹ್ಮಣ ಸಮುದಾಯ ಹೆಚ್ಚಾಗಿರೋ ಕ್ಷೇತ್ರಗಳಿವೆ. ಹೀಗಾಗಿ ಆ ಕ್ಷೇತ್ರಗಳಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು.

ಕಾರ್ಯಕಾರಣಿಯಲ್ಲಿ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರು ಹಾಗೂ ಜಯನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರೋ ಸಿ ಕೆ ರಾಮಮೂರ್ತಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಬಟ್ ಭಾಗವಹಿಸಿದ್ದರು.

- Advertisement -

Latest Posts

Don't Miss