ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ.
ನಂತರ ಕರ್ನಾಟಕ ಸರ್ಕಾರವು ತನ್ನ ಸಲಹೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮ್ಮೇಳನಗಳು, ವಿಚಾರಗೋಷ್ಠಿಗಳು, ಶೈಕ್ಷಣಿಕ ಕಾರ್ಯಕ್ರಮಗಳು ಇತ್ಯಾದಿಗಳನ್ನು ಎರಡು ತಿಂಗಳ ಕಾಲ ಮುಂದೂಡುವಂತೆ ಸೂಚನೆ ನೀಡಿದೆ.
ಕರ್ನಾಟಕ ಸರ್ಕಾರವು ಹೊರಡಿಸಿದ ಅಧಿಕೃತ ಹೇಳಿಕೆಯಲ್ಲಿ, ‘ವೈದ್ಯಕೀಯ ಮತ್ತು ಅರೆವೈದ್ಯಕೀಯ ಮತ್ತು ಅಂತಹ ಇತರ ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳನ್ನು ಕೋವಿಡ್ -19 ರೋಗಲಕ್ಷಣಗಳಿಗಾಗಿ ಪ್ರತಿದಿನ ಪರೀಕ್ಷಿಸಬೇಕು. ಮತ್ತು ಈಗಾಗಲೇ ನೀಡಿರುವ ಮಾರ್ಗಸೂಚಿಗಳ ಪ್ರಕಾರ ರೋಗಲಕ್ಷಣವನ್ನು ಪರೀಕ್ಷಿಸಬೇಕು ಮತ್ತು ಚಿಕಿತ್ಸೆ ನೀಡಬೇಕು ಅಂತ ತಿಳಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎರಡು ತಿಂಗಳ ಕಾಲ ಮುಂದೂಡಬಹುದು ಅಂಥ ತಿಳಿಸಿದೆ.
ಸಂಸ್ಥೆಗಳಲ್ಲಿ ಸಮ್ಮೇಳನಗಳು, ಸೆಮಿನಾರ್‌ಗಳು, ಶೈಕ್ಷಣಿಕ ಕಾರ್ಯಕ್ರಮಗಳು ಇತ್ಯಾದಿಗಳನ್ನು ಮುಂದೂಡಬಹುದು. ಪರ್ಯಾಯವಾಗಿ, ಇದನ್ನು ಹೈಬ್ರಿಡ್ ಮೋಡ್‌ನಲ್ಲಿ ನಡೆಸಬಹುದು, ಅಂದರೆ ಕನಿಷ್ಠ ದೈಹಿಕ ಹಾಜರಾತಿಯೊಂದಿಗೆ ಮತ್ತು ವರ್ಚುವಲ್ ಮೋಡ್ ಮೂಲಕ ಹೆಚ್ಚು ವ್ಯಕ್ತಿಗಳು ಹಾಜರು ಆಗುವಂತೆ ಅಂತ ತಿಳಿಸಿದೆ.