- Advertisement -
ಬೆಂಗಳೂರು : ಪ್ರಜ್ವಲ್ ರೇವಣ್ಣ ಸಂಬಂಧಿಸಿದ ರಾಸಲೀಲೆ ವಿಡಿಯೋಗಳ ಹಂಚಿಕೆ ಸಂಬಂಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಹಾಸನ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.
ಈ ಹಿಂದೆ ಪೆನ್ ಡ್ರೈವ್ ಹಂಚಿಕೆ ಸಂಬಂಧ ಪ್ರೀತಂ ಗೌಡರ ಆಪ್ತರನ್ನ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ರು. ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರೂ ಪ್ರೀತಂ ಗೌಡ ರೇವಣ್ಣ ಕುಟುಂಬದ ಕಡುವಿರೋಧಿ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರೀತಂ ಬೆಂಬಲಿಗರು ಚುನಾವಣೆ ಪ್ರಚಾರ ಮಾಡಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಿದ್ರು. ಚುನಾವಣೆ ನಂತರ ಪೆನ್ ಡ್ರೈವ್ ಹಂಚಿಕೆ ಸಂಬಂಧ ಪ್ರೀತಂ ಆಪ್ತರನ್ನ ಎಸ್ ಐ ಟಿ ಅಧಿಕಾರಿಗಳು ಬಂಧಿಸಿದ್ರು. ಇದೀಗ ಪ್ರೀತಂ ಗೌಡ ಮೇಲೆ ಎಫ್ ಐ ಆರ್ ದಾಖಲಾಗಿರೋದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
- Advertisement -