- Advertisement -
BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ
ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೊಷಿಸಿದ್ದಾರೆ.. ಸರ್ಕಾರ ಎರಡು ವರ್ಷ ತುಂಬಿದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲೇ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇಂದು ಮಧ್ಯಾಹ್ನ ಊಟ ಮಾಡಿದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದೇನೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ರು.. 75 ವರ್ಷ ವಾಗಿದ್ರೂ ಮತ್ತೆ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟ ಮೋದಿ, ಅಮಿಶ್ ಶಾ ಅವರಿಗೆ ಧನ್ಯವಾದ ತಿಳಿಸ್ತೇನೆ. ಹಾಗೆಯೇ ಪಕ್ಷವನ್ನ ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶಪಥ ಮಾಡುತ್ತೇನೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ರು.. ಈ ಮಾತನ್ನ ಹೆಳುವಾಗ ಯಡಿಯೂರಪ್ಪ ಗದ್ಗದಿತರಾಗಿದ್ರು. ಆದ್ರೆ, ಇದು ದುಖಃದಲ್ಲಿ ಹೇಳ್ತಿರೋದನ್ನ ಸಂತೋಷದಿಂದ ಹೇಳ್ತಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ರು.
- Advertisement -