ಲಂಚ ಸ್ವೀಕಾರ… ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

Shivamogga News: ಶಿವಮೊಗ್ಗ: ಲಂಚ ಸ್ವೀಕರಿಸುವ ವೇಳೆ ಸೊರಬ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಇಂದು(ಬುಧವಾರ) ನಡೆದಿದೆ.

ಸೊರಬ ಪುರಸಭೆಯ ಕಂದಾಯ ನಿರೀಕ್ಷಕರಾಗಿರುವ ವಿನಾಯಕ ಗುರುವಯ್ಯ ಅವರು ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.

ಪ್ರತಿಭಾ ಎಂ.ನಾಯ್ಕರಿಗೆ ಖಾಲಿ ನಿವೇಶನಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿಕೊಡಲು ಗುರುವಯ್ಯ ಪ್ರತಿಭಾ ಅವರಿಂದ 50,000 ರೂಪಾಯಿ ಬೇಡಿಕೆ ಇಟ್ಟಿದ್ದರು ಬಳಿಕ ಹಣಕಾಸಿನ ವಿಚಾರದ ಬಗ್ಗೆ ಚರ್ಚೆ ನಡೆದು ಕೊನೆಗೆ 40,000 ಸಾವಿರ ರೂಗಳಿಗೆ ಡೀಲ್ ಕುದುರಿತ್ತು, ಅದರಂತೆ ಗುರುವಯ್ಯ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ನಟಿ ಕಾಜಲ್ ಅಗರ್ವಾಲ್ ಜೊತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿ: ನೆಟ್ಟಿಗರ ಆಕ್ರೋಶ

ರಷ್ಯಾ- ಉಕ್ರೇನ್ ಯುದ್ಧ: ಹೈದರಾಬಾದ್ ಯುವಕ ಸಾವು

ನೀರಿನ ಸಮಸ್ಯೆ ಪರಿಹರಿಸಲು BWSSB ಚೇರ್ಮನ್‌ರನ್ನು ಭೇಟಿಯಾಗಿ ಸಲಹೆ ನೀಡಿದ ಸಂಸದ ತೇಜಸ್ವಿ ಸೂರ್ಯ

About The Author