- Advertisement -
www.karnatakatv.net :ರಾಯಚೂರು: ಅಣ್ಣನ ಅಗಲಿಕೆಯ ಸುದ್ದಿ ತಿಳಿದು ತಂಗಿಯೂ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಜಿಲ್ಲೆಯ ಹುಣಸಿಹಾಳ ಹುಡಾ ಗ್ರಾಮದ ನಿವಾಸಿ ನಿನ್ನೆ ರಾತ್ರಿ ನರಸಪ್ಪ ಹೀರಾ (65) ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ರು. ಆದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ನರಸಪ್ಪ ಮೃತಪಟ್ಟಿದ್ದಾರೆ. ಇನ್ನು ಸುದ್ದಿ ತಿಳಿದು ಗಾಬರಿಗೊಂಡ ಅವರ ಸಹೋದರಿ ಸಿದ್ದಮ್ಮ(50) ಕೂಡ ರಕ್ತದೊತ್ತಡ ಕಡಿಮೆಯಾಗಿ ಸಾವನ್ನಪ್ಪಿದ್ದಾರೆ.
ಈ ಮೂಲಕ ಪ್ರೀತಿ-ವಿಶ್ವಾಸದಿಂದ ಬಾಳಿ ಬದುಕಿದ್ದ ಅಣ್ಣ-ತಂಗಿಯರ ಸಾವಿನಲ್ಲೂ ಒಂದಾಗಿದ್ದಾರೆ.
ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು
- Advertisement -