Banglore News:
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕರ‍್ಟ್ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ಗೆ ಆದೇಶ ನೀಡಿದೆ. ಕಳೆದ ವಾರ ಈ ಪ್ರಕರಣ ಸಂಬಂಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಇಂದು ವಿಚಾರಣೆ ನಡೆದಿದ್ದು ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರುಪಾಕ್ಷಪ್ಪ ಯಮಕನಮರಡಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ ಪ್ರತಿಭಟನೆ
ಸಾರಿಗೆ ನೌಕರರ ನಿರಂತರ ಆತ್ಮಹತ್ಯೆ ಹಿನ್ನಲೆ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ