ಕೇಂದ್ರದಲ್ಲಿ ದಲಿತ ಸಂಸದರನ್ನು ಮಂತ್ರಿಯನ್ನಾಗಿ ಮಾಡುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ. ತಾಕತ್ತಿದ್ದರೆ ದಲಿತ ವ್ಯಕ್ತಿಯನ್ನು ರಾಜ್ಯದಲ್ಲಿ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇರ ಸವಾಲೆಸೆದರು.
ನೂತನವಾಗಿ ಆಯ್ಕೆಯಾಗಿರುವ ಬಿಜೆಪಿಯ 25ಸಂಸದರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಗರದ ಅರಮನೆ ಮೈದಾನದಲ್ಲಿ ನಡೆಯಿತು.ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಷಿ, ಅನಂತಕುಮಾರ್ ಹೆಗಡೆ ಮಾತ್ರ ಗೈರಾಗಿದ್ದು ಉಳಿದ ಎಲ್ಲರೂ ಹಾಜರಿದ್ದರು.
ಲೋಕಸಭಾ ಚುನಾವಣಾ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .
ಯಡಿಯೂರಪ್ಪ,ರಾಜ್ಯದಲ್ಲಿ ಏಳಕ್ಕೆ ಏಳು ಮೀಸಲು ಕ್ಷೇತ್ರವನ್ನು ಗೆದ್ದರೂ ಒಬ್ಬರನ್ನೂ ಮಂತ್ರಿ ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕರಿಬ್ಬರು ಹೇಳಿದ್ದಾರೆ.ಕೇಂದ್ರದಲ್ಲಿ ದಲಿತ ಮುಖಂಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ. ನಿಮಗೆ ತಾಕತ್ತಿದ್ದರೆ ದಲಿತ ಸಿಎಂ ಮಾಡಿ ತೋರಿಸಿ ಎಂದು ಸವಾಲೆಸೆದರು.
ರಾಜ್ಯದಲ್ಲಿ ಬರ ಇದೆ ಸಚಿವರು,ಸಿಎಂ,ಅಧಿಕಾರಿಗಳು ಅಲ್ಲಿಗೆ ಹೋಗಲಿಲ್ಲ, ವಿಧಾನಸೌಧ ಖಾಲಿ ಇದೆ ಇಂತಹ ಸ್ಥಿತಿಯಲ್ಲಿ ನಾವು ಜನರ ಸಂಕಷ್ಟಕ್ಕೆ ಸ್ಪಂಧಿಸುವ ಕೆಲಸ ಮಾಡಬೇಕಿದೆ ಎಂದು ಕಿಡಿ ಕಾರಿದರು