Saturday, July 5, 2025

Latest Posts

BSY ಬಂಧನ ಫಿಕ್ಸ್, ಯಡಿಯೂರಪ್ಪ ಬಂಧನಕ್ಕೆ ಪೊಲೀಸ್ ಹುಡುಕಾಟ

- Advertisement -

Political News: ಪೋಕ್ಸೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರ ಬಂಧನ ನಿಶ್ಚಿತವಾಗಿದೆ.

ಬಿಎಸ್​ವೈಗೆ ಸಿಐಡಿ ಮಂಗಳವಾರ ದಿಢೀರ್‌ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇನ್ನೊಂದೆಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶ ಕೋರಿ ಹೈಕೋರ್ಟ್‌ನಲ್ಲಿ ಸಂತ್ರಸ್ತೆಯ ಸಹೋದರ ಮನವಿ ಮಾಡಿದ್ದಾರೆ.

ಜೂನ್ 12ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ​ವಾರಂಟ್ ಹೊರಡಿಸಲು ಪೊಲೀಸರು ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಯಡಿಯೂರಪ್ಪ ಬಂಧನವಾಗುವುದು ಬಹುತೇಕ ಪಕ್ಕಾ ಆಗಿದೆ.

Sandalwood News: ದರ್ಶನ್ ಬಿಡುಗಡೆಗಾಗಿ ಸಚಿವರಿಂದ 128 ಬಾರಿ ಕರೆ!

ಯಡಿಯೂರಪ್ಪ ಬಂಧನ? ಪೋಕೋ ಕೇಸ್​ನಲ್ಲಿ ಬಿಎಸ್​ವೈ ಬಂಧನಕ್ಕೆ ಸಿದ್ಧತೆ..!

- Advertisement -

Latest Posts

Don't Miss