Thursday, April 17, 2025

Latest Posts

15ನೇ ವಿಧಾನಸಭೆಯ ಕೊನೆಯ ಅಧಿವೇಶನದಲ್ಲಿ ಬಿಎಸ್ ವೈ ಭಾವುಕ ಭಾಷಣ…!

- Advertisement -

Political News:

Feb:24: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ. ವಿಧಾಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ವಿದಾಯ ಭಾಷಣ ಮಾಡಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು ನಿರ್ದಿಷ್ಟಾವಧಿಗೆ ಮುಂದೂಡಿದರು. ವಿಧಾನಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಈ ಸದನದವನ್ನು ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಯಶಸ್ವಿಯಾಗಿ ನಡೆಸಿದ್ದಾರೆ. ನೀವು ಮುಂದಿನ ಬಾರಿ ಮಂತ್ರಿಯಾಗಿ ಇಲ್ಲಿ ಕೂರಬೇಕು. ಇಲ್ಲಿ ಮಹಿಳೆಯರು ಹೆಚ್ಚು ಆಯ್ಕೆ ಆಗಬೇಕು ಎಂದು ಹೇಳಿದರು.

ಮಾಜಿ ಸಿಎಂ ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರನ್ನು ಹೊಗಳಿರುವುದು ಜೆಡಿಸ್ ಪಕ್ಷವನ್ನು ಟೀಕಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಉತ್ತರ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಅಧಿವೇಶನದಲ್ಲಿ ತಮ್ಮ ವಿದಾಯ ಭಾಷಣವನ್ನು ಯಡಿಯೂರಪ್ಪ ಅವರು ಮಾಡಿದ್ದಾರೆ. ಅವರ ಈ ವಿಚಾರವನ್ನು ನಾನು ಸ್ವಾಗತ ಮಾಡುತ್ತೇನೆ. ಇದು ಯಡಿಯೂರಪ್ಪ ಅವರ ದೊಡ್ಡತನವೂ ಹೌದು. ದೇವೇಗೌಡರ ವ್ಯಕ್ತಿತ್ವ ಹಾಗೇ ಇದೆ. ಅವರು ರಾಜಕೀಯ ಅನುಭವ ರಾಜ್ಯದ ಸಮಸ್ಯೆಗಳಿಗೆ ಸ್ಷಂಧಿಸಿದ್ದಾರೆ ಎಂದು ಹೇಳುವ ಮೂಲಕ ತಂದೆಯ ಕಾರ್ಯ ವೈಖರಿಯನ್ನು ಕೊಂಡಾಡಿದರು.

ನಾನು, ಸ್ಪೀಕರ್, ಆರಗ ಜ್ಞಾನೇಂದ್ರ ಎಲ್ಲರೂ 94ರ ಬ್ಯಾಚ್​​​ನವರು. ಹೆಚ್​​ಡಿಡಿ, ಖರ್ಗೆ, ವಾಟಾಳ್ ನಾಗರಾಜ್ ಎಲ್ಲರೂ ದೊಡ್ಡವರಿದ್ದರು. ನಾವೆಲ್ಲರೂ ಲಾಸ್ಟ್ ಬೆಂಚ್​​ನಲ್ಲಿ ಕೂರುತ್ತಿದ್ದೆವು. ಮಾಜಿ ಸಿಎಂ B.S​.ಯಡಿಯೂರಪ್ಪನಮ್ಮನ್ನೆಲ್ಲ ಮುನ್ನಡೆಸುತ್ತಿದ್ದರು. ಸುಮ್ಮನೇ ಕೂತ್ಕೊಳ್ಳಿ ಎಂದು ನಮ್ಮನ್ನು ಗದರುತ್ತಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿ, 2 ಬಾರಿ ಸಂಸದ, ಒಂದು ಬಾರಿ MLC, 2 ಬಾರಿ ವಿಧಾನಸಭೆಗೆ ಆಯ್ಕೆ ಆಗಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಅನ್ಯಾಯ ಆದಾಗ ಧ್ವನಿ ಎತ್ತಿದ್ದೇನೆ. ಇಲ್ಲಿಯೂ ಅನ್ಯಾಯವಾದಾಗ ಮಾತನಾಡಲು ಅವಕಾಶ ನೀಡಿದ್ದೀರಿ. BSY ಜತೆ ಏನೇ ವೈಷಮ್ಯ ಇರಬಹುದು, ಅವರು ನಮ್ಮ ನಾಯಕರು. ರಾಜ್ಯದಲ್ಲಿ ಪಕ್ಷ ಕಟ್ಟಿದ್ದು ಬಿ.ಎಸ್.ಯಡಿಯೂರಪ್ಪ, ಅನಂತಕುಮಾರ್ ಎಂದು ಹೇಳಿದರು. ಸದ್ಯ ಪಕ್ಷ ಕಟ್ಟಿ ಕೊನೆವರೆಗೂ ಉಳಿದವರು ಯಡಿಯೂರಪ್ಪ ಅವರು. ಈಗ ಸ್ಪರ್ಧಿಸಲ್ಲ ಪುತ್ರನನ್ನು ರೆಡಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಕೆಲವರು ಸಾಯೋವರೆಗೂ ಶಾಸಕನಾಗೇ ಉಳಿಯಬೇಕು ಅಂತಿದ್ದಾರೆ. ಬಿಎಸ್​ವೈ ನನ್ನನ್ನೂ ಮಂತ್ರಿ ಮಾಡಲಿಲ್ಲ, ನಿಮ್ಮನ್ನೂ ಮಂತ್ರಿ ಮಾಡ್ಲಿಲ್ಲ. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನನ್ನನ್ನ ಶಿಕ್ಷಣ ಮಂತ್ರಿ ಮಾಡಿದ್ರು, ನಿಮ್ಮನ್ನು ಕೇಂದ್ರ ಮಂತ್ರಿ ಮಾಡಿದ್ದರು. ನಾನು ಮುಖ್ಯಮಂತ್ರಿ ಆಗ್ತೀನಿ ಎಂದು ಮಂತ್ರಿ ಮಾಡಲಿಲ್ಲ ಎಂದು ಯತ್ನಾಳ್ ಹೇಳಿದರು. ಅದೇನೇ ಇರಲಿ ಬಿ.ಎಸ್​.ಯಡಿಯೂರಪ್ಪ ಅವರು ನನ್ನನ್ನು ಬೆಳೆಸಿದ್ರು ಎಂದರು.

ದೊಡ್ಡಬಳ್ಳಾಪುರ ಬಿಜೆಪಿಗೆ ಧೀರಜ್ ಮುನಿರಾಜು ಫಿಕ್ಸ್.!

ಮಹಿಳೆಯರ ಸಬಲೀಕರಣಕ್ಕೆ ಪುಟ್ಟಸ್ವಾಮಿಗೌಡ ಪಣ.!

ಶೀಘ್ರವೇ ಕಾಂಗ್ರೆಸ್ ಸೇರಲಿರೋ ಶಾಸಕ ಶ್ರೀನಿವಾಸ್..!

 

- Advertisement -

Latest Posts

Don't Miss