ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ರಾಜಕೀಯ ನಾಯಕರ ಕೆಸರೆರಚಾಟ ಮುಂದುವರಿದಿದೆ. ಜಿಂದಾಲ್ ಭೂಮಿ ವಿಚಾರವಾಗಿ ಯಡಿಯೂರಪ್ಪ ಸಿಎಂ ಆಗಿದ್ದಾಗ 20 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ರು ಅಂತ ಹೇಳಿದ್ದ ಸಿಎಂಗೆ ಬಿಎಸ್ ವೈ ಖಡಕ್ ಉತ್ತರ ನೀಡಿದ್ದಾರೆ.
ಜಿಂದಾಲ್ ಭೂಮಿ ಪರಭಾರೆ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿದ್ದ ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿದ್ದು ಹೊಣೆಗೇಡಿತನದಿಂದ ಮಾತನಾಡುವುದು ಸರಿಯಲ್ಲ. ಸಿಬಿಐ ನ್ಯಾಯಾಲಯ ನನ್ನನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿದೆ. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುವಂತೆ ಹಗುರವಾಗಿ ಮಾತಾಡಬೇಡಿ. ಆಡಳಿತದಲ್ಲಿ ಸಂಪೂರ್ಣ ವಿಫಲರಾಗಿ, ದಿಕ್ಕೆಟ್ಟಿರುವ ನೀವು, ನಿಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ವ್ಯರ್ಥಪ್ರಯತ್ನ ಮಾಡಬೇಡಿ ಅಂತ ಟ್ವೀಟ್ ಮಾಡೋ ಮೂಲಕ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಕಳ್ಳೆತ್ತು ಅಂದವರಿಗೆ ಸೈಲೆಂಟಾಗೇ ಉತ್ತರ ಕೊಟ್ಟ ಜೋಡೆತ್ತುಗಳು…!! ಮಿಸ್ ಮಾಡದೇ ಈ ವಿಡಿಯೋ ನೋಡಿ