- Advertisement -
www.karnatakatv.net: ರಾಷ್ಟ್ರೀಯ- ಢಾಕಾ- ಜನನಿಬಿಡ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಿಂದ ಮೂರಂತಸ್ಥಿನ ಕಟ್ಟಡ ಕುಸಿದು 7 ಮಂದಿ ಸಾವನ್ನಪ್ಪಿ, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಇಲ್ಲವೇ ಗ್ಯಾಸ್ ಲೈನ್ ಸ್ಫೋಟಿಸಿ ಈ ದುರಂತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಘಟನೆ ಹಿಂದೆ ಯಾವುದೇ ಉಗ್ರ ಸಂಘಟನೆಯ ಕೈವಾಡವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಸುಮಾರು 12ಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಾಯಗೊಂಡವರಲ್ಲಿ 50 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಕಟ್ಟಡಗಳಿಗೆ ಅಳವಡಿಸಲಾಗಿದ್ದ ಗಾಜಿನ ಚೂರುಗಳು ಗಾಳಿಯಲ್ಲಿ ಚದುರಿ ಹೋಗಿದ್ದರಿಂದ ಹೆಚ್ಚಿನ ಮಂದಿಗೆ ಹಾನಿಯಾಗಿರುವುದು ಕಂಡು ಬಂದಿದೆ.
- Advertisement -