Monday, November 17, 2025

Latest Posts

ನಿರುದ್ಯೋಗಿ ಪದವೀಧರರಿಗೆ ಬಂಪರ್ ಗಿಫ್ಟ್!

- Advertisement -

ಬಿಹಾರದಲ್ಲಿ ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿಎಂ ನಿತೀಶ್ ಕುಮಾರ್ ಸಜ್ಜಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ನಿರುದ್ಯೋಗಿ ಯುವಕರನ್ನ ಉದ್ದೇಶಿಸಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮುಖ್ಯಮಂತ್ರಿ ನಿಶ್ಚಯ ಸ್ವಯಂ ಸಹಾಯ ಭತ್ಯೆ ಯೋಜನೆಯ ಅಡಿಯಲ್ಲಿ ಪದವೀಧರರಿಗೂ ಮಾಸಿಕ 1000 ರೂ. ಸಹಾಯಧನವನ್ನು ನೀಡಲಾಗುವುದಾಗಿ ಘೋಷಿಸಿದ್ದಾರೆ.

ಈ ಹಿಂದೆ ಈ ಯೋಜನೆಯ ಲಾಭವನ್ನು ಕೇವಲ ಇಂಟರ್‌ಮಿಡಿಯೇಟ್ ಅಂದ್ರೆ ಪದವಿಪೂರ್ವ ಪಾಸ್ ಮಾಡಿರುವ ನಿರುದ್ಯೋಗಿಗಳಿಗಷ್ಟೇ ನೀಡಲಾಗುತ್ತಿತ್ತು. ಆದರೆ ಈಗ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಪದವಿ ಪೂರೈಸಿರುವ ನಿರುದ್ಯೋಗಿ ಯುವಕರಿಗೂ ಈ ಯೋಜನೆಯ ಲಾಭ ದೊರೆಯಲಿದೆ.

ನಿತೀಶ್ ಕುಮಾರ್ ಅವರು ಸಾಮಾಜಿಕ ಜಾಲತಾಣ X ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಏಳು ನಿಶ್ಚಯ ಯೋಜನೆಗಳ ಭಾಗವಾಗಿ ಈ ಯೋಜನೆಯನ್ನು ವಿಸ್ತರಿಸಲಾಗುತ್ತಿದೆ. 20 ರಿಂದ 25 ವರ್ಷ ವಯಸ್ಸಿನ ಸರ್ಕಾರಿ ಅಥವಾ ಖಾಸಗಿ ಉದ್ಯೋಗವಿಲ್ಲದ, ಸ್ವಯಂ ಉದ್ಯೋಗದಲ್ಲಿ ಇಲ್ಲದ ಹಾಗೂ ಹೆಚ್ಚಿನ ಅಧ್ಯಯನ ಮಾಡದ ಯುವಕರು ಈ ಯೋಜನೆಯ ಲಾಭ ಪಡೆಯಬಹುದು ಎಂದು ತಿಳಿಸಿದ್ದಾರೆ.

ಯೋಜನೆಯಡಿಯಲ್ಲಿ ಆಯ್ಕೆ ಆಗುವ ಅರ್ಹ ಅಭ್ಯರ್ಥಿಗಳಿಗೆ ಎರಡು ವರ್ಷಗಳ ಕಾಲ ಪ್ರತಿ ತಿಂಗಳು ₹1000 ಹಣ ಸಹಾಯಧನವಾಗಿ ನೀಡಲಾಗುವುದು. ಇದರಿಂದ ಯುವಕರು ತರಬೇತಿ ಪಡೆಯಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಯುವಕರು ಸ್ವಾವಲಂಬಿ, ಕೌಶಲ್ಯಪೂರ್ಣ ಮತ್ತು ಉದ್ಯೋಗಪಡೆಯುವಂತೆ ಮಾಡುವುದೇ ಈ ಯೋಜನೆಯ ಉದ್ದೇಶ. ಇವರು ಭವಿಷ್ಯದಲ್ಲಿ ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಮಹತ್ತರವಾದ ಕೊಡುಗೆ ನೀಡಬಲ್ಲರು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ವರದಿ : ಲಾವಣ್ಯ ಅನಿಗೋಳ

 

- Advertisement -

Latest Posts

Don't Miss