- Advertisement -
www.karnatakatv.net: ರಾಜ್ಯದಲ್ಲಿ ಹಾನಗಲ್ ಮತ್ತು ಸಿಂಧಗಿ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಇಂದು ಉಪ ಚುನಾವಣೆ ನಡೆಯಲಿದೆ.
ಸಿ.ಎಂ.ಉದಾಸಿ ಮತ್ತು ಎಂ.ಸಿ.ಮನಗೂಳಿ ನಿಧನದಿಂದ ತೆರವಾದ ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ ಇಂದು ನಡೆಯಲಿದೆ. ಇಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ. ನ.2ರಂದು ಮತ ಏಣಿಕೆ ನಡೆಯಲಿದೆ. 3 ಲೋಕಸಭಾ ಕ್ಷೇತ್ರಗಳು, 29 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯಲಿದೆ. ಸಿಂಧಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹಾನಗಲ್ ಕ್ಷೇತ್ರ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾವಿ ಕ್ಷೇತ್ರದ ಪಕ್ಕದ ಕ್ಷೇತ್ರವಾಗಿದ್ದು, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಮುಖ್ಯಮಂತ್ರಿಗಳ ಮುಂದಿದೆ.
- Advertisement -

