- Advertisement -
Haveri News: ಹಾವೇರಿ: ನಾಳೆ ಕರ್ನಾಟಕ ಉಪಚುನಾವಣೆ ಮತ ಎಣಿಕೆ ಹಿನ್ನೆಲೆ, ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಹಿನ್ನೆಲೆ, ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ ನಡೆಸಲಾಗಿದೆ.
ನಾಳೆ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಬೆಳಿಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಮ್ ಓಪನ್ ಆಗಲಿದ್ದು, ಮತ ಎಣಿಕೆಗೆ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ ಗೆ ಒಬ್ಬ ಎಣಿಕಾ ಮೇಲ್ವಿಚಾರಕ, ಒಬ್ಬರು ಸಹಾಯಕರು,ಒಬ್ಬರು ಮೈಕ್ರೋ ಅಬ್ಸರ್ವರ್ ನಿಯೋಜನೆ ಮಾಡಲಾಗಿದೆ.
ಒಟ್ಟು 241 ಮತಗಟ್ಟೆಗಳಿದ್ದು 18 ಸುತ್ತಗಳ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕೇಂದ್ರದ ಸುತ್ತ 200 ಮೀ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಭದ್ರತೆಗಾಗಿ ನಾಲ್ಕು ತುಕಡಿ ಡಿಎಆರ್, ಎರಡು ಕೆಎಸ್‌ಆರ್‌ಪಿ,ಸಿವಿಎಲ್ ಪೊಲೀಸರ ನಿಯೋಜನೆ ಮಾಡಲಾಗಿದೆ.
- Advertisement -