ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರೋ ಬಿಕ್ಕಟ್ಟು ಪರಿಹಾರಕ್ಕಾಗಿ ದೋಸ್ತಿಗಳು ನಾನಾ ರೀತಿಯ ತಂತ್ರಗಳ ಮೊರೆ ಹೋಗಿದ್ದಾರೆ. ಇಂದು ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ನಾನು ಸರ್ಕಾರ ಬಿಡೋದಿಲ್ಲ, ಎಲ್ಲರೂ ಒಗ್ಗಟ್ಟಾಗಿ ನಿಲ್ಲೋಣ ಅಂತ ಸಂಪುಟ ಸಹೋದ್ಯೋಗಿಗಳಲ್ಲಿ ಮನವಿ ಮಾಡಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು ಎದುರಾಗುತ್ತಿದ್ದಂತೆಯೇ ದಿನೇ ದಿನೇ ರಾಜಕೀಯ ಚದುರಂಗದಾಟ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಇಂದು ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಅತೃಪ್ತರಿಂದಾಗಿ ಎದುರಾಗಿರುವ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದ್ರು. ಅಲ್ಲದೆ ತಾವು ಯಾವುದೇ ಕಾರಣಕ್ಕೂ ಸರ್ಕಾರವನ್ನು ಬಿಟ್ಟುಕೊಡೋದಿಲ್ಲ, ಎಲ್ಲರೂ ಒಗ್ಗಟ್ಟಾಗಿ ನಿಲ್ಲೋಣ ಅಂತ ಸಚಿವರಲ್ಲಿ ಮನವಿ ಮಾಡುತ್ತಾ ಒಗ್ಗಟ್ಟಿನ ಮಂತ್ರ ಬೋಧಿಸಿದ್ದಾರೆ ಎನ್ನಲಾಗಿದೆ.
ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಎಲ್ಲಾ ರೀತಿಯ ಹೋರಾಟ ಮಾಡೋಣ. ಆತೃಪ್ತರ ಮನವೊಲಿಕೆ ಅಲ್ಲದೆ ನಮ್ಮ ಬಳಿ ಬೇರೆ ಬೇರೆ ಆಯ್ಕೆಗಳಿವೆ. ಕಾನೂನು ಹೋರಟಕ್ಕೂ ಸಿದ್ಧರಿದ್ದೇವೆ. ಹೀಗಾಗಿ ಸರ್ಕಾರ ಉಳಿಯುವ ಭರವಸೆ ನನಗಿದೆ. ಎಲ್ಲರೂ ಒಟ್ಟಾಗಿ ನಿಂತು ಹೋರಾಟ ಮಾಡೋಣ ಅಂತ ಸಿಎಂ ಕುಮಾರಸ್ವಾಮಿ ಸಂಪುಟ ಸಹೋದ್ಯೋಗಿಗಳಲ್ಲಿ ವಿಶ್ವಾಸ ಮೂಡಿಸಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲರ ಮಾತು ಕೇಳಿ ಬಿಎಸ್ವೈ ಸುಸ್ತಾದ್ರಾ..?ಮಿಸ್ ಮಾಡದೇ ಈ ವಿಡಿಯೋ ನೋಡಿ