www.karnatakatv.net : ಚಾಮರಾಜನಗರ: ನೂತನ ಚಾಮರಾಜೇಶ್ವರ ರಥದ ಚಕ್ರಕ್ಕೆ ಪೂಜೆ ನೆರವೇರಿಸಿ ರಥದ ಚಕ್ರಗಳನ್ನು ಬರಮಾಡಿಕೊಂಡ ಶಾಸಕ ಸಿ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ದೇವಸ್ಥಾನಕ್ಕೆ ನೂತನ ರಥದ ಚಕ್ರಗಳನ್ನು ಬರಮಾಡಿಕೊಂಡ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿ ಮಾಜಿ ಸಚಿವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಪುಟ್ಟರಂಗಶೆಟ್ಟಿ ಅವರು ಮಾಜಿ ಮುಖ್ಯಮಂತ್ರಿ ಇಂದಿನ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ನೂತನ ರಥ ನಿರ್ಮಾಣ ಕಾಮಗಾರಿ 1 ಕೋಟಿ 20 ಲಕ್ಷ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದರು ದೇವಸ್ಥಾನದ ಅಭಿವೃದ್ಧಿಗೆ 2 ಕೋಟಿ 50 ಲಕ್ಷ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿ ಸಮಗ್ರ ಶ್ರೀ ಚಾಮರಾಜೇಶ್ವರ ದೇವಸ್ಥಾನ ಮತ್ತು ರಥದ ಅಭಿವೃದ್ಧಿಗೆ ಅನುದಾನವನ್ನು ಬಿಡುಗಡೆ ಮಾಡಿದ ಅಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮನವರ ಸ್ಮರಿಸಿದ ಶಾಸಕರು ಈ ಸಂದರ್ಭದಲ್ಲಿ ಸ್ಮರಿಸಿ ಅವರಿಗೆ ಚಾಮರಾಜನಗರ ಜನತೆ ಪರವಾಗಿ ಹಾಗೂ ವೈಯಕ್ತಿಕವಾಗಿ ಅಭಿನಂದನೆಗಳನ್ನು ತಿಳಿಸಿದರು.
ಕರ್ನಾಟಕ ಟಿವಿ ಚಾಮರಾಜನಗರ