National Political News: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದಾರೆ. ಹಲವು ದಿನಗಳಿಂದ ಈ ಬಗ್ಗೆ ಮಾತನಾಡುತ್ತಿದ್ದ ಗೃಹಸಚಿವ ಅಮಿತ್ ಶಾ ಕೊನೆಗೂ, ದೇಶದಲ್ಲಿ ಸಿಎಎ ಜಾರಿಗೊಳಿಸಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದರು. ಅದೇ ರೀತಿ 2019ರ ಡಿಸೆಂಬರ್‌ನಲ್ಲಿ ಅಂಗೀಕಾರಗೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಇಂದು ಜಾರಿಗೊಳಿಸಲಾಗಿದೆ. ಈ ಕಾಯ್ದೆ ಪ್ರಕಾರ, 2014ಕ್ಕೂ ಮುನ್ನ ಯಾರು ಭಾರತಕ್ಕೆ ಬಂದು ನೆಲೆಸಿದ್ದಾರೋ, ಅವರು ಭಾರತಕ್ಕೆ ಬಂದು 6 ವರ್ಷ ಪೂರ್ಣಗೊಂಡಿದ್ದರೆ, ಅವರಲ್ಲಿ ಮುಸ್ಲಿಮೇತರರಿಗೆ ಅಂದ್ರೆ, ಕ್ರಿಶ್ಚಿಯನ್, ಸಿಕ್, ಬೌದ್ಧ ಪಾರ್ಸಿ, ಜೈನ ಸಮುದಾಯದವರಿಗೆ ಭಾರತೀಯ ಪೌರತ್ವ ನೀಡಲಾಗುತ್ತದೆ.
ಈ ಮೊದಲು ಭಾರತಕ್ಕೆ ಬಂದು 11 ವರ್ಷ ನೆಲೆಸಿದವರಿಗೆ ಪೌರತ್ವ ನೀಡಲಾಗುತ್ತಿತ್ತು. ಅದನ್ನು ಈಗ 6 ವರ್ಷವೆಂದು ತಿದ್ದುಪಡಿ ಮಾಡಲಾಗಿದೆ. ಅಂದರೆ, ಭಾರತದಲ್ಲಿ 6 ವರ್ಷಕ್ಕೂ ಹೆಚ್ಚು ನೆಲೆಸಿದ್ದರೆ, ಅಂಥವರು ಭಾರತೀಯ ಪೌರತ್ವ ಪಡೆದುಕೊಳ್ಳಬಹುದು.
ಇನ್ನು ಕಾನೂನು ಜಾಾರಿಗೆ ಬಂದ ತಕ್ಷಣವೇ ದೇಶದ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಏಕೆಂದರೆ, ಪೌರತ್ವ ತಿದ್ದುಪಡಿ ಕಾಯ್ದೆ ಮಾಡಬೇಕು ಎಂಬ ವಿಚಾರ ಚರ್ಚೆಯಾಗಿದ್ದಾಗಲೇ, ತೀವ್ರ ವಿರೋಧ ವ್ಯಕ್ತಪಡಿಸಿ, ಗಲಾಟೆ ಮಾಡಲಾಗಿತ್ತು. ಹಾಗಾಗಿ ಇಂಥ ಗಲಾಟೆ ಆಗಕೂಡದು ಎಂದು ಪೊಲೀಸ್ ಬಂಂದೋಬಸ್ತ್ ಏರ್ಪಡಿಸಲಾಗಿದೆ.
ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ ಸೊಸೆ: ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ