Thursday, September 19, 2024

Latest Posts

ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ: ಸಿಎಂ ಸಿದ್ದರಾಮಯ್ಯ

- Advertisement -

Political News: ಇಂದು ಕಲಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು, ಇದಕ್ಕಾಗಿ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ನಮ್ಮ ಸರ್ಕಾರವೇ ಪ್ರಯತ್ನಿಸಿದ್ದು ಹೊರತು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿತ್ತು. ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್‌ಪೆಕ್ಟರನ್ನು ಅಮಾನತ್ತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟು, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest Posts

Don't Miss