ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ.
ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ
ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21 ವರ್ಷ ವಯಸ್ಸಿನ ಕಾರಿನಲ್ಲಿದ್ದವರು ಶಿವಮೊಗ್ಗದಿಂದ ದಾವಣಗೆರೆಗೆ ವಾಪಸಾಗುತ್ತಿದ್ದರು. ಮೃತರನ್ನು ಕಾರ್ತಿಕ್, ವಿವೇಕ್ ಮತ್ತು ಮೋಹನ್ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ರುದ್ರೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು : ಗೃಹ ಸಚಿವ ಆರಗ ಜ್ಞಾನೇಂದ್ರ