Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ, ಮಾತನಾಡಿದರು.
ಇದೇ ವೇಳೆ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿಗೆ ಫ್ರೀ ಎಂಜಿನಿಯರಿಂಗ್ ಸೀಟ್ ಕೊಡುವುದಾಗಿ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಮೂಲಕ ವಿದ್ಯಾರ್ಥಿ ಸುಚಿವ್ರತ್‌ಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಮಾತನಾಡಿರುವ ಸಚಿವರು, ಇಂಥ ಘಟನೆ ಮತ್ತೆ ಮರುಕಳಿಸದಂತೆ ಸೂಚಿಸಲಾಗಿದೆ. ಈ ಘಟನೆ ನಡೆಯಬಾರದಿತ್ತು. ಈ ಬಗ್ಗೆ ನನ್ನ ಗಮನಕ್ಕೆ ಬಂದ ತಕ್ಷಣ ವರದಿ ನೀಡಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿತ್ತು. ವರದಿ ಆಧರಿಸಿ, ತಪ್ಪಿತಸ್ಥರಿಗೆ ಶಿಕ್ಷೆಯೂ ನೀಡಿಯಾಗಿದೆ ಎಂದು ಸಚಿವರು ಹೇಳಿದ್ದಾರೆ.
ಇನ್ನು ಶಿವಮೊಗ್ಗದಲ್ಲಿ ಮತ್ತು ಧಾರವಾಡದಲ್ಲೂ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ, ಪರೀಕ್ಷೆ ಬರೆಯಲು ಹೇಳಲಾಗಿದೆ. ಹೀಗಾಗಿ ಆಯಾ ಜಿಲ್ಲೆಗಳಲ್ಲೂ ಬ್ರಾಹ್ಮಣ ಸಂಘದವರು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಇದೇ ವಿಚಾರವಾಗಿ ರಾಜಕಾರಣಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಇಂಥ ರೂಲ್ಸ್ ಎಲ್ಲ ನಾವು ತಂದೇ ಇಲ್ಲ. ಇದು ಸತ್ಯಕ್ಕೂ ಖಂಡನೀಯ ಎಂದಿದ್ದಾರೆ.