ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು.
ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳ ಪೈಕಿ ಹಾಸನ ಜಿಲ್ಲೆಯಲ್ಲಿ ನಡೆದಿರುವ ಕಳ್ಳತನ ಪ್ರಕರಣಗಳಲ್ಲಿ ಒಡವೆ ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಶ ಪಡಿಸಿಕೊಂಡಿರುವುದು ವಿರಳ. ಆದರೆ ಹಾಸನ ಜಿಲ್ಲೆಯಲ್ಲಿ ಶೇಕಡಾ 50 ಕ್ಕಿಂತ ಹೆಚ್ಚಿನ ಮೊತ್ತದ ನಗದು ಹಾಗೂ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದರು.
ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿಗಳ ಪರಿಶ್ರಮದಿಂದ ಇದು ಸಾಧ್ಯವಾಗಿದ್ದು, ಎಲ್ಲಾ ಪೊಲೀಸರಿಗೂ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ. ಸುರಕ್ಷತಾ ದೃಷ್ಟಿಯಿಂದ ಪ್ರತಿ ಮನೆಯಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ, ಮನೆಯಿಂದ ಹೊರಗೆ ಹೋಗುವಾಗ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಅಗತ್ಯ ಎಂದು ಸಲಹೆ ನೀಡಿದರು.
ತಮ್ಮ ಮನೆಯಲ್ಲಿ ಇರುವ ಹಣ, ಒಡವೆ ಹಾಗೂ ಬೆಲೆಬಾಳುವ ವಸ್ತುಗಳನ್ನು ಆದಷ್ಟು ಬ್ಯಾಂಕ್ ಗಳಲ್ಲಿ ಭದ್ರವಾಗಿ ಇಡುವುದು ಉತ್ತಮ. ವಾರಗಟ್ಟಲೆ ಹೊರಗೆ ಹೋಗುವವರು, ಬೀಟ್ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ, ಪೊಲೀಸ್ರು ತಮ್ಮ ಮನೆಯ ಬಳಿ ಬೀಟ್ ಹಾಕುವ ಮೂಲಕ ಭದ್ರತೆ ಒದಗಿಸುವ ಕೆಲಸ ಮಾಡಲಿದ್ದಾರೆ. ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಬಿಕೆ ರವಿಕಾಂತ್ ಮಾತನಾಡಿ, ಅಪರಾಧ ಪ್ರಕರಣಗಳಲ್ಲಿ ಮುನ್ನೆಚ್ಚರಿಕೆ ವಹಿಸುವುದು ಬಹಳ ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ವಿಚಾರಕ್ಕೆ ಗಲಾಟೆ, ಘರ್ಷಣೆಗಳು ನಡೆದು ಚಿಕ್ಕ ವಯಸ್ಸಿಗೇ ನ್ಯಾಯಾಲಯದ ಮೆಟ್ಟಿಲೇರುವ ಪ್ರಕರಣಗಳು ಕಂಡು ಬರುತ್ತಿವೆ, ಎಂದು ವಿಷಾದ ವ್ಯಕ್ತಪಡಿಸಿದರು.
ಲೋಕ್ ಅದಾಲತ್ ಮೂಲಕ ಅನೇಕ ಪ್ರಕರಣಗಳನ್ನು ಇತ್ಯರ್ಥ ಮಾಡುವ ಕೆಲಸವನ್ನು ಜಿಲ್ಲಾ ನ್ಯಾಯಾಲಯದ ಮೂಲ ಕ ಮಾಡಲಾಗುತ್ತಿದ್ದು, ಜನರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು. ಈ ಸಂಧರ್ಭದಲ್ಲಿ ಸಕಲೇಶಪುರ ವಿಭಾಗದ ಅಪರ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್, ಹಾಸನ ಉಪ ವಿಭಾಗದ ಡಿ.ವೈ.ಎಸ್.ಪೀ ಉದಯ್ ಭಾಸ್ಕರ್, ಅರಸೀಕೆರೆ ಉಫ ವಿಭಾಗದ ಲೋಕೇಶ್ ಇತರರು ಇದ್ದರು.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .