ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್ಫಾರ್ಮರ್ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ ಮತ್ತೊಂದು ದಿಟ್ಟ ಹೆಜ್ಜೆಯನ್ನಿಟ್ಟಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು, ಫುಟ್ಪಾತ್ಗಳಲ್ಲಿರುವ ಬೆಸ್ಕಾಂನ ಎಲ್ಲಾ ಅಡೆತಡೆಗಳನ್ನು ಕೂಡಲೇ ತೆರವುಗೊಳಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನು ನೀಡಿದ್ದಾರೆ.
ಬೆಂಗಳೂರು-ಜಿಬಿಎ...
ನೀವೇನಾದ್ರೂ ಹೊಸ ಮನೆಗೆ ಬಾಡಿಗೆಗೆ ಹೋಗುವ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಸರ್ಕಾರದ ಜನಪ್ರಿಯ 'ಗೃಹಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ನಿಮಗೆ ಸಿಗದೇ ಹೋಗಲು ಇಲ್ಲೊಂದು ಸಣ್ಣ ಕಾರಣವಿದೆ. ಬಾಡಿಗೆದಾರರಿಗೆ ಹೆಚ್ಚಾಗಿ ತಿಳಿದಿಲ್ಲದ ಈ ನಿಯಮದಿಂದಾಗಿ ನಿಮ್ಮ ಕೈಗೆ ಬರಬೇಕಿದ್ದ ಉಚಿತ ವಿದ್ಯುತ್ ಸೌಲಭ್ಯ ಕೈತಪ್ಪಿ ಹೋಗುವ ದೊಡ್ಡ ಸಾಧ್ಯತೆಯಿದೆ. ಹಾಗಾಗಿ ಮನೆ ಬದಲಾಯಿಸುವ ಮುನ್ನ...
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 70,000 ಹುದ್ದೆಗಳ ಭರ್ತಿಗೆ ಭರ್ಜರಿ ಸಿದ್ಧತೆ ನಡೆಸಲಾಗಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯು ಈಗಾಗಲೇ ಉನ್ನತ ಮಟ್ಟದ ಸಭೆ ನಡೆಸಿದ್ದು, ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಆಯೋಜಿಸಲು...
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ ತುಮಕೂರಿನಲ್ಲಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಸ್ವತಃ ಆಡಳಿತಾರೂಢ ಸರ್ಕಾರದಲ್ಲೇ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದ್ದು, ನಾಯಕರ ನಡುವೆ ಸಣ್ಣ ಗೊಂದಲ...
ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್ಡೌನ್ ಶುರುವಾಗಿದೆ. ಇದರ ಮಧ್ಯೆ ರಾಜಕೀಯ ವಲಯದಲ್ಲಿ ಎಲ್ಲರ ಕಣ್ಣು ನೆಟ್ಟಿರೋದು ಹೆಚ್ಚುವರಿ ಉಪಮುಖ್ಯಮಂತ್ರಿ (DCM) ಪಟ್ಟದ ಮೇಲೆ. ಇದೀಗ ಡಿಸಿಎಂ ರೇಸ್ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರುಗಳು...
ಬರದ ಭೀತಿಯಿಂದ ಕಂಗಾಲಾಗಿರುವ ರೈತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕಳೆದ ವರ್ಷದ ಅತಿವೃಷ್ಟಿಯಿಂದ ಉಂಟಾದ ಬೆಳೆ ನಷ್ಟಕ್ಕೆ ಸಂಬಂಧಿಸಿದ ಅಂತಿಮ ಬೆಳೆ ವಿಮೆ ಪರಿಹಾರದ ಹಣ ಬಿಡುಗಡೆಗೊಂಡಿದ್ದು, ಮುಂದಿನ 10 ದಿನಗಳಲ್ಲಿ ರೈತರ ಖಾತೆಗಳಿಗೆ ಜಮೆಯಾಗಲಿದೆ.
2025-26ನೇ ಸಾಲಿನಲ್ಲಿ ಮಧ್ಯಂತರ ಹಾಗೂ ಅಂತಿಮ ಪರಿಹಾರ ಸೇರಿ ಜಿಲ್ಲೆಗೆ ಒಟ್ಟು 464 ಕೋಟಿ ರೂಪಾಯಿ ಬೆಳೆ ವಿಮೆ...
ರಾಜ್ಯ ಸರ್ಕಾರದ ಅತಿದೊಡ್ಡ ನೇಮಕಾತಿ ಪ್ರಕ್ರಿಯೆಗಳಲ್ಲಿ ಒಂದಾದ 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ವೇಗ ನೀಡಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಈ ಕುರಿತು ಎಲ್ಲಾ ಇಲಾಖೆಗಳು, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪತ್ರ ಬರೆದು ಮಿಷನ್ ಮೋಡ್ನಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.
ಕಳೆದ...
ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆ ವಿರುದ್ಧ ಆಕ್ರೋಶ ತೀವ್ರವಾಗುತ್ತಿರುವ ನಡುವೆ, ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ನಿಯೋಗವು ಭಾನುವಾರ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಯೋಜನೆ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿತು.
'ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯತ್ಗಳ ರೈತ ಭೂ ಹಿತರಕ್ಷಣಾ ಸಮಿತಿ'ಯ ಭಾಗವಾಗಿರುವ ರೈತರು,...
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಮತ್ತು ಆಗ್ತಾರೆ ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಇನ್ನು, ಶಾಸಕರ ಫಾರಿನ್ ಟೂರ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. 4 ಜನ ಎಂಎಲ್ಎಗಳು ಟ್ರಿಪ್ ಅಥವಾ ರೆಸಾರ್ಟ್ಗೆ ಹೋಗಿ ಕೂತು ಊಟ ಮಾಡಿದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಅದೇ...
ಅಕ್ರಮ ವಿದೇಶಿಗರು ಹಾಗೂ ವಲಸಿಗರು ದೇಶದ ಭದ್ರತೆಗೆ ಗಂಭೀರ ಅಪಾಯ ಎಂಬ ವಿಚಾರವನ್ನು ಪುನರುಚ್ಚರಿಸಿರುವ ಕರ್ನಾಟಕ ಹೈಕೋರ್ಟ್, ರಾಜ್ಯದಲ್ಲಿ ಅಂದಾಜು 20 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂಬ ಸರ್ಕಾರದ ಮಾಹಿತಿಯನ್ನು ಉಲ್ಲೇಖಿಸಿದೆ. ಈ ಸಂಬಂಧ ಅಕ್ರಮ ವಲಸಿಗರ ವಿರುದ್ಧ ರಾಜ್ಯ ಸರ್ಕಾರ ಯಾವೆಲ್ಲ ಕ್ರಮ ಕೈಗೊಂಡಿದೆ ಎಂಬುದರ ಕುರಿತು ವಿವರವಾದ ವರದಿ...
ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳ ರಕ್ಷಣೆಗಾಗಿ ನವೆಂಬರ್ 20ರವರೆಗೆ ನೀರು ಒದಗಿಸಲು ನಿರ್ಧರಿಸಲಾಗಿದೆ...