ಛತ್ತೀಸ್‌ಗಢದ ಬಿಲಾಸ್ಪುರ್‌ನಲ್ಲಿ ನಡೆದ ಭೀಕರ ಘಟನೆಯೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಾನೆ ಎಂಬ ಕಾರಣಕ್ಕೆ 22 ವರ್ಷದ ಯುವತಿಯೊಬ್ಬಳು ತನ್ನ ಬಾಯ್‌ಫ್ರೆಂಡ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು 25 ವರ್ಷದ ಕಾಮತ್ ಪ್ರಸಾದ್ ಸೂರ್ಯವಂಶಿ ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಯುವತಿ ರೋಶಿನಿ (22) ಎಂದು ಪೊಲೀಸರು...
ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಮಾಡಲಾಗಿದೆ.
ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡಿದ ಘಟನೆ, ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಎಂಬುವರನ್ನು, ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಎಫ್‌ಪಿಎ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಏನೋ ಮುಗಿದಿದೆ.
ಬಳಿಕ ಶೌಚಾಲಯಕ್ಕೆ ತೆರಳುವ ವೇಳೆ ಬಾಣಂತಿ ಕುಸಿದು ಬಿದ್ದಿದ್ದಾರೆ. ಆ ವೇಳೆ ವೈದ್ಯರು ಇಂಜಕ್ಷನ್...
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ ಅಡಿ ಮೆಹಕರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬಾಲಕಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ಕೊಟ್ಟು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆಂದು ಮೃತ ಬಾಲಕಿ ಪೋಷಕರು ಆರೋಪಿಸಿದ್ದಾರೆ. ಪ್ರತಿದಿನ ಶಾಲೆಗೆ ಹೋಗುವಾಗ, ಬಾಲಕಿಗೆ ಅದೇ ಗ್ರಾಮದ...
ಉದ್ಯೋಗಿಗೆ ಮನೆಗೆ ಬಿಟ್ಟು ಬರುತ್ತೇವೆಂಬ ನೆಪದಲ್ಲಿ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ ಹೀನ ಕೃತ್ಯ ರಾಜಸ್ಥಾನದ ಉದಯಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಐಟಿ ಕಂಪನಿಯ ಸಿಇಒ ಜಿತೇಶ್ ಸಿಸೋಡಿಯಾ ಸೇರಿದಂತೆ ಮೂವರು ಬಂಧಿತರಾಗಿದ್ದಾರೆ. ಬಂಧಿತರಲ್ಲಿ ಕಂಪನಿಯ ಮಹಿಳಾ ಮುಖ್ಯಸ್ಥೆ ಶಿಲ್ಪಾ ಸಿರೋಹಿ ಹಾಗೂ ಆಕೆಯ ಪತಿ ಗೌರವ್ ಸಿರೋಹಿ ಸೇರಿದ್ದಾರೆ.
ಕಳೆದ ಶನಿವಾರ ಘಟನೆ...
ರೌಡಿ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಬಂಧನದ ಭೀತಿ ಶುರುವಾಗಿದೆ. ಬೈರತಿ ಬಸವರಾಜ್‌ಗೆ ಬಂಧನದಿಂದ ರಕ್ಷಣೆ ನೀಡಲು ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ನೀಡುವಂತೆ ಬೈರತಿ ಬಸವರಾಜ್ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ. ಮತ್ತು ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸುವಂತೆ...
ಪತ್ನಿಯ ದಬ್ಬಾಳಿಕೆ ವರ್ತನೆಯಿಂದ ಬೇಸತ್ತು, ಆಕೆಯ ಹತ್ಯೆಗೆ ಸುಪಾರಿ ನೀಡಿದ ಪತಿ ಜೈಲು ಪಾಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಪತ್ನಿ ನಾಗರತ್ನ (46) ಅವರ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ ಪಾನಿಪೂರಿ ವ್ಯಾಪಾರಿ ಮಹೇಶ್ (44) ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. “ನಾನು ಗಳಿಸಿದ್ದ ಹಣವನ್ನೆಲ್ಲ ಕಿತ್ತುಕೊಂಡು, ಬಡ್ಡಿ ವ್ಯವಹಾರ ನಡೆಸುತ್ತಿದ್ದ ಪತ್ನಿ...
ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂದು ನಂಬಿಸಿ ಸೈಬರ್ ವಂಚಕರು ಉದ್ಯಮಿಯೊಬ್ಬರಿಂದ ₹8.3 ಕೋಟಿ ಹಣ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ನಗರದ ದಕ್ಷಿಣ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಮಿ ರಾಜೇಂದ್ರ ನಾಯ್ಡು ಅವರು ಈ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ. ರಾಜೇಂದ್ರ ನಾಯ್ಡು ಅವರು ಅಯೋಧ್ಯೆಯ...
ಪೊಲೀಸ್ ಯೂನಿಫಾರಂ ಹಾಕ್ಕೊಂಡು ರಿಯಲ್ ಪೊಲೀಸ್ ಅಂತ ಬಿಲ್ಡಪ್ ಕೊಟ್ಟು, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ PSI ಸೇರಿ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಲಾಗಿದೆ. PSI ಎಂಬ ಸೋಗಿನಲ್ಲಿ ಮನೆಗೆ ನುಗ್ಗಿ ಯುವಕನೊಬ್ಬನನ್ನು ಬೆದರಿಸಿ ಹಣ ಸುಲಿಗೆ ಮಾಡಿದ್ದಾರೆ. ಬಂಧಿತರಿಂದ ರೂ.45 ಸಾವಿರ ನಗದು, ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು...
ಹರಿಯಾಣದ ಪಾಣಿಪತ್‌ನಲ್ಲಿ ಬೆಚ್ಚಿಬೀಳಿಸುವ ಸರಣಿ ಮಕ್ಕಳ ಹತ್ಯೆ ಪ್ರಕರಣ ಕೆಲವು ದಿನಗಳ ಹಿಂದಷ್ಟೆ ಬೆಳಕಿಗೆ ಬಂದಿತು. 34 ವರ್ಷದ ಪೂನಂ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಆಕೆ ನಾಲ್ಕು ಮಕ್ಕಳ ಹತ್ಯೆ ಮಾಡಿರುವುದಾಗಿ ತನಿಖೆಯಲ್ಲಿ ಒಪ್ಪಿಕೊಂಡಿದ್ದಾಳೆ. ಆಕೆಯ ಪತಿ ನವೀನ್, ಬರೋಡಾ ಠಾಣೆಯಲ್ಲಿ ದೂರು ನೀಡಿದ ನಂತರ ಈ ದಾರುಣ ಘಟನೆ ಬಹಿರಂಗವಾಯಿತು.
ಪೊಲೀಸರ ಪ್ರಕಾರ,...
ವೈಟ್‌ಫೀಲ್ಡ್ ಪ್ರದೇಶದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ 45 ವರ್ಷದ ಮುರುಳಿ ಗೋವಿಂದರಾಜು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ.
ಮುರುಳಿ ಅವರ ತಾಯಿ ಲಕ್ಷ್ಮಿ ಅವರ ದೂರು ಆಧರಿಸಿ ಪೊಲೀಸರು ಶಶಿ ನಂಬಿಯಾರ್ (64) ಮತ್ತು ಉಷಾ ನಂಬಿಯಾರ್ (57) ದಂಪತಿಯನ್ನು ಬಂಧಿಸಿದ್ದಾರೆ. ಮತ್ತೊಬ್ಬ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...