ತೆಲಂಗಾಣದಲ್ಲಿ ಮಹಿಳೆಯೊಬ್ರು ಇರುವೆಗಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಗಾರೆಡ್ಡಿ ಜಿಲ್ಲೆಯ 25 ವರ್ಷದ ಮಹಿಳೆಗೆ ಮೊದಲಿನಿಂದಲೂ ಇರುವೆ ಅಂದ್ರೆ ಭಯ ಇತ್ತಂತೆ. ಈ ಹಿಂದೆ ಮಂಚೇರಿಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇರುವೆಗಳಿಗೆ ಹೆದರುವ ರೋಗ ವಾಸಿಯಾಗಿರಲಿಲ್ಲ.
ಆ ಮಹಿಳೆಗೆ 2022ರಲ್ಲಿ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ. ಎಂದಿನಂತೆ ಪತಿ ಕೆಲಸಕ್ಕೆ ಹೋಗಿದ್ದಾರೆ. ಸಂಜೆ ಹಿಂದಿರುಗಿದಾಗ ಬಾಗಿಲು...
ಸೀಜ್ ಆಗಿ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ, ಕಂತೆ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮಾಜಿ ಶಿಕ್ಷಣ ಸಚಿವ ದಿವಂಗತ ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ, ಸಾಂಗ್ಲಿ ಪೊಲೀಸರ ನೆರವು ಪಡೆದು ನೇಪಾಳಿ ಗ್ಯಾಂಗ್ ಅನ್ನು ಬಂಧಿಸಲಾಗಿತ್ತು.
ಈ ವೇಳೆ...
ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಲ್ಲಿ, ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರಿಂದ ಹಣ ವಂಚನೆ ನಡೆಸುತ್ತಿರುವುದು ಬಯಲಾಗಿದೆ. ಸೈಬರ್ ಕಳ್ಳರ ಕೃತ್ಯ ಇದೀಗ ಬೆಳಕಿಗೆ ಬಂದಿದೆ. ದೇವಾಲಯಕ್ಕೆ ಬರುವ ಭಕ್ತರು ಕೊಠಡಿ ಕಾಯ್ದಿರಿಸಲು ಬಳಸುವ ವೆಬ್‌ಸೈಟ್ ರೀತಿ, ನಕಲಿ ವೆಬ್‌ಸೈಟ್ ಕ್ರಿಯೇಟ್ ಮಾಡಲಾಗಿತ್ತು.
ಕರ್ನಾಟಕ ಟೆಂಪಲ್ ಅಕಮಡೇಶನ್ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆಯಲಾಗಿತ್ತು. ಈ ಸೈಟ್‌ನಲ್ಲಿ QR...
ಮಂಡ್ಯ ಡಿಸಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವನ್ನಪ್ಪಿದ್ದಾರೆ. ರೈತ ಮಂಜೇಗೌಡ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ನಿವಾಸಿ. ಭೂಸ್ವಾಧೀನಗೊಂಡಿದ್ದ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿರಲಿಲ್ಲ. ಅರ್ಜಿ ಸಲ್ಲಿಸಿದ್ರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿರಲಿಲ್ಲವಂತೆ. ತಾಲೂಕು ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ಬಂದರೂ ಸಮಸ್ಯೆ...
ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮನೆಕೆಲಸದ ಮಹಿಳೆಯೊಬ್ಬರು ನಾಲ್ಕು ವರ್ಷದ ನಾಯಿ ಮರಿಯನ್ನು ಲಿಫ್ಟ್‌ನಲ್ಲಿ ಬಟ್ಟೆ ಒಗೆದಂತೆ ನೆಲಕ್ಕಪ್ಪಳಿಸಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳವಾರ ಆರೋಪಿ ಪುಷ್ಪಲತಾ ಬಂಧಿತರಾಗಿದ್ದಾರೆ.
ತಮಿಳುನಾಡು ಮೂಲದ ಪುಷ್ಪಲತಾ ಎಂಬುವರು ಅಕ್ಟೋಬರ್ 31ರಂದು ಈ ಕೃತ್ಯ ಎಸಗಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ....
ಶಿಕ್ಷಕರನ್ನು ದೇವರ ಸಮಾನವೆಂದು ಗೌರವಿಸಲಾಗುತ್ತದೆ. ಆದರೆ ಕೆಲವರ ಕೃತ್ಯಗಳು ಇಡೀ ಶಿಕ್ಷಕರ ವೃಂದಕ್ಕೆ ಕಳಂಕ ತರುತ್ತಿವೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಶಾಲೆಯೊಂದರಲ್ಲಿ ನಡೆದ ಘಟನೆ ಇದಕ್ಕೆ ನಿದರ್ಶನವಾಗಿದೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನ ಮೇಲೆ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ.
ವೈದ್ಯಕೀಯ ಪರೀಕ್ಷೆಯ ವೇಳೆ ವಿದ್ಯಾರ್ಥಿನಿ ಗರ್ಭಿಣಿ ಎಂಬುದು...
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸಿದ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಈಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ನಾನು ಮಾಡ್ಲಿಲ್ಲ ಅಂತಿದ್ದ ಕಿಲ್ಲರ್ ಡಾಕ್ಟರ್ ಮಹೇಂದ್ರ ರೆಡ್ಡಿಯೇ, ಪೊಲೀಸರ ಮುಂದೆ ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆ ವೇಳೆ ಆತ ಮಾಡಿದ ಒಪ್ಪಂಗೆಯಿಂದ ತನಿಖೆ ಹೊಸ ತಿರುವು ಪಡೆದುಕೊಂಡಿದೆ. ಮಾರತ್ತಹಳ್ಳಿ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ...
ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುತ್ತಾರೆ. ಆದರೆ ಮೈಸೂರಿನ ನಂಜನಗೂಡಿನಲ್ಲಿ ಗಂಡ–ಹೆಂಡತಿ ಜಗಳ ಕೊಲೆ ಯತ್ನದ ಹಂತಕ್ಕೆ ತಲುಪಿದ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಸಂಗೀತಾ ಎಂಬ ಮಹಿಳೆ ತನ್ನ ಗಂಡ ರಾಜೇಂದ್ರನನ್ನು ಕೊಲ್ಲಲು ಪ್ಲ್ಯಾನ್ ರೂಪಿಸಿದ್ದಾಳೆ. ಆದರೆ ಆ ಪ್ಲ್ಯಾನ್ ಉಲ್ಟಾ ಹೊಡೆದು ಗಂಡ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನಂಜನಗೂಡಿನ ನಿವಾಸಿ ರಾಜೇಂದ್ರ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವುಗಳ ಆರೋಪಗಳಿಗೆ, ಇದುವರೆಗೆ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಬೇರೆ ದಾರಿಯಲ್ಲಿ ತನಿಖೆ ಮಾಡಲು ಮುಂದಾಗಿದ್ದಾರೆ. ಧರ್ಮಸ್ಥಳ ಹಾಗೂ ಅದರ ಆಡಳಿತ ಮಂಡಳಿಯನ್ನು ಗುರಿಯಾಗಿಟ್ಟುಕೊಂಡು, ಸಂಚು ರೂಪಿಸಲಾಗಿದೆಯೇ ಎಂಬುದರತ್ತ ತನಿಖೆ ನಡೆಸುತ್ತಿದ್ದಾರೆ.
ದೂರುದಾರ ಚಿನ್ನಯ್ಯ ನ್ಯಾಯಾಲಯದ ಮುಂದೆ ಸತ್ಯ ಒಪ್ಪಿಕೊಂಡದ್ದು ಯಾಕೆ? ಇಂತಹ ಗಂಭೀರ ಆರೋಪಗಳನ್ನು ಮಾಡಲು...
ಮಹಾರಾಷ್ಟ್ರ : ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಹಾಗೂ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರ ವಿರುದ್ಧ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...