ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು...
ರಾಜ್ಯದ ಉದ್ದಗಲಕ್ಕೂ ಹಿಂದೂ ಸಮಾಜೋತ್ಸವ ನಡೆಯುತ್ತಿದೆ. ಈ ವೇಳೆ ಹಿಂದೂ ಸಂಘಟನೆ ಪ್ರಮುಖರ ಭಾಷಣಕ್ಕೆ ಪೊಲೀಸರು ನಿರ್ಬಂಧ ಹೇರುತ್ತಿರುವುದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ವಿಕಾಸ್ ಪುತ್ತೂರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಷರತ್ತು ಹಾಕಲಾಗಿತ್ತು. ಹಾಗೆಯೇ, ಹಾಸನ ಜಿಲ್ಲೆ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ, ಶರಣ್ ಪಂಪ್‌ವೆಲ್‌ಗೆ...
ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿ ಮೀಸಲಾತಿ ಪ್ರಮಾಣವನ್ನು, ಶೇಕಡ 56ಕ್ಕೆ ಏರಿಸಿರುವ ಕಾಯ್ದೆಯನ್ನು, ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು, ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ ವಾಲ್ಮೀಕಿ ಸಮಾಜದ ಸಮಾನ...
2026ರ ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದೆ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್...
ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮರು ಎಣಿಕೆ ಕಾರ್ಯ ನಿನ್ನೆ ತಡರಾತ್ರಿಯವರೆಗೂ ನಡೆದಿತ್ತು. ಬಿಜೆಪಿ ಪಾರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಮರು ಮತ ಎಣಿಕೆ ಮುಕ್ತಾಯಗೊಂಡ ಬಳಿಕ ಕೊಠಡಿಯಿಂದ ಹೊರಬರುತ್ತಿದ್ದಂತೆ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಕಣ್ಣೀರಿಟ್ಟಿದ್ದಾರೆ.
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶವನ್ನು, ಚುನಾವಣಾ...
ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಮಂಗಳವಾರ 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಹಂತದ 122 ಸ್ಥಾನಗಳಲ್ಲಿ 101 ಸ್ಥಾನಗಳು ಸಾಮಾನ್ಯ ವರ್ಗಕ್ಕೆ, 19 ಪರಿಶಿಷ್ಟ ಜಾತಿಗಳಿಗೆ ಮತ್ತು 2 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ.
ನವೆಂಬರ್ 6ರಂದು ಮೊದಲ ಹಂತದಲ್ಲಿ ಶೇಕಡ 65.08ರಷ್ಟು ಮತದಾನವಾಗಿದ್ದು, ಇದುವರೆಗಿನ ಅತೀ...
ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ, ಇದೇ ನವೆಂಬರ್ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಎರಡನೇ ಹಂತದ ಚುನಾವಣೆ ಮುಗಿದ ಬೆನ್ನಲ್ಲೇ ಎಕ್ಸಿಟ್ ಪೋಲ್ ಹೊರಬೀಳಲಿದೆ.
ಮೊದಲ ಹಂತದಲ್ಲಿ ನಡೆದ 121 ಕ್ಷೇತ್ರಗಳಲ್ಲಿ ಶೇಕಡಾ 64.66 ಮತದಾನವಾಗಿದೆ. ಇದುವರೆಗೆ ಹಲವು ಸಮೀಕ್ಷೆಗಳು ಹೊರಬಿದ್ದಿವೆ. ಈ ಸರ್ವೇಗಳ ಪ್ರಕಾರ, ಬಿಹಾರದ...
ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ, ದಾಖಲೆಯ ಮತದಾನವಾಗಿದೆ. 121 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ, 3.75 ಕೋಟಿ ಮತದಾರರಲ್ಲಿ ಶೇಕಡಾ 65ರಷ್ಟು ಮಂದಿ ಮತ ಚಲಾಯಿಸಿದ್ದಾರೆ. ಇದು ಆಡಳಿತಾರೂಢ ಎನ್ ಡಿಎಯ ಜನಪ್ರಿಯತೆಗೆ, ಅಗ್ನಿ ಪರೀಕ್ಷೆಯಾಗಿದೆ.
ಚುನಾವಣಾ ಆಯೋಗ, ವಿಧಾನಸಭಾ ಚುನಾವಣೆಯ ಮೊದಲ ಹಂತವು, ಬಿಹಾರದ ಇತಿಹಾಸದಲ್ಲಿ ಇದುವರೆಗಿನ ಅಧಿಕ ಎಂದಿದೆ. ಶೇಕಡಾ 64.66ರಷ್ಟು ಮತದಾನದೊಂದಿಗೆ...
ಬಿಹಾರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಇಂದು 18 ಜಿಲ್ಲೆಗಳ 121 ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. 3.75 ಕೋಟಿ ಮತದಾರರು ಮತದಾರರು 1,314 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುತ್ತಿದ್ದಾರೆ.
ಈ ಚುನಾವಣೆಯೂ ಬಿಹಾರ ರಾಜ್ಯ ರಾಜಕೀಯದ ದಿಕ್ಕನ್ನು ನಿರ್ಧರಿಸುವುದಲ್ಲದೇ, ಎನ್‌ಡಿಎ ಮತ್ತು ಮಹಾ ಮೈತ್ರಿಕೂಟ ಎರಡಕ್ಕೂ ಅಗ್ನಿಪರೀಕ್ಷೆಯಾಗಿದೆ. ಇಂದು ಸಂಜೆಯವರೆಗೆ...
ಬಿಹಾರ ಚುನಾವಣಾ ಕಣ ರಂಗೇರುತ್ತಿದೆ. ಎಲೆಕ್ಷನ್ ಪ್ರಚಾರದ ಭರಾಟೆ ಜೋರಾಗಿದ್ದು, ಕಾವು ಹೆಚ್ಚಾಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ಸಾರ್ವಜನಿಕ ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಾಯಕರು ಏಕಕಾಲಕ್ಕೆ ರ್ಯಾಲಿ,...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...