ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು, ಹೋರಾಟದ ಹಾದಿ ತುಳಿದಿದ್ದಾರೆ. ಆಗಸ್ಟ್ 12 ರಿಂದ 3 ದಿನಗಳ ಕಾಲ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. 2025ರಿಂದ ಅನ್ವಯವಾಗುವಂತೆ, 10 ಸಾವಿರ ರೂಪಾಯಿ ಗೌರವ ಧನಕ್ಕೆ ಪಟ್ಟು ಹಿಡಿದಿದ್ದಾರೆ.
ಎಐಯುಟಿಯುಸಿ ನೇತೃತ್ವದಲ್ಲಿ, ಬೆಂಗಳೂರಿನಲ್ಲೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. 15-16 ವರ್ಷದಿಂದ ಕೆಲಸ ಮಾಡುತ್ತಿದ್ದೇವೆ....
ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್ ರಾಜಣ್ಣ ಅವರನ್ನ ಕಿತ್ತು ಹಾಕಿದ್ದಕ್ಕೆ ಬೆಂಬಲಿಗರು ಕೆರಳಿ ಕೆಂಡವಾಗಿದ್ದಾರೆ. ಹೈಕಮಾಂಡ್ ದಿಢೀರ್ ಕ್ರಮ, ಕಾಂಗ್ರೆಸ್ ಪಾಳಯದಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಸಿದೆ. ಮಧುಗಿರಿಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಬೀದಿಗಿಳಿದು, ಹೋರಾಟಕ್ಕೆ ಮುಂದಾಗಿದ್ದಾರೆ.
ಮಧುಗಿರಿ ನಗರದಲ್ಲಿ ರಾಜಣ್ಣ ಬೆಂಬಲಿಗರು, ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಅನ್ಯಾಯ ಅಂತಾ ಘೋಷಣೆ...
ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....
ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ.
ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....
ಇವತ್ತು ರಾಜ್ಯಾದ್ಯಂತ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿತ್ತು. ಇದೀಗ ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ಜೊತೆಗೆ 4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ, ಹೈಕೋರ್ಟ್ ನೋಟಿಸ್ ನೀಡಿದೆ.
ಆಗಸ್ಟ್ 4ರಂದು ವಕೀಲ ಅಮೃತೇಶ್ ಮತ್ತು ಸಾರಿಗೆ ಇಲಾಖೆ ಪರ ವಕೀಲರು, ಹೈಕೋರ್ಟ್‌ಗೆ...
ರಾಜ್ಯಾದ್ಯಂತ ಸಾರಿಗೆ ನೌಕರರ ಬಂದ್ ಬಿಸಿ ತೀವ್ರಗೊಳ್ಳುತ್ತಿದೆ. ಒಂದೇ ದಿನಕ್ಕೆ ರಾಜ್ಯದ ಹಲವು ಕಡೆ ಪ್ರಯಾಣಿಕರು ಹೈರಾಣಾಗಿದ್ದಾರೆ. ಪ್ರಯಾಣಿಕರ ಪರದಾಟಕ್ಕೆ ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ನೌಕರರ ಮುಷ್ಕರಕ್ಕೆ ಜನಸಾಮಾನ್ಯರು ಬೆಂಬಲ ಕೊಡ್ತಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಛೀಮಾರಿ ಹಾಕ್ತಿದ್ದಾರೆ.
ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಗ್ಗೆ, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಂಘಟನೆಗಳು ಕೇಳುತ್ತಿರುವ ವೇತನ...
ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ.
ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...
ಕರೆ ಕೊಟ್ಟಂತೆ ಆಗಸ್ಟ್ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ.
ಆಗಸ್ಟ್ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...
ಕೊನೆಗೂ ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಹೋರಾಟಕ್ಕೆ ರಾಜ್ಯ ಸರ್ಕಾರ ಮಂಡಿಯೂರಿದೆ. ಬಾಕಿ ವೇತನ ಪಾವತಿ, ವೇತನ ಪರಿಷ್ಕರಣೆ, ರಜೆಯ ಹಕ್ಕು ಸೇರಿ, ಹಲವು ಬೇಡಿಕೆಗಳ ಈಡೇರಿಕೆಗೆ, ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ನೌಕರರ ಸಂಘ ಹಲವು ಬಾರಿ ಸಿಎಂ, ಸಾರಿಗೆ ಸಚಿವರ ಭೇಟಿಗೆ ಪ್ರಯತ್ನಿಸಿದ್ರೂ ಯಾವುದೇ ಜಯ ಸಿಕ್ಕಿಲ್ಲ.
ಮೊದಲ ಸಭೆಯಲ್ಲಿ ನೌಕರರ ಬೇಡಿಕೆಗಳ...
ಸಾರಿಗೆ ನೌಕರರ ಮುಷ್ಕರದ ಬೆನ್ನಲ್ಲೇ, ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿಗೆ ಕರೆ ಕೊಟ್ಟಿದ್ದಾರೆ. ಆಗಸ್ಟ್ 12, 13, 14ರಂದು, 3 ದಿನಗಳ ಕಾಲ ಹೋರಾಟಕ್ಕೆ ಧುಮುಕಲಿದ್ದಾರೆ.
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಹೋರಾಟಕ್ಕೆ ಕರೆ ಕೊಟ್ಟಿದೆ. ಆಗಸ್ಟ್ 1ರಂದು ನಡೆದ ಸುದ್ದಿಗೋಷ್ಠಿಯಲ್ಲಿ,...