ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಯುವತಿ, ತನ್ನ ಪ್ರಿಯಕರನಿಗೆ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಳು. ಬಳಿಕ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಯುವತಿಗೆ ಕರೆ ಮಾಡಿದ ವ್ಯಕ್ತಿ, ಆಕೆಯ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಾನೆ. ಅಲ್ಲದೆ, ₹1 ಲಕ್ಷ ಕೊಡದಿದ್ರೆ ಆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಹೆದರಿಸಿದ್ದಾನೆ.
ಇದರಿಂದ ಕಂಗಾಲಾದ ಯುವತಿ, ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ...
ಹಾಸನ ಜಿಲ್ಲೆಯಲ್ಲಿ ಪುಂಡಪೋಕರಿಗಳ ಹಾವಳಿ ಮತ್ತೆ ಹೆಚ್ಚಾಗಿದೆ. ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿಯೊಬ್ಬಳನ್ನು ಅಪರಿಚಿತ ವ್ಯಕ್ತಿಯೊಬ್ಬ ಹಿಂಬಾಲಿಸಿ ಕಿರುಕುಳ ನೀಡಿರುವ ಆತಂಕಕಾರಿ ಘಟನೆ, ನಗರದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ, ಸಂಜೆ ಶಾಲಾ ವಾಹನದಲ್ಲಿ ಮನೆಗೆ ಮರಳಿದ್ದಾಳೆ. ವಾಹನದಿಂದ ಇಳಿದು ಬಾಲಕಿ ತನ್ನ ಮನೆಯತ್ತ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಘನಘೋರ ದುರಂತ ಸಂಭವಿಸಿದ್ದು, 9ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಡಿಕ್ಕಿಯಾಗಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ದುರಂತದಲ್ಲಿ ಸುಮಾರು 32 ಪ್ರಯಾಣಿಕರ ಪೈಕಿ, 9ಕ್ಕೂ ಅಧಿಕ ಮಂದಿ ಸುಟ್ಟುಕರಕಲಾಗಿದ್ದಾರೆಂದು, ಪ್ರಾಥಮಿಕ ಮಾಹಿತಿ ಹೇಳ್ತಿದೆ.
ಅಪಘಾತದ ವೇಳೆ...
ಸೌದಿ ಅರೇಬಿಯಾದ ಮದೀನಾ ಬಳಿ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ – ಟ್ಯಾಂಕರ್ ಮದ್ಯೆ ಭೀಕರ ಅಪಘಾತ ಸಂಭವಿಸಿದೆ. ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ, ಬಸ್‌ನಲ್ಲಿದ್ದ 45 ಭಾರತೀಯರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪ್ರಯಾಣಿಕರು ನಿದ್ರಿಸುತ್ತಿದ್ದ ಕಾರಣ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೃತರಲ್ಲಿ ಕನಿಷ್ಠ 11...
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ಉಗ್ರ ಸ್ವರೂಪ ಪಡೆದಿದೆ. ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸುತ್ತಿದ್ದ ರೈತರು, ಕಾರ್ಖಾನೆಗೆ ಹೊರಟಿದ್ದ ಕಬ್ಬು ತುಂಬಿದ ಟ್ರಾಕ್ಟರ್‌ನ್ನು ಮಧ್ಯೆ ನಿಲ್ಲಿಸಿ, ಪಲ್ಟಿ ಮಾಡಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ತೀವ್ರಗೊಂಡ ಪರಿಣಾಮ, ಟ್ರಾಕ್ಟರ್ ಜೊತೆಗೆ ಕಬ್ಬು ಸಂಪೂರ್ಣ ಭಸ್ಮವಾಗಿದ್ದು, 50ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಬೆಂಕಿಗಾಹುತಿಯಾಗಿ ಧಗಧಗಿಸುತ್ತಿವೆ....
ಪ್ರಧಾನಿ ನರೇಂದ್ರ ಮೋದಿ ಅವರು ಭೂತಾನ್ ಪ್ರವಾಸ ಮುಗಿಸಿಕೊಂಡು ಹಿಂದಿರುಗಿದ್ದಾರೆ. ದಿಲ್ಲಿಗೆ ಬಂದಿಳಿದ ತಕ್ಷಣವೇ ವಿಮಾನ ನಿಲ್ದಾಣದಿಂದ ನೇರವಾಗಿ ಲೋಕ ನಾಯಕ್ ಆಸ್ಪತ್ರೆಗೆ ತೆರಳಿದ್ದಾರೆ.
ದೆಹಲಿ ಕಾರು ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ್ದಾರೆ. ಯೋಗಕ್ಷೇಮ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.
ಇದೇ ವೇಳೆ ದುಃಖತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಾವು ನಿಮ್ಮ ಜೊತೆ ಇದ್ದೇವೆ ಎಂಬ...
ದೆಹಲಿ ಸ್ಫೋಟ ಪ್ರಕರಣದಲ್ಲಿ ಬಗೆದಷ್ಟು ಸಂಚುಗಳು ಬಯಲಾಗುತ್ತಿದೆ. ಭಾರತದ 200ಕ್ಕೂ ಹೆಚ್ಚು ಕಡೆ ಸ್ಫೋಟಕ್ಕೆ ಸಂಚು ರೂಪಿಸಿದ್ರಂತೆ. 1993ರಲ್ಲಿ ಮುಂಬೈನಲ್ಲಿ ನಡೆದಿದ್ದ ಸರಣಿ ಸ್ಫೋಟದ ಮಾದರಿಯಲ್ಲಿ, ಈಗಲೂ ಸ್ಫೋಟಿಸಲು ಪ್ಲಾನ್ ಮಾಡಿಕೊಂಡಿದ್ರಂತೆ. ಟೆರರ್ ನೆಟ್‌ವರ್ಕ್ ಮೂಲಕ ಜೈಶ್ ಉಗ್ರರು ಸ್ಫೋಟಕ ರವಾನಿಸಲು ಸಂಚು ಹೆಣೆದಿದ್ರಂತೆ .
ಮತ್ತೊಂದು ಪ್ರಮುಖ ವಿಷ್ಯ ಅಂದ್ರೆ, ಕೆಂಪು ಕೋಟೆ ಬಳಿ...
ದೆಹಲಿಯ ಕೆಂಪು ಕೋಟೆ ಬಳಿ ಕಾರು ಬಾಂಬ್ ಸ್ಫೋಟ ಪ್ರಕರಣದ ಬಳಿಕ, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಹಾಸನ ಜಿಲ್ಲೆಯಾದ್ಯಂತ ಖಾಕಿ ಪಡೆ ಹದ್ದಿನ ಕಣ್ಣಿಟ್ಟು, ತಪಾಸಣಾ ಕಾರ್ಯ ಮುಂದುವರೆಸಿದೆ.
ನಗರದ ರೈಲ್ವೇ ನಿಲ್ದಾಣದ ಕಾರ್-ಬೈಕ್ ಪಾರ್ಕಿಂಗ್‌ನಲ್ಲಿ, ರೈಲ್ವೇ ಪೊಲೀಸರು ತಪಾಸಣೆ ನಡೆಸಿದ್ದಾರೆ. ಮೆಟಲ್ ಡಿಟೆಕ್ಟರ್ ಹಿಡಿದು ಪರಿಶೀಲನೆ ನಡೆಸಿದ್ರು. ರೈಲ್ವೇ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಬ್ಯಾಗ್...
ದೆಹಲಿ ಸ್ಪೋಟ ಬೆನ್ನಲ್ಲೇ ಕ್ಯಾಬಿನೆಟ್ ಕಮಿಟಿ ಸೆಕ್ಯೂರಿಟಿ ಮೀಟಿಂಗ್ ಕರೆಯಲಾಗಿದೆ. ಇಂದು ಸಂಜೆ 5.30ಕ್ಕೆ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಜೈಶಂಕರ್ ಮತ್ತು ಮೂರು ಪಡೆಗಳ ಪ್ರಮುಖರು ಭಾಗವಹಿಸಲಿದ್ದಾರೆ.
ಸದ್ಯ, ಪ್ರಧಾನಿ ನರೇಂದ್ರ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಇಂದು ವಾಪಸ್ ಆಗಲಿದ್ದಾರೆ. ಭಾರತಕ್ಕೆ...
ದೆಹಲಿ ಕೆಂಪು ಕೋಟೆ ಬಳಿಯ ಸ್ಫೋಟ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ, ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಪುಕೋಟೆಯನ್ನು ಗುರಿಯಾಗಿಸಿಕೊಂಡು, ದಾಳಿ ನಡೆಸುವುದು ಉಗ್ರರ ಯೋಜನೆಯಾಗಿತ್ತಂತೆ.
ಪ್ರಮುಖ ಆರೋಪಿ ಮುಜಮ್ಮಿಲ್ ತನಿಖಾಧಿಕಾರಿಗಳ ಎದುರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾನೆ. ಆ ಪ್ರದೇಶದಲ್ಲಿ ನಡೆದ ಸ್ಫೋಟಕ್ಕೂ ಮೊದಲು...