ಬೆಂಗಳೂರು: ಜಾತ್ಯತೀತ ಜನತಾದಳ ಪಕ್ಷದ ರಾಜ್ಯ ಮಟ್ಟದ ಸಾಂಸ್ಥಿಕ ಚುನಾವಣೆ ಪೂರ್ಣಗೊಂಡಿದ್ದು, ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಲ್ಲದೆ, ಪಕ್ಷದ ರಾಜ್ಯ ಕಾರ್ಯಕಾರಿಣಿ ಮಂಡಳಿಯ ಸದಸ್ಯರಾಗಿ 65 ಮಂದಿ ಆಯ್ಕೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿ ಹೆಚ್.ಸಿ.ನೀರಾವರಿ ಅವರು ಪ್ರಕಟಿಸಿ ಆಯ್ಕೆ ಪ್ರಮಾಣ ಪತ್ರ ನೀಡಿದರು.
ಪಕ್ಷದ...
ಬೆಂಗಳೂರು: ಬಿಜೆಪಿ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಅದು ವಿಕೃತ, ವಿಲಕ್ಷಣ ಪಕ್ಷ ಎಂದು ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು; ನಾಗಮಂಗಲದ ಜೆಡಿಎಸ್ ಸಮಾವೇಶವನ್ನು ನಮ್ಮ ತಂದೆಯವರು ಬೆಂಗಳೂರಿನ ನಿವಾಸದಿಂದಲೇ ನೇರ ವೀಕ್ಷಣೆ ಮಾಡಿದ ಕ್ಷಣದಲ್ಲಿ ನಾನು, ನನ್ನ ಸಹೋದರ, ಅಲ್ಲಿದ್ದವರೆಲ್ಲರೂ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದನ್ನು...
ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾದಂತ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದ್ದು, ಆಗಸ್ಟ್ 11, 2022ರಂದು ನಡೆಯಲಿರುವಂತ ವಿಧಾನಪರಿಷತ್ ಉಪ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಬೂರಾವ್ ಚಿಂಚನಸೂರ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ಕರಾವಳಿ ಕೊಲೆಗಳನ್ನು ನಿಯಂತ್ರಣ ಮಾಡಲಾಗದ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ಹರಿಹಾಯ್ದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ರಾಜ್ಯ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ,...
ಬೆಂಗಳೂರು: ಮಂಗಳೂರು ಸರಣಿ ಕೊಲೆಗಳಿಗೆ ಸಂಬಂಧಿಸಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಡುತ್ತಿರುವ ತಪ್ಪು ಹೆಜ್ಜೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿಕೆ ಅವರು; ಬಸವರಾಜ ಬೊಮ್ಮಾಯಿ ಅವರು ಇಡೀ ಕರ್ನಾಟಕದ ಮುಖ್ಯಮಂತ್ರಿ. ಕೇವಲ ಬಿಜೆಪಿಗಷ್ಟೇ ಅಲ್ಲ. ನಿನ್ನೆಯ ದಿನ ಅವರು ಮಸೂದ್...
ಬೆಂಗಳೂರು: ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಬಿಜೆಪಿ ಮುಖಂಡನ ಹತ್ಯೆ ಸಂಬಂಧ, ರಾಜ್ಯ ಬಿಜೆಪಿ ಸರ್ಕಾರವನ್ನು ಸರಣಿ ಟ್ವಿಟ್ ನಲ್ಲಿ ಕುಟುಕಿದ್ದಾರೆ. ಈ ಮೂಲಕ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಸಂಬಂಧ ಸರಣಿ ಟ್ವಿಟ್ ಮಾಡಿರುವಂತ ಅವರು, ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ,...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ...
ಬೆಂಗಳೂರು: ರಾಜ್ಯ ಸಾವಿನ ಮನೆಯಾಗಿದೆ. ಇಂಥ ಸಂದರ್ಭದಲ್ಲಿ ಸರಕಾರಕ್ಕೆ ಸಂಭ್ರಮ ಯಾಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಸಾವಿನ ಮನೆಯಲ್ಲಿ ಸಂಭ್ರಮ ಯಾಕೆ? ಸಂಭ್ರಮಾಚರಣೆ ಮಾಡಲು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿರಬೇಕಲ್ಲವೇ? ಎಂದು ಪ್ರಶ್ನಿಸಿದರು.
ಮುಕ್ತ ಮತ್ತು ಸುರಕ್ಷತೆ ವಾತಾವರಣ...
ಬೆಂಗಳೂರು: ಶ್ರೀರಾಮಸೇನೆ, ಬಜರಂಗದಳ, ಆರ್ ಎಸ್ ಎಸ್ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ.ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ನನ್ನ ಹೇಳಿಕೆ ತಿರುಚಿ, ಪ್ರಚೋದನಕಾರಿ ಪೋಸ್ಟ್ ಮಾಡಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗುತ್ತದೆ ಎಂಬುದಾಗಿ...
ಬೆಂಗಳೂರು: ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎಂದು ಹೇಳುವ ಬೇರೆ ಪಕ್ಷದ ನಾಯಕರಿಗೆ, ಜುಲೈ 28 ರಂದು ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಉತ್ತರ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬಿಜೆಪಿ ಜನರಿಂದ ಮೇಲೆ ಬಂದಿರುವ ಪಕ್ಷ....