Saturday, July 4, 2026

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ನೀಚ ರಾಜಕಾರಣ ಮಾಡುತ್ತಿದೆ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ

https://www.youtube.com/watch?v=9A966t00yXs ಬೆಂಗಳೂರು: ‘ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ? ಅವರ ನೋವು, ದುಃಖ, ಬೇಸರವನ್ನು ವ್ಯಕ್ತಪಡಿಸಿದರು....

ಕರಾವಳಿಯ ರಾಜಕೀಯ ರಂಗದ ಭೀಷ್ಮ, ಬಿಜೆಪಿಯ ಹಿರಿಯ ರಾಜಕಾರಣಿ ಎ.ಜಿ ಕೊಡ್ಗಿ ವಿಧಿವಶ

ಬೆಂಗಳೂರು: ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಹಿರಿಯ ರಾಜಕಾರಣಿ ಎ.ಜಿ. ಕೊಡ್ಗಿ ವಯೋಸಹಜ ಖಾಯಿಲೆಯಿಂದಾಗಿ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎ.ಜಿ. ಕೊಡ್ಗಿ ಅವರು ಕರಾವಳಿಯ ರಾಜಕೀಯ ರಂಗದ ಭೀಷ್ಮನಾಗಿ ಕಾರ್ಯ ನಿರ್ವಹಿಸಿದ್ದರು. ಸಹಕಾರ ರಂಗ, ಕೃಷಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ...

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಜೆಪಿ ಇಡಿ ಮೂಲಕ ಮಾನಸಿಕ ಕಿರುಕುಳ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು: ಬಿಜೆಪಿ ಸರ್ಕಾರ ಇಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದೆ. ಅವರನ್ನು ಜೈಲಿಗೆ ಹಾಕಲು ಹೊರಟಿದೆ. ಆದರೆ ಇದು ಸಾಧ್ಯವಿಲ್ಲ. ಈ ದೇಶಕ್ಕೆ ಗಾಂಧಿ ಕುಟುಂಬ ಹಾಗೂ ಸಾವಿರಾರು ಕಾಂಗ್ರೆಸ್ ಸದಸ್ಯರು ತಮ್ಮ ಆಸ್ತಿ ಪಾಸ್ತಿಗಳನ್ನೇ ತ್ಯಾಗ ಮಾಡಿದ್ದಾರೆ. ಅಂತಹವರು ಯಾವ ಕಾರಣಕ್ಕೆ ಹಣಕಾಸು ಅವ್ಯವಹಾರ ಮಾಡುತ್ತಾರೆ? ಎಂಬುದಾಗಿ...

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರದಲ್ಲಿ ರಾಹುಲ್ ಗಾಂಧಿಯನ್ನ‌ ವಿಚಾರಣೆ ನಡೆಸುವಂತದ್ದು ಏನಿದೆ – ಡಾ.ಜಿ ಪರಮೇಶ್ವರ್

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರದಲ್ಲಿ ರಾಹುಲ್ ಗಾಂಧಿಯನ್ನ‌ ವಿಚಾರಣೆ ನಡೆಸುವಂತದ್ದು ಏನಿದೆ. ಸುಖಾ ಸುಮ್ಮನೆ ಕಾಂಗ್ರೆಸ್ ನಾಯಕರನ್ನು ಇಡಿ ವಿಚಾರಣೆ ನಡೆಸುತ್ತಿರೋದು ಏಕೆ ಎಂಬುದಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಇಂದು ಇಡಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆಯಲ್ಲಿಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಇಡಿಯಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ...

ವಿಧಾನ ಪರಿಷತ್ ಚುನಾವಣೆ 4 ಕ್ಷೇತ್ರಗಳಲ್ಲಿ ಮತದಾನ!

https://www.youtube.com/watch?v=oeuGWxYnaPQ ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು ಹಾಗೂ ವಾಯುವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆಗೆ ಇಂದು ರಾಜ್ಯದ 11 ಜಿಲ್ಲೆಯ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 417 ಮತಘಟ್ಟೆಗಳನ್ನು ತೆರೆಯಲಾಗಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 49 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಬೆಳಗ್ಗೆ 8 ರಿಂದ 5...

ಬಿಜೆಪಿ ಸರ್ಕಾರದ ಇಡಿ ಅಸ್ತ್ರಕ್ಕೆ ನಾವು ಕುಗ್ಗೋದಿಲ್ಲ, ನಮ್ಮ ಪಕ್ಷದ ನಾಯಕರೊಂದಿಗೆ ನಾವೆಲ್ಲ ಕಾರ್ಯಕರ್ತರು ಇದ್ದೇವೆ – ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=qAS7pgO6YYA ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ‌ ಅವರ ಮೇಲೆ ಇಡಿ ಅಸ್ತ್ರ ಪ್ರಯೋಗಿಸುವ ಮೂಲಕ, ತನಿಖಾ ಏಜನ್ಸಿಗಳನ್ನು ತನ್ನ ಇಚ್ಛೆಯಂತೆ ಬಳಸಿಕೊಳ್ಳುತ್ತಿರೋ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಎಂದಿಗೂ ಕುಗ್ಗುವುದಿಲ್ಲ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವ‌ ಬಿ ಜೆಡ್ ಜಮೀರ್ ಅಹ್ಮದ್...

ಮಂಡ್ಯದಲ್ಲಿ ಪದವೀಧರ ಚುನಾವಣೆಯಲ್ಲಿ ಪ್ರತಿ ಮತದಾರರಿಗೆ 2 ಸಾವಿರ ರೂ ಹಂಚಿಕೆ

ಮಂಡ್ಯ : ನಾಳೆ ನಡೆಯಲಿರುವಂತ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಣದ ಹೊಳೆಯನ್ನೇ ಹರಿಸಲಾಗಿದೆ. ಪ್ರತಿ ವೋಟ್ ಗೆ ಮತದಾರರಿಗೆ 2 ಸಾವಿರ ರೂ ಹಂಚಿಕೆಯನ್ನು ಮಾಡಲಾಗುತ್ತಿದೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪದವೀಧರ ಮತದಾರರಿಗೆ 2,000 ರೂ ಹಣವನ್ನು ಕವರ್​ನಲ್ಲಿ ಇರಿಸಿ ಮತದಾರರಿಗೆ ಹಂಚಿಕೆ ಮಾಡಲಾಗಿದೆ....

ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಶಿಕ್ಷಕರ ನೈಜ ಪ್ರತಿನಿಧಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಬಸವರಾಜ ಹೊರಟ್ಟಿ ಶಿಕ್ಷಕರ ನೈಜ ಪ್ರತಿನಿಧಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿಯ ಕೆ ಎಲ್ ಇ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರವಾಗಿ ಶಿಕ್ಷಕ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೆಲ್ಲುವ ಕುದುರೆ ಹಾಗೂ ಗೆಲ್ಲಿಸುವ ಪಕ್ಷ ಒಂದಾಗಿದೆ....

ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಸ್ಥಾನಗಳಲ್ಲಿ ಗೆಲುವು – ಸಿಎಂ ಬೊಮ್ಮಾಯಿ ವಿಶ್ವಾಸ

ಹುಬ್ಬಳ್ಳಿ : ಎಲ್ಲೆಡೆ ಬಿಜೆಪಿ ಪರವಾದ ಪ್ರತಿಕ್ರಿಯೆಯನ್ನು ಗಮನಿಸಿದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕೂ ಸ್ಥಾನ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ತೆರಳುತ್ತಿದ್ದು, ಇಫ್ಯೂವರೆಗೂ ನಡೆದಿರುವ ಅಭಿಯಾನ ಮತ್ತು ಪ್ರತಿಕ್ರಿಯೆಗಳನ್ನು ಪರಿಗಣಿಸಿದರೆ ಭಾ.ಜ.ಪಕ್ಕೆ...

BREAKING NEWS: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: ಬಿಜೆಪಿ ಮೂವರು, ಕಾಂಗ್ರೆಸ್ ಓರ್ವ ಅಭ್ಯರ್ಥಿ ಗೆಲುವು

ಬೆಂಗಳೂರು: ಇಂದು ನಡೆದಂತ ರಾಜ್ಯಸಭೆ ಚುನಾವಣೆಯ ಮತಏಣಿಕೆ ಕಾರ್ಯ ಅಂತಿಮ ಹಂತದಲ್ಲಿದ್ದು, ಕಣದಲ್ಲಿದ್ದಂತ ಬಿಜೆಪಿಯ ಮೂವರು ಅಭ್ಯರ್ಥಿಗಳು, ಕಾಂಗ್ರೆಸ್ ನ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿ ಇದೆ. ಬಿಜೆಪಿಯ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಹಾಗೂ ಲೇಹರ್ ಸಿಂಗ್ ಮೂವರು ಗೆಲುವು ಸಾಧಿಸಿದ್ದಾರೆ....
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img