ಬೆಂಗಳೂರು ನಗರದ ಖಾಸಗಿ ಕ್ಲಿನಿಕ್ವೊಂದರಲ್ಲಿ 22 ವರ್ಷದ ಯುವತಿಗೆ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಆರೋಪದ ಹಿನ್ನೆಲೆಯಲ್ಲಿ 56 ವರ್ಷದ ಚರ್ಮರೋಗ ತಜ್ಞನನ್ನು ಅಶೋಕ್ನಗರ ಪೊಲೀಸ್ರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75 ಅಡಿ ಲೈಂಗಿಕ ಕಿರುಕುಳ ಮತ್ತು ಸೆಕ್ಷನ್ 79 ಮಹಿಳೆಯ ನಮ್ರತೆಯನ್ನು ಅವಮಾನಿಸಿದ ಅಡಿಯಲ್ಲಿ ಪ್ರಕರಣ...
ಬೆಂಗಳೂರಿನ ಹದಗೆಟ್ಟ ರಸ್ತೆಗುಂಡಿಗಳು, ಕಸದ ವಿಲೇವಾರಿ ಸಮಸ್ಯೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯ ಕುರಿತು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಇತ್ತೀಚೆಗೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.
ಈ ಟೀಕೆಗೆ ಪ್ರತಿಕ್ರಿಯೆಯಾಗಿ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ದಿ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲವು ಸಚಿವರು ಖಾರವಾಗಿ ಪ್ರತಿಕ್ರಿಯಿಸಿದ್ದರು. ಕಿರಣ್ ಮಜುಂದಾರ್ ಶಾ...
ಹಾಸನಾಂಬೆಯ ಉತ್ಸವ ಅಕ್ಟೋಬರ್ 22 ನಾಳೆ ಕೊನೆಗೊಳ್ಳಲಿದೆ. ಕಳೆದ 12 ದಿನಗಳಿಂದ ದೇಶದ ಮೂಲೆ ಮೂಲೆಗಳಿಂದ ಹರಿದು ಬಂದ ಭಕ್ತ ಸಾಗರ ಹಾಸನಾಂಬೆಯ ಆಶೀರ್ವಾದ ಪಡೆಯುತ್ತಿದ್ದಾರೆ. 23 ಲಕ್ಷಕ್ಕೂ ಅಧಿಕ ಭಕ್ತರು ದರ್ಶನ ಪಡೆದುಕೊಂಡಿದ್ದಾರೆ. ಟಿಕೆಟ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ಬರೋಬ್ಬರಿ 17 ಕೋಟಿ ರೂ ಹೆಚ್ಚು ಆದಾಯ ಹರಿದು ಬಂದಿದೆ. ಆ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಅಶೋಕ ಜನಮನ-2025 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥರಾಗಿದ ಘಟನೆ ನಡೆದಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಮಾಹಿತಿ ನೀಡಿದ್ದು, ಘಟನೆಯಲ್ಲಿ ಒಟ್ಟು 13 ಮಂದಿ ಅಸ್ವಸ್ಥರಾಗಿದ್ದರು. ಆದರೆ...
ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 23, ಬುಧವಾರದಂದು ಮಂತ್ರಾಲಯದ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಿದ್ದಾರೆ.
ಹಾಗಾದ್ರೆ ಡಿ.ಕೆ. ಶಿವಕುಮಾರ್ ಅವರು ಎಲ್ಲೆಲ್ಲಿ ಪೂಜೆ ಸಲ್ಲಿಸಲಿದ್ದಾರೆ ಅನ್ನೋದನ್ನ ನೋಡೋದಾದ್ರೆ ಅವರ ಪ್ರವಾಸದ ವೇಳಾಪಟ್ಟಿಯ ಪ್ರಕಾರ, ಮೊದಲಿಗೆ...
ಜೀನಿ ಕಂಪನಿಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿ ಹಬ್ಬವನ್ನು ವಿಜೃಂಭಣೆಯಿಂದ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಎರಗುಂಟೆ ಗ್ರಾಮದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿತ್ತು.
ಈ ಸಂಧರ್ಭದಲ್ಲಿ ಜೀನಿ ಕಂಪನಿಯ ಮಾಲೀಕರಾದ ಶ್ರೀ ದಿಲೀಪ್ ಕುಮಾರ್ ಅವರ ನೇತೃತ್ವದಲ್ಲಿ, ಜೀನಿ ಸಂಸ್ಥೆಯಲ್ಲಿ ಕೆಲಸಮಾಡುತ್ತಿರುವ 500ಕ್ಕೂ ಹೆಚ್ಚು...
ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಎನ್ಡಿಆರ್ಎಫ್ ನಿಗದಿಪಡಿಸಿದ ಮೊತ್ತಕ್ಕಿಂತಲೂ ₹8,500 ಕೋಟಿ ಹೆಚ್ಚುವರಿ ನೆರವು ಅಗತ್ಯವಿದೆ ಎಂದು ಹೇಳಿದ ಅವರು, ಕೇಂದ್ರ ಸಚಿವರು ಮತ್ತು ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತಬೇಕು ಎಂದು...
ಮೈಸೂರು: ಆರ್ಥಿಕ ಇಲಾಖೆಯ ಅನುಮೋದನೆ ಲಭ್ಯವಾಗದ ಹಿನ್ನೆಲೆಯಲ್ಲಿ, ಮೈಸೂರು ಮಹಾನಗರ ಪಾಲಿಕೆಯನ್ನು ಈ ವರ್ಷ ಗ್ರೇಡ್–1 ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಸರ್ಕಾರದ ಯೋಜನೆ ಕೈಬಿಡಲಾಗಿದೆ.
ಮೈಸೂರನ್ನು ಬೆಂಗಳೂರಿನ ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮಹಾನಗರ ಪಾಲಿಕೆಯನ್ನಾಗಿ ರೂಪಿಸುವ ಕುರಿತು ಸರ್ಕಾರ ಚಿಂತನೆ ನಡೆಸಿತ್ತು. ಈ ಯೋಜನೆಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಆಸಕ್ತಿ...
ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ...
ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ, ಕಾಂಗ್ರೆಸ್ ಮಹಾ ದೋಖಾ ಮಾಡ್ತಿದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ. ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಹೀಗಂತ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ....