ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ.
ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...
ಬೆಂಗಳೂರು ಮೆಟ್ರೋಗೆ ಬಸವ ಮೆಟ್ರೋ ಎಂದು ಮರುನಾಮಕರಣ ಮಾಡುವ ಬಗ್ಗೆ ಚರ್ಚೆ ಆರಂಭವಾಗಿದೆ. ಅಕ್ಟೋಬರ್ 4ರಂದು ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ವೀರಶೈವ-ಲಿಂಗಾಯತ ಸಮಾಜದವರು ಮೆಟ್ರೋಗೆ ಬಸವಣ್ಣನ ಹೆಸರಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಒತ್ತಾಯಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ...
ಸಿಲಿಕಾನ್ ವ್ಯಾಲಿ, ಐಟಿಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ಜನರ ತಾಳ್ಮೆ ಪರೀಕ್ಷಿಸುವ ಮಟ್ಟಕ್ಕೆ ತಲುಪಿದೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಸ್ತೆಗಳಲ್ಲಿ ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕುವುದು ಬೆಂಗಳೂರಿನ ಜನರ ದಿನಚರಿಯ ಭಾಗವಾಗಿಬಿಟ್ಟಿದೆ. ಸರ್ಕಾರ ಹಲವು ಕ್ರಮ ಕೈಗೊಂಡರೂ ಟ್ರಾಫಿಕ್ ನಿಯಂತ್ರಣ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಟ್ರಾಫಿಕ್...
ರಾಯಚೂರಿನ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಕೆ. ಅವರು ಇತ್ತೀಚೆಗೆ ನಡೆದ RSS ಪಥಸಂಚಲನದಲ್ಲಿ ಭಾಗವಹಿಸಿರುವ ಘಟನೆ ಇದೀಗ ವಿವಾದಕ್ಕೆ ಕಾರಣವಾಗಿದೆ.
ಸರ್ಕಾರಿ ಅಧಿಕಾರಿಯಾಗಿರುವ ಪ್ರವೀಣ್ ಕುಮಾರ್ ಅವರು ಶಾಸಕರಾದ ಮಾನಪ್ಪ ವಜ್ಜಲ್ ಅವರೊಂದಿಗೆ RSS ನ ಸಮವಸ್ತ್ರ ಧರಿಸಿ,...
ಮಾಟಮಂತ್ರದಿಂದ ಮುಕ್ತಿ ಅಥವಾ ರಹಸ್ಯ ನಿಧಿಗಳನ್ನು ಹೊರತೆಗೆಯಲು ಪೂಜೆ ಮಾಡುತ್ತೇವೆ ಎಂದು ಹೇಳಿ ಜನರನ್ನು ವಂಚಿಸುತ್ತಿದ್ದ 49 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಲಾರ ಮೂಲದ ದಾದಾ ಪೀರ್ ಎಂದು ಗುರುತಿಸಲಾಗಿದ್ದು, ಅವನಿಂದ ₹53 ಲಕ್ಷ ಮೌಲ್ಯದ 485.4 ಗ್ರಾಂ ಕದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 26ರಂದು ಹುಳಿಮಾವು ಪೊಲೀಸರಿಗೆ ಬನ್ನೇರುಘಟ್ಟ ಮುಖ್ಯರಸ್ತೆಯ ಬಳಿ...
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿದವರು ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅಲ್ಲ, ನಾನು. ಆದರೂ ಕೆಲವರು ನನ್ನನ್ನು ಯಾಕೆ ದ್ವೇಷಿಸುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು.
ಬಾಗಲಕೋಟೆ ಜಿಲ್ಲೆಯ ಬಂಡಿಗಣಿ ಮಠದಲ್ಲಿ ಸೋಮವಾರ ನಡೆದ ವಿಶ್ವಶಾಂತಿಯ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿ, ಸರ್ಕಾರಿ...
Tumakuru News: ತಿಪಟೂರು: ತಿಪಟೂರು ನಗರದ ನಗರಸಭೆ ವೃತದಿಂದ ಮಿನಿವಿಧಾನಸೌಧ ವರೆಗೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಮಾನ್ಯ ಗ್ರೇಡ್ ಟು ತಹಶೀಲ್ದಾರ್ ಜಗನ್ನಾಥ್ ರವರ ಮೂಲಕ ಮಾನ್ಯ ರಾಷ್ಟ್ರಪತಿಗಳಿಗೆ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕೊಪ್ಪ ಶಾಂತಪ್ಪ ಭಾರತಕ್ಕೆ ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಮನುವಾದಿಗಳು,...
Tumakuru News: ತುಮಕೂರು: ಸಿಜೆಐ ಮೇಲೆ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ ಖಂಡಿಸಿ ಸಂಶೋಧನೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
100ಕ್ಕೂ ಹೆಚ್ಚು ಸ್ನಾತಕೋತ್ತರ ಪದವೀಧರ ವಿದ್ಯಾರ್ಥಿಗಳು, ತುಮಕೂರು ವಿವಿ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನ ಮೆರವಣಿಗೆ ನಡೆಸಿದ್ದು, ಮಾರ್ಗ ಮಧ್ಯೆ ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿದರು..
ಈ ವೇಳೆ...
ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ ನಿರ್ದೇಶನ ನೀಡಿದೆ. ಲೆಕ್ಕಪರಿಶೋಧನೆ ವೇಳೆ ಯಾವುದೇ ಅಕ್ರಮಗಳು ಅಥವಾ ಹಣಕಾಸು ದುರುಪಯೋಗ ಪತ್ತೆಯಾದರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ತಿಳಿಸಿದೆ.
ಶಿವಪುತ್ರ ಎಂ. ಹೊನ್ನಳ್ಳಿ ಅವರ...
ಬಿಹಾರ ವಿಧಾನಸಭಾ ಚುನಾವಣೆಯನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವರು 'ಬಿಹಾರ ಚುನಾವಣೆಗೆ ಫಂಡಿಂಗ್' ಮಾಡಲು ವಸೂಲಿಗೆ ಇಳಿದಿದ್ದಾರೆ ಎಂದು ಹೇಳಿದ್ದಾರೆ.
ಅಶೋಕ ಅವರ ಆರೋಪ ಪ್ರಕಾರ, ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಿಂದ ಹಣವನ್ನು ಕಾಂಗ್ರೆಸ್ ಹೈಕಮಾಂಡಿಗೆ...
ತುಮಕೂರು ಜಿಲ್ಲೆಯಲ್ಲಿ ನವಿಲುಗಳ ಸರಣಿ ಸಾವು ಆತಂಕಕಾರಿ ತಿರುವು ಪಡೆದುಕೊಂಡಿದೆ. ಜಿಲ್ಲೆಯ ಹೊರವಲಯದ ಗೂಳರಿವೆ ಸಮೀಪದ ಸುಣ್ಣಕಲ್ಲು ಕಟ್ಟೆ ಪ್ರದೇಶದಲ್ಲಿ ಮತ್ತೆ ಎರಡು ನವಿಲುಗಳ ಮೃತದೇಹ...