ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಹೊಸ ರೂಪ ಪಡೆಯುತ್ತಿದೆ. ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸರಕಾರ ಜೊತೆಯಾಗಿ ಕನ್ನಡ ಕಟ್ಟುವ ಕಾರ್ಯವನ್ನು ನಡೆಸಲಿದೆ. ಸಾಹಿತ್ಯದ ಒಡನಾಟ ಇಲ್ಲದವರಿಗೂ ಸಾಹಿತ್ಯದಲ್ಲಿ ಆಸಕ್ತಿ ಮೂಡಿಸುವ ಕಾರ್ಯ ಪರಿಷತ್ತು ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಿಎಮ್ ಗ್ರಹಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ...
ಬೆಂಗಳೂರು : ಡಾ. ಆರ್.ಬಾಲಸುಬ್ರಹ್ಮಣ್ಯ ಸಮಿತಿಯು ಇಂದು ಕರಡು ಯುವ ನೀತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು ದೇಶದ ಶೇ. 46 ರಷ್ಟು ಜನಸಂಖ್ಯೆ ಯುವಕರಾಗಿದ್ದು, ಇವರನ್ನು ದೇಶ ಕಟ್ಟುವ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗಿದೆ. ಆರ್ಥಿಕ ಅಭಿವೃದ್ಧಿಯ ಮೂಲಕ ಯುವ ಸಬಲೀಕರಣವಾಗಬೇಕಾಗಿದೆ. ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣವೂ ಆಗಬೇಕಾಗಿದೆ....
ಬಳ್ಳಾರಿ : ಶಾಸಕರ ಅನುದಾನದ ಕಾಮಗಾರಿಗಳು, ಎಚ್‍ಎಸ್‍ಡಿಪಿ, ಎಸ್‍ಸಿಪಿ-ಟಿಎಸ್‍ಪಿ ಸೇರಿದಂತೆ ಇಲಾಖೆಗೆ ನಿಗದಿಯಾಗಿರುವ ಎಲ್ಲಾ ಬಾಕಿ ಕಾಮಗಾರಿಗಳು ಆಗಸ್ಟ್ ಅಂತ್ಯಕ್ಕೆ ಪೂರ್ಣಗೊಳ್ಳಬೇಕು ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿರುವ ಕಾಮಗಾರಿಗಳನ್ನು ಆಯಾ ಕ್ಷೇತ್ರದ ಶಾಸಕರ ಸಮ್ಮುಖದಲ್ಲಿ ಶೀಘ್ರ ಕಾರ್ಯಾರಂಭಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಲೋಕೋಪಯೋಗಿ...
ಶಿವಮೊಗ್ಗ : ರಸ್ತೆ ಸುರಕ್ಷತಾ ನಿಯಮಗಳ ಸಮರ್ಪಕ ಪಾಲನೆಯಿಂದ ಅಪಘಾತಗಳನ್ನು ತಪ್ಪಿಸಬಹುದಾಗಿದ್ದು, ವಿದ್ಯಾರ್ಥಿಗಳು, ಹದಿಹರೆಯದ ಯುವಜನತೆಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕೆಂದು ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ತಿಳಿಸಿದರು.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಾರಿಗೆ ಇಲಾಖೆ ವತಿಯಿಂದ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ರಸ್ತೆ ಸುರಕ್ಷತಾ ಆಂದೋಲನ’ ಕುರಿತಾದ ಕಾರ್ಯಾಗಾರ...
ಬೆಂಗಳೂರು : ಕೋವಿಡ್ ಉಪಟಳದ ನಿರ್ವಹಣೆಯಲ್ಲಿ ಭಾರತವು ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಲ್ಲಿ ಇಂದು ಪ್ರಕಟಿಸಿದರು.
ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯ ಮತ್ತು ಭಾರತೀಯ ಕೈಗಾರಿಕಾ ಒಕ್ಕೂಟ ನಗರದಲ್ಲಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ದಿ ಸಮ್ಮೇಳನದ ಮೂರನೇ ಆವೃತ್ತಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕೋವಿಡ್-19 ರ...
ಮಂಡ್ಯ: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಕಳೆದ ಜೂನ್ 1ರಿಂದ ಆಗಸ್ಟ್ 4ರವರೆಗೆ 299 ಮನೆಗಳು ಸಂಪೂರ್ಣ ಹಾನಿಗೊಂಡಿದ್ದರೇ, 64 ಜನರು ವರುಣನ ಆರ್ಭಟಕ್ಕೆ ಬಲಿಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಇಂದು ಜಿಲ್ಲೆಯಲ್ಲಿ ಮಳೆಯಿಂದ ಉಂಟಾದಂತ ಹಾನಿಯನ್ನು ಪರಿಶೀಲಿಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಮಳೆಯಿಂದಾಗಿ 14 ಜಿಲ್ಲೆಗಳ ಜನರು ಭಾದಿತರಾಗಿದ್ದಾರೆ....
ಬೆಂಗಳೂರು: ದಿನಾಂಕ 11-08-2022ರಂದು ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿತ್ತು. ಆದ್ರೇ ದಿನಾಂಕ 01-08-2022ರಂದು ನಾಮಪತ್ರ ಸಲ್ಲಿಸೋದಕ್ಕೆ ಕೊನೆಯ ದಿನವಾಗಿದ್ದರೂ ಬಿಜೆಪಿಯ ಅಭ್ಯರ್ಥಿ ಬಾಬೂರಾವ್ ಚಿಂಚನಸೂರು ಮಾತ್ರ ಸಲ್ಲಿಸಿದ್ದರು. ಹೀಗಾಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮಾಹಿತಿ ನೀಡಿದ್ದು, ಇಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ...
ಬೆಂಗಳೂರು : ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಷಾ ಅವರೊಂದಿಗೆ ಭಾಗವಹಿಸಿ ಮಾತನಾಡಿದರು.
ಬೆಂಗಳೂರಿನಲ್ಲಿ ಜೆನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ...
ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣರವರು ಆಮ್ ಆದ್ಮಿ ಪಾರ್ಟಿಗೆ ಗುರುವಾರ ಸೇರ್ಪಡೆಯಾದರು. ಹೊಟೇಲ್ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಎಎಪಿ ಸೇರ್ಪಡೆ ಬಳಿಕ ಮಾತನಾಡಿದ ಟೆನ್ನಿಸ್ ಕೃಷ್ಣ, “ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್ ಆದ್ಮಿ ಪಾರ್ಟಿ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ,...
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಆಕ್ರೋಶವನ್ನ ಹೊರ ಹಾಕಿದ್ದಾರೆ. ಬೆಂಗಳೂರಿಗೆ ಆಗಮಿಸಿರೋ ಅಮಿತ್ ಶಾ ಅವರನ್ನ, ಸಿಎಂ ಬೊಮ್ಮಾಯಿ ಬೆಳಗ್ಗೆ ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ರು. ಈ ವೇಳೆ ರಾಜ್ಯದಲ್ಲಿ ನಡೆದ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆ ವಿಚಾರವಾಗಿ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...