Sunday, December 28, 2025

ರಾಜ್ಯ

ವರನಟ ಡಾ.ರಾಜ್ ಕುಮಾರ್ 94ನೇ ಹುಟ್ಟುಹಬ್ಬ: ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಕೇಕ್ ಕತ್ತರಿಸಿ ಆಚರಣೆ

ಬೆಂಗಳೂರು: ಕನ್ನಡದ ವರನಟ ದಿ. ರಾಜಕುಮಾರ್ ಅವರ 94ನೇ ಹುಟ್ಟುಹಬ್ಬದ ಪ್ರಯುಕ್ತ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೋಕಾಕ್ ಚಳವಳಿ ವೃತ್ತ (18ನೇ ಕ್ರಾಸ್) ಮತ್ತು ಸುಬ್ರಹ್ಮಣ್ಯ ನಗರದ ಸಂಗೊಳ್ಳಿ ರಾಯಣ್ಣ ಉದ್ಯಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಗಳಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು. ಎರಡೂ ಕಡೆಗಳಲ್ಲಿ ರಾಜಕುಮಾರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ...

ಡಾ.ರಾಜ್‍ಕುಮಾರ್ ಶ್ರೇಷ್ಠ ಕಲಾವಿದರು – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್

ಬೆಂಗಳೂರು: ಇಂದು ಮಹಾನ್ ನಟರಾದ ಡಾ. ರಾಜ್‍ಕುಮಾರ್ ಅವರ ಜನ್ಮದಿನ. ಕನ್ನಡ ನಾಡಿನ ಸಂಸ್ಕೃತಿ, ಭಾಷೆ ಮತ್ತು ಪರಂಪರೆಗಳನ್ನು ಉಳಿಸಿದ ಒಬ್ಬ ಶ್ರೇಷ್ಠ ಕಲಾವಿದರಾಗಿ ಡಾ. ರಾಜ್‍ಕುಮಾರ್ ಅವರು ಕೆಲಸ ಮಾಡಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಕಂಠೀರವ ಸ್ಟುಡಿಯೋದ ಡಾ.ರಾಜ್‍ಕುಮಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಿ...

ಮಠಗಳು ಮೌಲ್ಯಗಳನ್ನು ಪುನರ್ ಸ್ಥಾಪಿಸಿದರೆ ಮಾತ್ರ ಸಮಾಜದಲ್ಲಿ ಮಾನವ ಸಂಬಂಧಗಳು ಬೆಳೆಯುತ್ತವೆ – ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ : ಅಂತ:ಕರಣದಿಂದ ಮಾನವ ಸಂಬಂಧಗಳ ಪುನರ್ ಸ್ಥಾಪನೆ ಸಾಧ್ಯ. ಮಠಗಳು ಮೌಲ್ಯಗಳನ್ನು ಪುನರ್ ಸ್ಥಾಪಿಸಿದರೆ ಮಾತ್ರ ಸಮಾಜದಲ್ಲಿ ಮಾನವ ಸಂಬಂಧಗಳು ಬೆಳೆಯುತ್ತವೆ.ಇದೆ ನಮ್ಮ ಅಂತರ್ಗತ, ಗುಣಧರ್ಮ ಮತ್ತು ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಕ್ಷೇತ್ರ, ಹರಿಹರ ಇವರ ವತಿಯಿಂದ ಪಂಚಮಸಾಲಿ ಗುರುಪೀಠದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯದ...

86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸೆ.23ರಿಂದ 25ರವರೆಗೆ ಹಾವೇರಿಯಲ್ಲಿ ಆಯೋಜನೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಅರ್ಥಪೂರ್ಣ ಗೋಷ್ಠಿ ಆಯೋಜಿಸಿ ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು...

ರಾಜ್ಯದಲ್ಲಿ ಇಂದು 139 ಮಂದಿಗೆ ಕೋವಿಡ್, ಬೆಂಗಳೂರಿನಲ್ಲಿ 100ರ ಗಡಿದಾಟಿದ ಕೇಸ್

ಬೆಂಗಳೂರು: ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ ಹೊಸದಾಗಿ 139 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ ಬೆಂಗಳೂರು ನಗರದಲ್ಲಿ 132, ಬೆಂಗಳೂರು ಗ್ರಾಮಾತಂರ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ ಮತ್ತು ರಾಮನಗರ ಜಿಲ್ಲೆಯಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದೆ ಎಂದು...

3 ತಿಂಗಳಲ್ಲಿ ಏಳು ನೂತನ ವಿ.ವಿ.ಗಳ ಕಾರ್ಯಾರಂಭ – ಸಚಿವ ಡಾ.ಅಶ್ವತ್ಥನಾರಾಯಣ

ಹರಿಹರ: ಈ ವರ್ಷದ ಬಜೆಟ್ಟಿನಲ್ಲಿ ಘೋಷಿಸಿರುವ 7 ನೂತನ ವಿಶ್ವವಿದ್ಯಾಲಯಗಳನ್ನು ಇನ್ನು 3 ತಿಂಗಳಲ್ಲಿ ಸ್ಥಾಪಿಸಲಾಗುವುದು ಮತ್ತು 7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಉನ್ನತೀಕರಣವನ್ನು ಸಹ ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಪಂಚಮಚಾಲಿ ಪೀಠದಲ್ಲಿ ಶನಿವಾರ ಏರ್ಪಡಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ...

ಪಿಎಸ್ಐ ನೇಮಕಾತಿ ಅಕ್ರಮದ ಕಿಂಗ್ ಪಿನ್ ಮಹಾಂತೇಶ್ ಗೆ 7 ದಿನ ಸಿಐಡಿ ಕಸ್ಟಡಿ

ಕಲಬುರ್ಗಿ: 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ಪೊಲೀಸರು ಬಂಧಿಸಿದ್ದಂತ ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ಗೆ ಕೋರ್ಟ್ 7 ದಿನ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. ನಿನ್ನೆ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ನನ್ನು ಬಂಧಿಸಿದ್ದರು. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ...

ರಾಜ್ಯದ ಸಹಕಾರಿ ಕ್ಷೇತ್ರದಲ್ಲೂ ಹಣಕ್ಕಾಗಿ ಉದ್ಯೋಗಗಳ ಮಾರಾಟ – ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ

ಬೀದರ್: ರಾಜ್ಯದ ಬಡ ಮಕ್ಕಳಿಗೆ ಪಾರದರ್ಶಕವಾಗಿ ಉದ್ಯೋಗ ಕೊಡುವ ಜವಾಬ್ದಾರಿಯನ್ನು ರಾಜ್ಯ ಸರಕಾರವು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ನೇರ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; “ಪಿಎಸ್ʼಐ ನೇಮಕಾತಿ ಅಷ್ಟೇ ಅಲ್ಲ ಸಹಕಾರಿ ಕ್ಷೇತ್ರದಲ್ಲಿಯೂ ಸರಕಾರಿ ಉದ್ಯೋಗಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು. ಬೀದರ್ʼನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಜಿಲ್ಲಾ ಹಾಲು ಒಕ್ಕೂಟಗಳಲ್ಲಿ...

ಬಿಬಿಎಂಪಿ ಆಯುಕ್ತರಿಂದ ಮೈಸೂರು ರಸ್ತೆ ವೃಷಭಾವತಿ‌ ರಾಜಕಾಲುವೆ ದುರಸ್ತಿ ಕಾಮಗಾರಿ ತಪಾಸಣೆ

ಬೆಂಗಳೂರು: ನಗರದ ಮೈಸೂರು ರಸ್ತೆ ಕೆಂಗೇರಿ ಬಿಡಿಎ ಅಪಾರ್ಟ್ಮೆಂಟ್ ಬಳಿ ವೃಷಭಾವತಿ ರಾಜಕಾಲುವೆಯ ತಡೆಗೋಡೆ ಕೊಚ್ಚಿ ಹೋಗಿದ್ದ ಸ್ಥಳಕ್ಕೆ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಭೇಟಿ ನೀಡಿ ದರಸ್ತಿ ಕಾಮಗಾರಿಯ ಪರಿಶೀಲನೆ ನಡೆಸಿ, ಮುಂದಿನ‌ 45 ದಿನದೊಳಗಾಗಿ ಸಂಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ...

ಪಿ.ಎಸ್.ಐ.ನೇಮಕಾತಿ ಅಕ್ರಮದ ಆಡಿಯೋ ಸಂಭಾಷಣೆ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಪಿಎಸ್ ಐ ನೇಮಕಾತಿಯ ಯಾವುದೇ ಬ್ಯಾಚ್ ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನು ಕೇಳಿಲ್ಲ.ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img