Tuesday, September 22, 2026

ರಾಜಕೀಯ

ಅ.31ಕ್ಕೆ ಖರ್ಗೆ ಕೋಟೆಯಲ್ಲಿ ಪಥಸಂಚಲನ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮಭೂಮಿ ಗುರುಮಠಕಲ್‌ ಪಟ್ಟಣದಲ್ಲಿ, ಅಕ್ಟೋಬರ್‌ 31ರಂದು RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದೆ. ಯಾದಗಿರಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯಸಭಾ ಸದಸ್ಯರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ, ಈ ಹಿಂದೆ 8 ಬಾರಿ ಗುರುಮಠಕಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಪಥಸಂಚಲನಕ್ಕೆ, ಮಾರ್ಗ ಮತ್ತು ಭದ್ರತಾ...

ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಾ..?

ನವೆಂಬರ್​ ಕ್ರಾಂತಿ, ಅಧಿಕಾರ ಹಂಚಿಕೆ ವಿಚಾರವಾಗಿ ಮಾದೇಶ್ವರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವಧರ್ಮ ಪೀಠದಲ್ಲಿ, ಧರ್ಮ ಸಂಕಿರಣ ನಡೆಯಿತು. ಈ ವೇಳೆ ಪೀಠಾಧ್ಯಕ್ಷರಾದ ಮಾದೇಶ್ವರ ಸ್ವಾಮೀಜಿ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟಕ ಭವಿಷ್ಯ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಉಳಿಯುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ....

ಟನಲ್ ಬೇಡ ಅನ್ನೋಕೆ ತೇಜಸ್ವಿ ಯಾರು? ಅವನೊಬ್ಬ ಎಳಸು ಎಂದು ಡಿಕೆಶಿ ಗರಂ!

ಬೆಂಗಳೂರು ನಗರಾಭಿವೃದ್ಧಿ ಯೋಜನೆ ಹಾಗೂ ಟನಲ್‌ ರಸ್ತೆ ನಿರ್ಮಾಣ ವಿಚಾರದ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಟನಲ್ ರೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತೇಜಸ್ವಿ ಸೂರ್ಯ ವಿರುದ್ಧ ಡಿಕೆ ಶಿವಕುಮಾರ್ ತೀವ್ರ ಟೀಕೆ ಮಾಡಿದ್ದಾರೆ. ಮೊನ್ನೆಯಷ್ಟೇ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ...

ಆ ದಿನಕ್ಕೆ ಕಾಯುತ್ತಿದ್ದಾರೆ ಡಿಕೆಶಿ!

ನವೆಂಬರ್‌ 20ಕ್ಕೆ ಬೆಂಗಳೂರಿಗೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಆಗಮಿಸುತ್ತಿದ್ದಾರೆ. ರಾಹುಲ್ ಗಾಂಧಿ ಬಂದಾಗ ಪಕ್ಷ ನಿಷ್ಠೆ ಮತ್ತು ಸಂಘಟನಾ ಸಾಮರ್ಥ್ಯ ಪ್ರದರ್ಶಿಸಲು, ಡಿ.ಕೆ. ಶಿವಕುಮಾರ್‌ ಸಜ್ಜಾಗಿದ್ದಾರೆ. ರಾಜ್ಯಾದ್ಯಂತ 100 ಕಾಂಗ್ರೆಸ್ ಭವನಗಳಿಗೆ ಶಂಕು ಸ್ಥಾಪನೆ ಮಾಡುವುದರ ಮೂಲಕ, ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈ ನಿಟ್ಟಿನಲ್ಲಿ...

ಚೀನಾ ಮೇಲೆ ಸಾಫ್ಟ್‌ ಆದ ಟ್ರಂಪ್ 10% ಸುಂಕ ಇಳಿಸಿದ್ದು ಯಾವ ಕಾರಣಕ್ಕೆ?

ಚೀನಾ ಮೇಲೆ ಅಮೆರಿಕ ವಿಧಿಸುತ್ತಿರುವ ಶೇಕಡ 57ರಷ್ಟು ಸುಂಕವನ್ನು, ಶೇಕಡ 47ಕ್ಕೆ ಇಳಿಸಲು, ಡೊನಾಲ್ಡ್‌ ಟ್ರಂಪ್‌ ನಿರ್ಧರಿಸಿದ್ದಾರೆ. ಸೌಥ್‌ ಕೊರಿಯಾದ ಬುಸನ್ ನಗರದಲ್ಲಿ ನಡೆಯುತ್ತಿರುವ ಎಪಿಇಸಿ ಶೃಂಗಸಭೆಗೆ ಮುನ್ನ, ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಅವರನ್ನ ಟ್ರಂಪ್‌ ಭೇಟಿಯಾಗಿದ್ದಾರೆ. ಈ ವೇಳೆ ಟ್ರೇಡ್ ಡೀಲ್ ಮಾತುಕತೆ ಅಂತಿಮಗೊಳಿಸಿರುವುದು ತಿಳಿದು ಬಂದಿದೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ...

ಮೋದಿ, ಶಾ, ನಡ್ಡಾ V/S ರಾಹುಲ್‌ ಗಾಂಧಿ

ಬಿಹಾರ ಚುನಾವಣಾ ಕಣ ರಂಗೇರುತ್ತಿದೆ. ಎಲೆಕ್ಷನ್ ಪ್ರಚಾರದ ಭರಾಟೆ ಜೋರಾಗಿದ್ದು, ಕಾವು ಹೆಚ್ಚಾಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ಸಾರ್ವಜನಿಕ ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಾಯಕರು ಏಕಕಾಲಕ್ಕೆ ರ್ಯಾಲಿ,...

ರಾಜ್ಯ ಸರ್ಕಾರಕ್ಕೆ ಮತ್ತೆ ಹೈಕೋರ್ಟ್‌ ಟೆನ್ಷನ್

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವಿರೋಧ ಪಕ್ಷದ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ, ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಹಣಕಾಸು ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ಆಡಳಿತ ಪಕ್ಷದ ಶಾಸಕರಿಗೆ‌ 50 ಕೋಟಿ ರೂ. ಹಾಗೂ ವಿರೋಧ ಪಕ್ಷದ ಶಾಸಕರಿಗೆ...

ಡಿ.ಕೆ. ಶಿವಕುಮಾರ್ ಮೌನದ ಹಿಂದಿರುವ ಅಸಲಿಯತ್ತೇನು?

ನಾಯಕತ್ವ ಬದಲಾವಣೆ ಗದ್ದಲ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯರನ್ನ ಸಿಎಂ ಆಗಿ ಉಳಿಸಿಕೊಳ್ಳಲು ಶತಾಯಗತಾಯ ಸಿದ್ದು ಬಣ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಆಪ್ತರು ಗೌಪ್ಯ ಸಭೆ, ಮಾತುಕತೆ , ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಈ ಬಾರಿ ಸೈಲೆಂಟಾಗಿ ತಂತ್ರಗಾರಿಕೆ ನಡೆಸುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರದ್ದು ಸಹಜವಾಗಿ ಆಕ್ರಮಣಕಾರಿ ವ್ಯಕ್ತಿತ್ವ. ಸಿಎಂ...

ಕಾಂಗ್ರೆಸ್ ನ ಎಲ್ಲ ಗೊಂದಲಗಳಿಗೂ ತೆರೆ ಎಳೆಯೋಕೆ ಮುಹೂರ್ತ ಫಿಕ್ಸ್‌!

ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್‌ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್‌ 26ರೊಳಗೆ ಅಂತಿಮ ತೀರ್ಮಾನ...

ಕರೂರು ದುರಂತದ ಬೆನ್ನಲ್ಲೇ ಮತ್ತೆ ನಟ ವಿಜಯ್‌ ರಾಜಕೀಯ ರ‍್ಯಾಲಿಗೆ ಸಜ್ಜು!

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ, ತಮಿಳುನಾಡಿನ ರಾಜಕೀಯ ಚಟುವಟಿಕೆಯಿಂದ ಹಿಂದೆ ಸರಿದಿದ್ದ ನಟ ವಿಜಯ್‌ ನೇತೃತ್ವದ TVK ಪಕ್ಷ ಇದೀಗ ಮತ್ತೆ ಚಟುವಟಿಕೆಗೆ ಸಜ್ಜಾಗುತ್ತಿದೆ. ನವೆಂಬರ್‌ 5ರಂದು ಮಹಾಬಲಿಪುರಂನಲ್ಲಿ ಪಕ್ಷದ ಮಹತ್ವದ ಸಭೆ ಕರೆದಿದ್ದು, ಭವಿಷ್ಯದ ಕಾರ್ಯತಂತ್ರ ಹಾಗೂ ಪ್ರಚಾರ ಪುನರಾರಂಭದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 27ರಂದು ಕರೂರಿನಲ್ಲಿ ವಿಜಯ್‌...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img