ಚೀನಾದಲ್ಲಿ ನಡೆದ ಎಸ್‌ಸಿಒ ಶೃಂಗಸಭೆ ಬಳಿಕ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಚಲಿತರಾದಂತೆ ಕಾಣಿಸ್ತಿದೆ. ರಷ್ಯಾ ಅಧ್ಯಕ್ಷ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೊತೆ, ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತವಾಗಿ ಕಾಣಿಸಿಕೊಂಡಿದ್ರು.
ಇದು ಭಾರತದ ಮೇಲೆ ಸುಂಕಾಸ್ತ್ರ ಪ್ರಯೋಗಿಸಿದ್ದ ಟ್ರಂಪ್‌ರನ್ನೇ ಕೆಂಗೆಡಿಸಿತ್ತು. ಬಳಿಕ ನಾನು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹಿತ. ಭಾರತ–ಅಮೆರಿಕಾ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ, ಇ.ಡಿ. ನೋಟಿಸ್ ಜಾರಿ ಮಾಡಿದೆ. ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕದ ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್‌ಗೆ, ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆಂದು ಸಲ್ಲಿಸಿದ್ದ ಅರ್ಜಿಯಲ್ಲಿ, ತಮ್ಮ ಬಳಿ ಬ್ರಿಟನ್ ಸರ್ಕಾರದಿಂದ ಬಂದ ಇಮೇಲ್ ಮಾಹಿತಿ...
ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್‌ಗೆ ಕೈದಿ ನಂಬರ್ 15,528ನೇ ನಂಬರ್ ನೀಡಲಾಗಿದೆ. ಜೊತೆಗೆ ಕಾರಾಗೃಹದಲ್ಲಿರುವ ಗ್ರಂಥಾಯದಲ್ಲಿ ಕ್ಲರ್ಕ್ ಕೆಲಸವನ್ನೂ ನೀಡಲಾಗಿದೆ.
ವಿಚಾರಣಾಧೀನ ಕೈದಿಗಳು ಹಾಗೂ ಸಜಾಬಂದಿಗಳಿಗೆ, ಜೈಲಿನ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು. ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ...
Political News: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯದಲ್ಲಿ ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದು, ಸಿಎಂ, ಡಿಸಿಎಂ ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಿಸಿದರು.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್,...
Political News: ಇಂದು ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ"ದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ, ಮಾತನಾಡಿದರು.
ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ. ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು...
ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ರಾಜ್ಯ ಸರ್ಕಾರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಸಲು ಕೈಗೊಂಡ ಮಹತ್ವದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.
ಇವಿಎಂ ಕಾರ್ಯಕ್ಷಮತೆಯ ಮೇಲೆ ಹಲವು ಪ್ರಶ್ನೆಗಳು ಉದ್ಭವಿಸಿರುವುದರಿಂದ, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಸರ್ಕಾರ ಮತ್ತೆ ಬ್ಯಾಲಟ್ ಪೇಪರ್ ಬಳಕೆಗೆ ಮುಂದಾಗಿರುವುದು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಗೊಳಿಸುವುದಾಗಿದೆ ಎಂದು ಅವರು...
ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಅವರಿಗೆ ಸರ್ಕಾರ ಆಹ್ವಾನ ನೀಡಲಾಗಿದೆ. ಇದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು, ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹೈಕೋರ್ಟ್‌ಗೆ ಸಾರ್ವಜನಿಕ...
ವಿದ್ಯಾರ್ಥಿಗಳು ಸಮಾಜದ ಪ್ರತಿಬಿಂಬ. ಆದ್ರೆ ಮಕ್ಕಳಲ್ಲಿ ಅಪರಾಧ ಪ್ರವೃತ್ತಿ ಹೆಚ್ಚಳವಾಗ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ನಿಮಿತ್ತ, ತುಮಕೂರಿ ಅಗಳಕೋಟೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕರನ್ನ ಸನ್ಮಾನಿಸಿ ಮಾತನಾಡಿದ ಸಚಿವ ಪರಮೇಶ್ವರ್ , 14ರಿಂದ 17 ವರ್ಷದವರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗ್ತಿದ್ದಾರೆ. ಇದು ಭಾರೀ ಆತಂಕ ಮೂಡಿಸಿದೆ...
ಜಿಎಸ್‌ಟಿ ಸರಳೀಕರಣದಿಂದ ರಾಜ್ಯಕ್ಕೆ 15,000 ರಿಂದ 20,000 ಕೋಟಿ ರೂ. ನಷ್ಟ ಸಂಭವಿಸುವುದಾಗಿದೆ. ಆದರೂ ಜನಸಾಮಾನ್ಯರ ಮೇಲಿನ ಆರ್ಥಿಕ ಭಾರ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಈ ಲಾಭವನ್ನು ಬಳಕೆದಾರರಿಗೆ ತಲುಪಿಸದೇ ವ್ಯಾಪಾರಿಗಳು ಮತ್ತು ಉದ್ಯಮಿಗಳು ದುರುಪಯೋಗ ಮಾಡಿಕೊಳ್ಳದಂತೆ ತಡೆಯಬೇಕೆಂದು ಅವರು ಕೇಂದ್ರ ಸರ್ಕಾರಕ್ಕೆ...
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಚುರುಕಾಗಿದೆ. ಈ ತನಿಖೆ ಮಧ್ಯೆ ಶಾಸಕ ಜನಾರ್ದನ ರೆಡ್ಡಿ ಅವರು ಸ್ಫೋಟಕ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಸಂಸದ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಶಶಿಕಾಂತ್ ಸೆಂಥಿಲ್ ಅವರು ಕಾನೂನು ಸಮರ ಸಾರಿದ್ದಾರೆ.
ಇಂದು ಶಶಿಕಾಂತ್ ಸೆಂಥಿಲ್ ಅವರು ಸಿಟಿ...