ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ವಿಷಯ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಸುದೀರ್ಘ ಹಾಗೂ ಸಮರ್ಪಕ ಸ್ಪಷ್ಟನೆಗಳೊಂದಿಗೆ ಕಡತವನ್ನು ಮತ್ತೆ ರಾಜ್ಯಪಾಲರ ಅನುಮೋದೆಗಾಗಿ ಕಳುಹಿಸಿದೆ. .
ಸಾಲ ಪಡೆದವರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಕಳುಹಿಸಿದ್ದ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ...
BENGALURU : ದಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿ ಅಂತ ರಾಜ್ಯ ಬಿಜೆಪಿ ಸಂಸದರಿಗೆ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ.
ರಾಜ್ಯದಲ್ಲಿ ಸದ್ಯ ಈಗ ಮೆಟ್ರೋ ಪ್ರಯಾಣದ ದರ ಏರಿಕೆಯಿಂದಾಗಿ ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಮೆಟ್ರೋ ದರ ಏರಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಇನ್ನು ಬೆಲೆ ಏರಿಕೆಯ ವಿಚಾರವಾಗಿ ಬಿಜೆಪಿ ಯವರು ರಾಜ್ಯ...
BJP : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆಗಳು ನನಗಿವೆ ಅಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು,...
BJP : ಬಿಜೆಪಿ ಯಲ್ಲಿ ಈಗ ಎಲ್ಲವೂ ಸರಿ ಇದೆಯಾ? ಈ ಪ್ರಶ್ನೆ ಸದ್ಯ ಎಲ್ಲೆಡೆ ಗಿರಕಿ ಹೊಡೆಯುತ್ತಿದೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕಾಗಿ ಒಳಗೊಳಗೇ ಜಗಳ ಶುರುವಾಗಿದೆ. ಅತ್ತ ಯತ್ನಾಳ್ ನೇತೃತ್ವದ ರೆಬೆಲ್ಸ್ ಟೀಮ್, ಅಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಲು ಶತ ಪ್ರಯತ್ನ ನಡೆಸುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ಭಿನ್ನರಿಂದ ಈಗ ಲಿಂಗಾಯತ...
POLITICAL NEWS : ರಾಜ್ಯ ಬಿಜೆಪಿ ಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ಅನೇಕ ದಿನಗಳಿಂದ ಬಿವೈ ವಿಜಯೇಂದ್ರ ಮತ್ತು ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರು ಒಬ್ಬರ ಮೇಲೆ ಒಬ್ಬರು ಬಹಿರಂಗವಾಗಿ ಹೇಳಿಕೆಗಳನ್ನ ನೀಡುತ್ತಿದ್ದರು. ಇದರಲ್ಲಿ ಯತ್ನಾಳ್ ಸ್ವಲ್ಪ ನೇರಾ ನೇರ ಮತ್ತು ಖಾರವಾಗಿ ವಿಜಯೇಂದ್ರ ಬಗ್ಗೆ ಹೇಳಿಕೆಗಳನ್ನ ನೀಡುತ್ತಿದ್ದರು. ಈ ಕುರಿತು...
Political News: ಉತ್ತರಪ್ರದೇಶದ ಅಲಾಹಾಬಾದ್ನ ಪ್ರಯಾಗ್ರಾಜ್ನಲ್ಲಿ ಮಹಾಪೂರ್ಣ ಕುಂಭಮೇಳ ನಡೆಯುತ್ತಿದ್ದು, ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ.
ಇಂದು ಪ್ರಯಾಗರಾಜ್ಗೆ ಆಗಮಿಸಿದ್ದ ದ್ರೌಪದಿ ಮುರ್ಮುರನ್ನು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಸ್ವಾಗತಿಸಿದರು. ಬಳಿಕ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಕೆಲವು ದೇವಸ್ಥಾನಗಳಿಗೆ ಭೇಟಿ ನೀಡಿದರು.
144...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...
Political News: ದೆಹಲಿ ಎಲೆಕ್ಷನ್ ರಿಸಲ್ಟ್ ಬಂದಿದ್ದು ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ಕರ್ನಾಟಕ ಬಿಜೆಪಿ ನಾಯಕರು ಮತ್ತು ಘಟಬಂಧನ್ ಮಾಡಿಕೊಂಡಿರುವ ಪಕ್ಷದವರು, ಬಿಜೆಪಿಗೆ ಅಭಿನಂದನೆ ತಿಳಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರಮೋದಿ ಅವರು, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಮತ್ತು...
Political News: ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕರ್ನಾಟಕದಲ್ಲೂ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ...
Hubli News: ಹುಬ್ಬಳ್ಳಿ: ಕಾಂಗ್ರೆಸ್ ನವರಿಗೆ ಗೆದ್ದಾಗ ಇವಿಎಂ ದೋಷ ಕಾಣುವುದಿಲ್ಲ. ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷದಿಂದ ಸೋಲಾಗಿದೆ ಅಂತಾರೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ತೆಲಂಗಾಣ ಸೇರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿ ಇಲ್ಲ ಅನ್ನಬೇಕಾಗಿತ್ತು ಕಾಂಗ್ರೆಸ್. ಗೆದ್ದಾಗ...