Political News: ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದರು.
ಪೊಲೀಸ್ ಸಿಬ್ಬಂದಿಗಳ ಪೀಕ್-ಕ್ಯಾಪ್ ಪರಿಚಯ ಮತ್ತು ವಿತರಣೆ ಹಾಗೂ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟಿಸಿ...
Political News: ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಕರ್ನಾಟಕದಲ್ಲಿ ವಿಕಲಚೇತನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಲು ಮತ್ತು ವೈವಿಧ್ಯತೆ, ಸಮಾನತೆ ಮತ್ತು ಸೇರ್ಪಡೆಯನ್ನು ಉತ್ತೇಜಿಸಲು ಮತ್ತು ಅದಕ್ಕೆ ಸಂಬಂಧಿಸಿದ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಸೂದೆ ತರುವ ಅಗತ್ಯವಿದೆ ಎಂದರು.
ಅಲ್ಲದೇ, ರಾಜ್ಯದ ಜನಸಂಖ್ಯೆಯಲ್ಲಿ ವಿಕಲಚೇತನರು ಗಮನಾರ್ಹ ಮತ್ತು ವೈವಿಧ್ಯಮಯ ಗುಂಪನ್ನು ಹೊಂದಿದ್ದಾರೆ. ವಿಕಲಚೇತನರ...
ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್ ನಂಬರ್ 1ರ ಬಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತ ಬೆನ್ನಲ್ಲೇ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದೌಡಾಯಿಸಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿವೆ. ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಈ ಬಗ್ಗೆ...
ನವೆಂಬರ್ 20ರ ನಂತರ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಏನಾಗಲಿದೆ. ಯಾವೆಲ್ಲಾ ಬದಲಾವಣೆ ಸಂಭವಿಸಲಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರಾ? ಸಚಿವ ಸಂಪುಟ ವಿಸ್ತರಣೆಯಾಗುತ್ತಾ? ಅಥವಾ ನಾಯಕತ್ವ ಬದಲಾವಣೆಯಾಗಿ, ಹೊಸ ಸಿಎಂ ಬರ್ತಾರಾ? ಹೀಗೆ ಹತ್ತಾರು ಪ್ರಶ್ನೆಗಳು ಒಮ್ಮೆಲೆ ಹುಟ್ಟಿಕೊಳ್ಳುತ್ತಿವೆ. ಇದಕ್ಕೆಲ್ಲಾ ಕಾರಣವಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ್ ಮತ್ತು ಶಾಸಕ ಸುರೇಶ್ ಗೌಡ ಅವರ...
ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲೇ ಭಯೋತ್ಪಾದಕರನ್ನು ಇಟ್ಟುಕೊಂಡಿದ್ದಾರೆ, ಹಾಗಿದ್ದಾಗ ಜೈಲಿನ ಬಗ್ಗೆ ಮಾತನಾಡಿ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.
ಈ ಮೊದಲೇ ಜೈಲು ಅಧಿಕಾರಿಗಳ ನಡುವಿನ ಜವಾಬ್ದಾರಿ ವೈಫಲ್ಯ ಮತ್ತು ರಾಜಕಾರಣದ ವಿಷಯ ಚರ್ಚೆಗೆ ಕಾರಣವಾಗಿತ್ತು....
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮತ್ತು ಟಿವಿಕೆ ಪಕ್ಷದ ಮಧ್ಯೆ ಮಾತ್ರ ಸಮರ ಇರಲಿದೆ. ಹೀಗೆಂದು ಕೆಲವು ದಿನದ ಹಿಂದೆ ನಟ ವಿಜಯ್ ಹೇಳಿದ್ರು. ದಳಪತಿ ವಿಜಯ್ ಹೇಳಿಕೆ ಬಳಿಕ ಡಿಎಂಕೆ ನಾಯಕರು ಕೆರಳಿ ಕೆಂಡವಾಗಿದ್ದಾರೆ. ರಾಜ್ಯದಲ್ಲಿ ನಮಗೆ ಸಾಟಿ ಯಾರು ಇಲ್ಲ ಎಂಬಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಜಗತ್ತಿಗೆ ಸೂರ್ಯ ಚಂದ್ರ ಒಬ್ಬನೇ. ಹಾಗೆಯೇ...
ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ಗೆ ಬಹುಮತ ಸಿಕ್ಕಿದೆ. ಸತೀಸ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸೇರಿಕೊಂಡು ಎದುರಾಳಿ ರಮೇಶ್ ಕತ್ತಿ ಬಣವನ್ನು ಸೋಲಿಸಿದೆ. ಆದಾಗ್ಯೂ ಇದೀಗ ಅಧ್ಯಕ್ಷ ಪಟ್ಟವನ್ನು ಬಿಜೆಪಿ ನಾಯಕನಿಗೆ ಕಟ್ಟಲಾಗಿದೆ. ಈ ಮೂಲಕ ಸಾವಿರಾರು ಕೋಟಿ ವ್ಯವಹಾರ ಮಾಡುವ ಈ ಬ್ಯಾಂಕಿಗೆ ನೂತನ...
ನವೆಂಬರ್ 11ರ ಮಂಗಳವಾರ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಯಲಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ಮರು ಮತ ಎಣಿಕೆ ನಡೆಯುತ್ತಿದ್ದು, ಕೋಲಾರ ನಗರ ಮತ್ತು ಮಾಲೂರು ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಡಳಿತ ಈಗಾಗಲೇ ಮರು ಮತಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ಕೋಲಾರ ನಗರ ಹಾಗೂ ಮಾಲೂರಿನಲ್ಲಿ...
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಅಣ್ಣಾ ಸಾಹೇಬ್ ಜೊಲ್ಲೆ ಬಿಜೆಪಿ ಪಕ್ಷದವರಾದರೂ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದರು.
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಬಹುಮತ ಪಡೆದು ಮೇಲುಗೈ ಸಾಧಿಸಿದ್ದರು. ತೊಡೆ ತಟ್ಟಿದ್ದ ರಮೇಶ್...