ಸೆಪ್ಟೆಂಬರ್ 22ರಿಂದ ಆರಂಭವಾಗುವ ಜಾತಿಗಣತಿ ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಬಿಸಿತುಪ್ಪವಾಗಿದೆ. ಹಿಂದೂಗಳ ಜೊತೆ ಕ್ರಿಶ್ಚಿಯನ್ ಹೆಸರು ಸೇರಿಸಿರೋದಕ್ಕೆ, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೆಪ್ಟೆಂಬರ್ 18ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಹಲವು ಸಚಿವರು ಕೆಂಡಾಮಂಡಲರಾಗಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಎದುರೇ...
ಬಿಡಿಎ ಕಿಕ್ಬ್ಯಾಕ್ ಪ್ರಕರಣ ಸಂಬಂಧ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫ್ಯಾಮಿಲಿಗೆ ಬಿಗ್ ರಿಲೀಫ್ ಸಿಕ್ಕಿದೆ. 12 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಕೇಸ್ ಸಂಬಂಧ, ಬಿಎಸ್ವೈ, ಪುತ್ರ ಬಿ.ವೈ. ವಿಜಯೇಂದ್ರ, ಕುಟುಂಬ ಸದಸ್ಯರು ಹಾಗೂ ಉಚ್ಚಾಟಿತ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ಗೆ, ಲೋಕಾಯುಕ್ತ ಪೊಲೀಸರು ಕ್ಲೀನ್ಚಿಟ್ ನೀಡಿದ್ದಾರೆ.
ಲಂಚ ಸ್ವೀಕಾರ ಆರೋಪಕ್ಕೆ ಸಾಕ್ಷ್ಯಾಧಾರಗಳ ಕೊರತೆ...
ಜಾತಿ ಗಣತಿ ವರದಿ ಕುರಿತು ರಾಜ್ಯದಾದ್ಯಂತ ದೊಡ್ಡ ನಿರೀಕ್ಷೆ ಇತ್ತು. ಆದರೆ ಇಂದಿನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. ಸುದೀರ್ಘ ಚರ್ಚೆಯ ಬಳಿಕವೂ ನಿರ್ಧಾರಕ್ಕೆ ಬರದೆ, ವಿಷಯವನ್ನು ಮುಂದೂಡಲಾಗಿದೆ. ಸಭೆಯಲ್ಲಿ ಲಿಂಗಾಯತ ಮತ್ತು ಒಕ್ಕಲಿಗ ಸಚಿವರು ಏರು ಧ್ವನಿಯಲ್ಲಿ ಮಾತಾಡಿದ್ರು ಎನ್ನುವ ಮಾಹಿತಿ ಹೊರಬಂದಿದೆ.
ಸಭೆ ಬಳಿಕ ಕಾನೂನು ಸಚಿವ ಎಚ್.ಕೆ....
ರಾಹುಲ್ ಗಾಂಧಿ ವೋಟ್ ಚೋರಿ ಆರೋಪದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮೋಸದಿಂದಲೇ ಬಿಜೆಪಿ ಗೆದ್ದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟ ಉತ್ತರ ಕೂಡ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದೆ.
ವಿಧಾನಸೌಧದಲ್ಲಿ ಮಾತನಾಡಿದ ಸಂತೋಷ್ ಲಾಡ್, ಆಳಂದ ಪ್ರಕರಣದಿಂದ 5-6 ವರ್ಷ ಕಳೆದರೂ ಎಸ್ಐಟಿ...
ತುಮಕೂರು-ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇನ್ಮುಂದೆ ತುಮಕೂರು-ಬೆಂಗಳೂರು ನಡುವಿನ ಸಂಚಾರ, ತೀರಾ ಸುಲಭವಾಗಲಿದೆ. ಯಾಕಂದ್ರೆ, ಶೀಘ್ರವೇ 4 ಪಥದ ರೈಲು ಮಾರ್ಗ ನಿರ್ಮಾಣವಾಗಲಿದೆ. ಬರೋಬ್ಬರಿ 90 ಕೋಟಿ ವೆಚ್ಚದಲ್ಲಿ ತುಮಕೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಅಂತಾ, ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲು ಮಾರ್ಗ ನಿರ್ಮಾಣ ಮಾಡಿ,...
ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಜಾತಿ ಗಣತಿ ಶುರುವಾಗ್ತಿದೆ. ಆದ್ರೀಗ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆ ನೋವು ಶುರುವಾಗಿದೆ. ಜಾತಿಗಣತಿಗೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಿದೆ. ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ, ಹೈಕೋರ್ಟ್ಗೆ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ. ರಾಜ್ಯದಲ್ಲಿ ಜಾತಿ ಗಣತಿಯನ್ನೇ ರದ್ದುಪಡಿಸುವಂತೆ ಕೋರಲಾಗಿದೆ.
ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿ...
ಕರ್ನಾಟಕದ ಆಳಂದ ಸೇರಿ ದೇಶದ ಹಲವೆಡೆ ಮತಗಳ್ಳತನವಾಗಿದೆ ಅಂತಾ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ಸುದ್ದಿಗೋಷ್ಠಿಯಲ್ಲಿ, ಆಳಂದ ಶಾಸಕ ಬಿ.ಆರ್. ಪಾಟೀಲ್ ಎದುರೇ ಆರೋಪಿಸಿದ್ದಾರೆ. ಇದರ ಜೊತೆಗೆ ಮತಗಳ್ಳತನದಲ್ಲಿ ಭಾಗಿಯಾಗಿರುವವರನ್ನು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ರು.
ರಾಹುಲ್ ಗಾಂಧಿ ಆರೋಪವನ್ನ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ...
ಹಾಸನ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ, 8ನೇ ವಾರ್ಡ್ನ ಜೆಡಿಎಸ್ ಸದಸ್ಯ ಗಿರೀಶ್ ಚನ್ನವೀರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಮೇಯರ್ ಆಗಿದ್ದ ಎಂ. ಚಂದ್ರೇಗೌಡರ ಸದಸ್ಯತ್ವ ಅನರ್ಹಗೊಂಡ ನಂತರ, ಮೇಯರ್ ಸ್ಥಾನ ಖಾಲಿಯಾಗಿತ್ತು. ಮೇಯರ್ ಸ್ಥಾನಕ್ಕೆ ಸೆಪ್ಟೆಂಬರ್ 10ರಂದು ಚುನಾವಣೆ ನಿಗದಿಯಾಗಿತ್ತು. ಆದ್ರೆ, ಮೈಸೂರು ಪ್ರಾದೇಶಿಕ ಆಯುಕ್ತರು ವರ್ಗಾವಣೆಗೊಂಡ ಹಿನ್ನೆಲೆ, ಮುಂದೂಡಲಾಗಿತ್ತು.
ಮೇಯರ್...
ಈ ಕಾರ್ಯಾಗಾರದಲ್ಲಿ ಕೇಂದ್ರ ಸಚಿವರು ಧರ್ಮೇಂದ್ರ ಪ್ರದಾನ್, ಪ್ರಹ್ಲಾದ್ ಜೋಶಿ ಮತ್ತು ರಾಷ್ಟ್ರೀಯ ನಾಯಕ ಬಿಎಲ್ ಸಂತೋಷ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರು ಮತ್ತು ವಿವಿಧ ಜಿಲ್ಲೆಗಳ ಪ್ರಮುಖ ಮುಖಂಡರೂ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಎನ್....
ಮದ್ದೂರು ಕಾಂಗ್ರೆಸ್ ಶಾಸಕ ಕೆ.ಎಂ. ಉದಯ್ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಾಪ್ ಸಿಂಹನನ್ನು ಕೆಲವರು ತಪ್ಪಾಗಿ ಸಿಂಹ ಅಂತ ಹೆಸರಿಟ್ಟಿದ್ದಾರೆ. ಆತನ ಹೆಸರ ಮುಂದೆ ನಾಯಿ ಅಂತ ಹೆಸರಿಡಬೇಕಾಗಿತ್ತು. ನಿಜವಾಗಿ ಅವನ ನಡೆ-ನುಡಿಗಳು ಸರಿಯಿಲ್ಲ. ಮೈಸೂರಿನಲ್ಲಿ ಹಲವರು ಅವನನ್ನು ಕಚ್ಚೆಹರುಕನೆಂದೇ ಹೇಳುತ್ತಾರೆ. ಅವನ ಹೆಂಡತಿಯೇ ಸಹ...