Thursday, September 24, 2026

ಜಿಲ್ಲಾ ಸುದ್ದಿಗಳು

ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣ : ಸೌಭಾಗ್ಯ ಬಸವರಾಜನ್ ಬಂಧನ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್  ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಬಂಧಿಸಿಸದ್ದಾರೆ. ಮುರುಘಾ ಶ್ರೀಗಳ ವಿರುದ್ಧ ಪಿತೂರಿ ನಡೆಸಿರುವುದು ಬಹಿರಂಗಗೊಂಡಿದ್ದು, ಶ್ರೀಗಳ ವಿರುದ್ಧ ಸುಳ್ಳು ಕೇಸ್‌ ದಾಖಲಿಸಲು ಸಂತ್ರಸ್ತೆಗೆ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು....

ಮಂಡ್ಯದಲ್ಲಿ ಇಂದು ಬಿಜೆಪಿ ಜನಸಂಕಲ್ಪ ಯಾತ್ರೆ

ಮಂಡ್ಯ: ಜಿಲ್ಲಿಯಲ್ಲಿ ಇಂದು ಬಿಜೆಪಿಯಿಂದ ಜನಸಂಕಲ್ಪ ಸಮಾವೇಶ ನಡೆಸಲಾಗುತ್ತಿದ್ದು,ಮಂಡ್ಯ, ಪಾಂಡವಪುರ, ಮದ್ದೂರಿನಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಇನ್ನು ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ರಣತಂತ್ರ ಮಾಡುತ್ತಿದ್ದು, ಒಕ್ಕಲಿಗರ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇನ್ನು ಪೂರ್ಣಬಹುಮತಕ್ಕೆ ಮೈಸೂರು ಭಾಗದಲ್ಲಿ ಬಿಜೆಪಿ ಗೆಲವು ಅನಿವಾರ್ಯವಾಗಿದೆ. ಉದ್ಘೋಷಿತ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೋಲಾರ ಬಂದ್

ಕೋಲಾರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕೋಲಾರ ನಗರ ಬಂದ್ ಗೆ ಕರೆ ನೀಡಿವೆ. ನಗರದ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಬಂದ್ ಮಾಡಲಾಗುತ್ತಿದೆ. ರಸ್ತೆ, ಬೀದಿ ದೀಪ, ಕಸ ವಿಲೇವಾರಿ, ಬೀದಿನಾಯಿ ಹಾವಳಿ ಸೇರಿ ಹಲವು ಸಮಸ್ಯೆಗಳಿಗೆ ಜಿಲ್ಲಾಡಳಿತ, ಸರ್ಕಾರ ಸ್ಪಂದಿಸದ ಹಿನ್ನೆಲೆ ಬಂದ್ ಮಾಡಿ, ಇದಕ್ಕೆ ಬೆಂಬಲಿಸುವಂತೆ...

ಕೆಡಿಪಿ ಸಭೆಗೆ ಜೆಡಿಎಸ್ ಶಾಸಕರು ಗೈರು

ಮಂಡ್ಯ: 6 ತಿಂಗಳ ಬಳಿಕ ಜಿಲ್ಲಾ ಮಟ್ಟದ ಕೆಡಿಪಿ ಸಭೆ ನಡೆಯಿತು. ಸಚಿವ ಕೆ.ಗೋಪಾಲಯ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಸಭೆಯನ್ನು ನಡೆಸಲಾಗಿತ್ತು. ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ ಸಭೆಗೆ ಜಿಲ್ಲೆಯ ಜೆಡಿಎಸ್ ಶಾಸಕರು ಗೈರುಹಾಜರಾಗಿದ್ದರು. ಕೆಡಿಪಿ ಸಭೆ ಕರೆಯದ ಸಚಿವರ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ  ಶಾಸಕರು...

ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ : ಸಚಿವ ಕೆ. ಗೋಪಾಲಯ್ಯ

ಮಂಡ್ಯ: ಪಾಂಡವಪುರ ತಾಲ್ಲೂಕಿನ ಕಟ್ಟೇರಿಯಲ್ಲಿರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಶಿಸ್ತು ಕ್ರಮ ವಹಿಸುವಂತೆ ಹಾಗೂ ಯಾವುದೇ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು. ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್ ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ...

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ

ಮಂಡ್ಯ: ವಾಹನ ಚಾಲಕರು, ಪಾದಚಾರಿಗಳು ಹಾಗೂ ಸಾರ್ವಜನಿಕರು ರಸ್ತೆ ಅಪಘಾತಗಳನ್ನು ತಡೆಗಟ್ಟಲು  ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ನಿಯಮಗಳ ಮಾಹಿತಿ ನೀಡುವ ಎಲ್.ಇ.ಡಿ ವಾಹನಕ್ಕೆ ಚಾಲನೆ...

ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ ಯಾತ್ರೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ನಾಳೆ ಸಿಎಂ ನೇತೃತ್ವದಲ್ಲಿ ಜನ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ,  ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಸಿ.ಎಸ್‌.ಅಶ್ವಥ್ ನಾರಾಯಣ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಬೃಹತ್...

ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ

ಹಾಸನ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಸನ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಅನಂತಕುಮಾರ್ ಮಾತನಾಡಿ, ಸರಕಾರ ರೈತರಿಗೆ ...

ಬಿಎಸ್ ಯಡಿಯೂರಪ್ಪನವರನ್ನು ನಾವು ಎಲ್ಲೂ ಕಡೆಗಣಿಸಿಲ್ಲಾ: ಸಚಿವ ಆರ್.ಅಶೋಕ್

ಕೋಲಾರ: ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಕಂದಾಯ ಸಚಿವ ಆರ್.ಅಶೋಕ್ ಅವರು ಕೋಲಾರದಲ್ಲಿ ಮಾತನಾಡಿದ್ದು, ಗುಜರಾತ್ ನಲ್ಲಿ ಕಾಂಗ್ರೆಸ್ ಧೂಳಿಪಟ ಆಗಿದೆ. ಸಿದ್ದು ಹಾಗೂ ಡಿಕೆಶಿ ನಡುವೆ ಬೀದಿ ರಂಪಾಟವಾಗಿದೆ. ದೆಹಲಿಗೆ ಹೋದರು ಅವರ ಜಗಳ ನಿಂತಿಲ್ಲ.ಜನರು ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಬಯಸಿದ್ದಾರೆ. ರಾಜ್ಯದ ಖಜಾನೆ ತುಂಬಿದೆ, ಜನರ ನೋವಿಗೆ ಸ್ಪಂದಿಸುತ್ತೇವೆ....

ಮೊಬೈಲ್ ನಿಂದ ಪೂಜಾರಿಗಳು ಮಂತ್ರ ಹೇಳೊದಕ್ಕೂ ಕಷ್ಟವಾಗುತ್ತಿದೆ : ಸಚಿವ ಆರ್.ಅಶೋಕ್

ಕೋಲಾರ: ದೇವರ ದರ್ಶನಕ್ಕೆಂದು ಬಂದ ಭಕ್ತಾದಿಗಳು ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವುದು, ಫೋಟೋ ತೆಗೆಯುವುದು ಇಲ್ಲ ಪೋನಲ್ಲಿ ಮಾತನಾಡುವುದು ಸಾಮಾನ್ಯ. ಇದರಿಂದ ಬೇರೆಯವರಿಗೆ ತೊಂದರೆಯಾಗುತ್ತದೆ ಎಂಬ ಅರಿವಿಲ್ಲದಂತೆ ನಡೆದುಕೊಳ್ಳುತ್ತಾರೆ. ತಮಿಳುನಾಡು ರಾಜ್ಯದಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್ ಬಂದ್ ಮಾಡಿರುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಮೊಬೈಲ್ ನಿಷೇಧ ಮಾಡಿರುವುದು ಒಳ್ಳೆಯದು. ಸಚಿವೆ ಶಶಿಕಲಾ ಜೊಲ್ಲೆ ಬಳಿ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img