ತಾಯಿ ಬೈದಿದ್ದಕ್ಕೆ ಮನನೊಂದು ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ ನಿಮ್ಮ ಕಣ್ಣು ಮುಂದೆ ಸಾಯೋದಕ್ಕೆ ಆಗಲ್ಲ… ದೂರ ಹೋಗಿ ಸತ್ತಿದ್ದೇವೆ ಎಂದು ಪತ್ರ ಬರೆದಿಟ್ಟು ಮನೆ ಬಿಟ್ಟಿರುವುದು ಪೋಷಕರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.
ಜಿಲ್ಲೆಯ ಶ್ರೀರಂಗಪಟ್ಟಣ...
ಅಭಿವೃದ್ಧಿ… ಅಭಿವೃದ್ಧಿ ಅಂತ ಭಾಷಣ ಮಾಡೋ ಜನಪ್ರತಿನಿಧಿಗಳ ಮಾತು ಒಂದೆಡೆಯಾದ್ರೆ, ನೆಲದ ವಾಸ್ತವ್ಯ ಇನ್ನೊಂದೇ ಆಗಿದೆ. ಧಾರವಾಡ ಜಿಲ್ಲೆಯ ಮಂಟೂರ್ ಗ್ರಾಮದಲ್ಲಿ ಇಂದಿಗೂ ಸರಿಯಾದ ರಸ್ತೆ ಇಲ್ಲದೆ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ. ಮಳೆಯಾದರೆ ರಸ್ತೆ ಅಲ್ಲ, ಕೆಸರಿನ ಕೆರೆ ಅನ್ನೋ ಸ್ಥಿತಿ ನಿರ್ಮಾಣವಾಗುತ್ತಿದ್ದು, ಜನರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಎದುರಾಗಿದೆ. ಹಲವು...
ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆ ವಿರುದ್ಧ ಆಕ್ರೋಶ ತೀವ್ರವಾಗುತ್ತಿರುವ ನಡುವೆ, ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ನಿಯೋಗವು ಭಾನುವಾರ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಯೋಜನೆ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿತು.
'ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯತ್ಗಳ ರೈತ ಭೂ ಹಿತರಕ್ಷಣಾ ಸಮಿತಿ'ಯ ಭಾಗವಾಗಿರುವ ರೈತರು,...
ಭಾರತ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಬಿಸಿಲಿನ ಬೇಗೆಯನ್ನು ಮರೆತುಬಿಡಿ, ಏಕೆಂದರೆ ಮುಂದಿನ 4-5 ದಿನಗಳ ಕಾಲ ರಾಜಧಾನಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ. ಹವಾಮಾನ ಇಲಾಖೆಯು ಬೆಂಗಳೂರಿಗೆ ಅಧಿಕೃತವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ವಾರದ ಮೊದಲ ದಿನವೇ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತಾಪಮಾನವು ಕನಿಷ್ಠ 23 ಡಿಗ್ರಿ...
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಮದುವೆಯಾಗಿದ್ದಾರೆ.
ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ ಮನೋಜ್ (22) ಹಾಗೂ ಮೂಕಲಿ ಗ್ರಾಮದ ಪ್ರೀತಿ (19) ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.
ಆದರೆ ಇವರ ಪ್ರೀತಿ...
ಖಾಸಗಿ ಸ್ಲೀಪರ್ ಬಸ್ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಗೇಜ್...
ನಮ್ಮ ಮೆಟ್ರೋ (Namma Metro) ಪರ್ಪಲ್ ಲೈನ್ನಲ್ಲಿ ಭಾನುವಾರ (ಮೇ 17) ಬೆಳಗ್ಗೆ ಕೆಲಕಾಲ ಸೇವೆ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ತಿಳಿಸಿದೆ. ತುರ್ತು ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಬೆಳಿಗ್ಗೆ 7ರಿಂದ 9ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.
ಮಾಹಿತಿಯಂತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸರ್ ಎಂ....
ಚಿನ್ನದ ದರ ದಿನದಿಂದ ದಿನಕ್ಕೆ ಏರುತ್ತಿರುವ ನಡುವೆ, ಒಂದು ವರ್ಷದವರೆಗೆ ಅನಗತ್ಯವಾಗಿ ಚಿನ್ನ ಖರೀದಿ ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಅಕ್ಕಸಾಲಿಗರು ಹಾಗೂ ಚಿನ್ನಾಭರಣ ವ್ಯಾಪಾರಿಗಳಲ್ಲಿ ಆತಂಕ ವ್ಯಕ್ತವಾಗಿದೆ. ಹುಬ್ಬಳ್ಳಿಯ ಸರಾಫ್ ಸಂಘದ ಅಧ್ಯಕ್ಷ ಪರಶುರಾಮ ಚಿಲ್ಲಾಳ ಅವರು ಪ್ರತಿಕ್ರಿಯಿಸಿ, ದೇಶದಲ್ಲಿ ಚಿನ್ನ...
ಹಾನಗಲ್ ತಾಲೂಕಿನ ಚಿಕ್ಕವಂಶಿ ಗ್ರಾಮದಲ್ಲಿ ಮಧ್ಯರಾತ್ರಿ ಮುಸುಕುದಾರಿ ಗ್ಯಾಂಗ್ ಬಂಗಾರದ ಅಂಗಡಿಯನ್ನು ಗುರಿಯಾಗಿಸಿಕೊಂಡು ಸಿನಿಮಾ ಶೈಲಿಯಲ್ಲಿ ದರೋಡೆ ಮಾಡಿದ್ದಾರೆ.
ಸುಮಾರು 8 ಜನರ ಗ್ಯಾಂಗ್ ಮಂಕಿ ಕ್ಯಾಪ್ ಮತ್ತು ಕೈಗವಸುಗಳನ್ನ ಧರಿಸಿ ಅಂಗಡಿಗೆ ನುಗ್ಗಿದ್ದು, ಕಟರ್ ಬಳಸಿ ಬೀಗ ಒಡೆದು ಒಳಗೆ ಪ್ರವೇಶಿಸಿದ್ದಾರೆ. ಅಂಗಡಿಯಲ್ಲಿದ್ದ 300 ಗ್ರಾಂ ಚಿನ್ನ ಮತ್ತು 35 ಕೆಜಿ ಬೆಳ್ಳಿ ಸೇರಿದಂತೆ...
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಹಿರಿಯ ಜೆಡಿಎಸ್ ನಾಯಕ ಜಿ. ಟಿ. ದೇವೇಗೌಡ ಅಚಾನಕ್ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ ನಡೆದ ಈ ಭೇಟಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಬೆಂಗಳೂರಿನಲ್ಲಿ ನಡೆದ ಈ ಭೇಟಿಯ ವೇಳೆ ಇಬ್ಬರು ನಾಯಕರು ಕೆಲಕಾಲ ರಾಜಕೀಯ ಬೆಳವಣಿಗೆಗಳು, ಪಕ್ಷದ ಒಳಾಂಗಣ...
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಮಾತನಾಡಿದ್ರೆ,...