Mandya: ಗ್ರಾಮಾಂತರ ಪ್ರದೇಶದಲ್ಲಿ ಸಾರ್ವಜನಿಕರಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಸರಬರಾಜು ಮಾಡುವಂತೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಾ.ಪಂ. ಇಓ ಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರುಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಘನಘೋರ ದುರಂತ ಸಂಭವಿಸಿದ್ದು, 9ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಡಿಕ್ಕಿಯಾಗಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ದುರಂತದಲ್ಲಿ ಸುಮಾರು 32 ಪ್ರಯಾಣಿಕರ ಪೈಕಿ, 9ಕ್ಕೂ ಅಧಿಕ ಮಂದಿ ಸುಟ್ಟುಕರಕಲಾಗಿದ್ದಾರೆಂದು, ಪ್ರಾಥಮಿಕ ಮಾಹಿತಿ ಹೇಳ್ತಿದೆ.
ಅಪಘಾತದ ವೇಳೆ...
ಮಂಡ್ಯ ಜಿಲ್ಲೆಯಲ್ಲಿ ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್ಗೆ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಈ ಯೋಜನೆ ರಾಜ್ಯಕ್ಕೆ ಬಂದು ನೆಲೆಯೂರಬೇಕು ಎನ್ನುವುದು ನಮ್ಮ ಆಸಕ್ತಿಯಾಗಿದೆ ಅಂತ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಈ ಸಂಬಂಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು...
ಪರಿಸರವಾದಿಗಳ ವಿರೋಧಗಳಿದ್ದರೂ, ಬೇಡ್ತಿ–ವರದಾ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ತಿಳಿಸಿದರು.
ಜಲಸಂಪನ್ಮೂಲ ಸಚಿವರು ಬುಧವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ನದಿ ಜೋಡಣೆ ವಿಶೇಷ ಸಮಿತಿ...
ಗೃಹಲಕ್ಷ್ಮಿ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮಹತ್ವದ ಅಂಶವೊಂದು ಬೆಳಕಿಗೆ ಬಂದಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪೈಕಿ 1,44,056 ಮಂದಿ ಮೃತಪಟ್ಟ ಬಳಿಕವೂ ಅವರ ಬ್ಯಾಂಕ್ ಖಾತೆಗಳಿಗೆ ಒಟ್ಟು ಸುಮಾರು 7.68 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಪತ್ತೆಯಾಗಿದೆ ಎಂದು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ....
ಮೈಸೂರು ರೇಸ್ ಕೋರ್ಸ್ನಲ್ಲಿ ಗ್ಲಾಂಡರ್ಸ್ ಸೋಂಕಿನಿಂದ ಎರಡು ವರ್ಷದ ಕುದುರೆ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿನ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಒಟ್ಟು 598 ಕುದುರೆಗಳ ರಕ್ತ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಈ ಪೈಕಿ ರೇಸ್ ಕೋರ್ಸ್ನ 477, ಕೆಎಸ್ಆರ್ಪಿ ಅಶ್ವಾರೋಹಿ ಪಡೆಯ 63 ಹಾಗೂ ನಗರದ...
ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಗೆ ಭೂಮಿ ಬಿಟ್ಟುಕೊಡುವ ಮಾಲೀಕರಿಗೆ ಹೊಸ ಕಾಯ್ದೆಯ ತತ್ವಗಳ ಆಧಾರದಲ್ಲಿ ಕೆಲವು ಗ್ರಾಮಗಳಲ್ಲಿ ಪ್ರತಿ ಎಕರೆಗೆ ₹15.60 ಕೋಟಿ ವರೆಗೆ ಸಂಧಾನಿತ ಪರಿಹಾರ ದರ ನಿಗದಿಪಡಿಸಲಾಗಿದೆ. ಈ ಪರಿಹಾರಕ್ಕೆ ಹಲವು ರೈತರು ಒಪ್ಪಿಗೆ ಸೂಚಿಸಿದ್ದು, ಈಗಾಗಲೇ 100 ಎಕರೆಗೂ ಅಧಿಕ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದೆ.
ಬೆಂಗಳೂರು...
ಬೆಂಗಳೂರು ನಗರಕ್ಕೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸೂಕ್ತ ಸ್ಥಳವನ್ನು ಇನ್ನೂ ಅಂತಿಮಗೊಳಿಸಿಲ್ಲ. ಈ ಹಿನ್ನೆಲೆಯಲ್ಲಿ ಈಗಾಗಲೇ ಗುರುತಿಸಲಾದ ಮೂರು ಸ್ಥಳಗಳಲ್ಲಿ ಯಾವುದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನಿರ್ಧರಿಸಲು ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIDC) ಕಾರ್ಯತಂತ್ರ ಮತ್ತು...
ಚಿಕ್ಕಜಾಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಒಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಪ್ರಕರಣ ಸಂಬಂಧ ಬಿ ರಿಪೋರ್ಟ್ ಸಲ್ಲಿಸುವುದಾಗಿ ಹೇಳಿ ₹2 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಚಿಕ್ಕಜಾಲ ಪೊಲೀಸ್ ಠಾಣೆಯ PSI ಶಿವಣ್ಣ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಲೋಕಾಯುಕ್ತ ಪೊಲೀಸರ...
ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್ನಲ್ಲಿ ಅದಾನಿ ಗ್ರೂಪ್ ಅತಿ ಕಡಿಮೆ ಮೊತ್ತದ ಬಿಡ್ ಸಲ್ಲಿಸಿ ಮುಂಚೂಣಿಯಲ್ಲಿದೆ. ಇದರಿಂದಾಗಿ ರಾಷ್ಟ್ರಮಟ್ಟದಲ್ಲಿ ಸದಾ ಅದಾನಿ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಪಕ್ಷ, ಈಗ ಅದೇ ಅದಾನಿ ಸಮೂಹಕ್ಕೆ ಟೆಂಡರ್...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...