Sunday, June 28, 2026

ರಾಜ್ಯ

ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ಕಲ್ಲಿದ್ದಲು ಕೊರತೆ: ಶೀಘ್ರವೇ ವಿದ್ಯುತ್ ಲೋಡ್ ಶೆಡ್ಡಿಂಗ್ ಶಾಕ್.!

ರಾಯಚೂರು: ಬೇಸಿಗೆ ಶುರುವಾದಂತೆ ರಾಜ್ಯದ ಜನಕ್ಕೆ ವಿದ್ಯುತ್ ಶಾಕ್ ತಟ್ಟೊ ಲಕ್ಷಣಗಳು ಎದುರಾಗಿವೆ..ಇಡೀ ರಾಜ್ಯಕ್ಕೆ ಅತೀ ಹೆಚ್ಚು ವಿದ್ಯುತ್ ಪೂರೈಸೊ, ವಿದ್ಯುತ್ ಉತ್ಪಾದನಾ ಘಟಕಗಳು ಸ್ಥಗಿತಗೊಂಡಿವೆ..ಇಷ್ಟಕ್ಕೆಲ್ಲಾ ಕಾರಣ ಕಲ್ಲಿದ್ದಲು ಕೊರತೆ. ಬಿರುಬೇಸಿಗೆಯಲ್ಲಿ ಇಡೀ ರಾಜ್ಯಕ್ಕೆ ವಿದ್ಯುತ್ ಶಾಕ್ ತಟ್ಟೊ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ..ಯಾಕಂದ್ರೆ, ಬೇಸಿಗೆ ಹಿನ್ನೆಲೆ ರಾಜ್ಯಾದ್ಯಂತ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ದಿನಬಳಕೆ, ಕೃಷಿ ಚಟುವಟಿಕೆ...

ವೈದ್ಯರು, ತಜ್ಞರ ಕೊರತೆ ನೀಗಿಸಲು ವೈದ್ಯಕೀಯ ಶಿಕ್ಷಣಕ್ಕೆ ಆದ್ಯತೆ – ಸಚಿವ ಡಾ.ಕೆ.ಸುಧಾಕರ್

ಮಂಗಳೂರು : ಭಾರತದಲ್ಲಿ 10 ಸಾವಿರ ಜನಸಂಖ್ಯೆಗೆ 0.59 ಫಿಸಿಯೋಥೆರಪಿ ತಜ್ಞರಿದ್ದಾರೆ. ಇದಕ್ಕಾಗಿಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಹೊಸ ಕಾಲೇಜುಗಳನ್ನು ಆರಂಭಿಸುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಅಂತಾರಾಷ್ಟ್ರೀಯ ಫಿಸಿಯೋಥೆರಪಿ ಸಮ್ಮೇಳನ 'ಮಂಗಳೂರು ಫಿಸಿಯೋಕಾನ್-2022' ನಲ್ಲಿ ಮಾತನಾಡಿದ ಸಚಿವರು, ಅಮೆರಿಕದಲ್ಲಿ 10...

ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕಿಕೊಳ್ಳೋದಿಲ್ವಾ.? ಎಂದು ಪ್ರಶ್ನಿಸಿದ ವಿಪಕ್ಷ ನಾಯಕ ಸಿದ್ಧು ವಿರುದ್ಧ, ಕೇಸರಿ ಪಡೆ ಕೆಂಡಾಮಂಡಲ

ಬೆಂಗಳೂರು: ಮೈಸೂರಿನಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ದುಪ್ಪಟ್ಟ ಹಾಕಿದ್ರೇ ತಪ್ಪೇನು.? ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕಿಕೊಳ್ಳೋದಿಲ್ವಾ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದರು. ಅವರ ಮಾತಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೇಸರಿಪಡೆಯಿಂದ ಮುಗಿ ಬಿದ್ದಿದ್ದಾರೆ. ಸಿದ್ಧರಾಮಯ್ಯ ಮಾತಿಗೆ ಸಚಿವ ಬಿ.ಸಿ ನಾಗೇಶ್, ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ ಕೆಂಡಾಮಂಡಲ ಆಗಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಕೂಡಲೇ ಸ್ವಾಮೀಜಿಗಳ...

ವಿಧಾನಸಭೆ ಬಳಿಕ, ವಿಧಾನ ಪರಿಷತ್ ನಲ್ಲಿ ಮೇಕೆದಾಟು ಯೋಜನೆ ನಿರ್ಣಯಕ್ಕೆ ಧ್ವನಿಮತದ ಅಂಗೀಕಾರ

ಬೆಂಗಳೂರು: ತಮಿಳುನಾಡು ಸರ್ಕಾರಕ್ಕೆ ಇಂದು ಟಕ್ಕರ್ ಕೊಟ್ಟಂತ ಸಿಎಂ ಬಸವರಾಜ ಬೊಮ್ಮಾಯಿಯವರು, ವಿಧಾನಸಭೆಯಲ್ಲಿ ಅಧಿಕೃತವಾಗಿ ಮೇಕೆದಾಟು ಯೋಜನೆ ಬಗ್ಗೆ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ನಿನ್ನೆ ಎಲ್ಲಾ ಪಕ್ಷಗಳಿಂದ ಸರ್ವಾನುಮತದ ಅಂಗೀಕಾರ ಕೂಡ ದೊರೆಯಿತು. ಈ ಬಳಿಕ, ಇಂದು ವಿಧಾನ ಪರಿಷತ್ ನಲ್ಲಿಯೂ ಧ್ವನಿಮತದ ಅಂಗೀಕಾರ ದೊರೆತಿದೆ. ನಿನ್ನೆ  ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು...

ಸುಮ್ಮನೆ ಆರೋಪ ಮಾಡಿದ್ರೇ ಸರಿಯಿರಲ್ಲ, ದಾಖಲೆ ಇದ್ರೆ ಬಿಡುಗಡೆ ಮಾಡಿ – ಶಾಸಕ ಎಂ.ಪಿ ರೇಣುಕಾಚಾರ್ಯ

ಬೆಂಗಳೂರು: ನನ್ನ ಮಗಳು ಯಾವುದೇ ಎಸ್ಸಿ ಜಾತಿ ಪ್ರಮಾಣ ಪತ್ರವನ್ನು ಪಡೆದಿಲ್ಲ. ಹೈಸ್ಕೂಲ್ ಓದುತ್ತಿದ್ದಾಗ ಪಡೆದಿದ್ದಂತ ಜಾತಿ ಪ್ರಮಾಣ ಪತ್ರ ಮಾತ್ರವೇ ಆಗಿದೆ. ಹೀಗೆ ಪಡೆದಿದ್ದಾಳೆ ಎಂಬುದಾಗಿ ಸುಖಾ ಸಮುಮ್ಮನೆ ಆರೋಪಿಸಿದ್ರೇ ಸರಿ ಇರೋದಿಲ್ಲ. ನಿಮ್ಮ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಿ ಎಂಬುದಾಗಿ ಶಾಸಕ ಎಂ.ಪಿ ರೇಣುಕಾಚಾರ್ಯ ಸವಾಲ್ ಹಾಕಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ...

ಹಿಜಾಬ್ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಪ್ರಕರಣ: ಪೊಲೀಸರಿಂದ ಮತ್ತೊಬ್ಬ ಆರೋಪಿ ಬಂಧನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಿಂದ ಹಿಜಾಬ್ ಅನುಮತಿ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿತ್ತು. ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ ಎಂದು ತಿಳಿಸಿ, ರಾಜ್ಯ ಸರ್ಕಾರದ ಸಮವಸ್ತ್ರ ನೀತಿ ಸಂಹಿತೆಯನ್ನು ಎತ್ತಿ ಹಿಡಿದಿತ್ತು. ಹೀಗೆ ತೀರ್ಪು ನೀಡಿದಂತ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದಂತ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದಂತ ಗೃಹ ಸಚಿವ...

ಬೆಂಗಳೂರಿನಲ್ಲಿ ‘ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ’ ನಿವಾಸ, ಕಚೇರಿಗಳ ಮೇಲೆ ‘ಎಸಿಬಿ ದಾಳಿ’

ಬೆಂಗಳೂರು: ಇಂದು ಕೂಡ ಎಸಿಬಿ ಅಧಿಕಾರಿಗಳು ತಮ್ಮ ದಾಳಿಯನ್ನು ಮುಂದುವರೆಸಿದ್ದಾರೆ. ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ರಂಗನಾಥ್ ನಿವಾಸ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನಲ್ಲಿರುವಂತ ಹಿರಿಯ ಶ್ರೇಣಿಯ ಕೆ ಎಎಸ್ ಅಧಿಕಾರಿ, ಹಿಂದಿನ ಉಪ ವಿಭಾಗಾಧಿಕಾರಿಯಾಗಿದ್ದಂತ ಕೆ ರಂಗನಾಥ್, ಪ್ರಸ್ತುತ ಪ್ರಧಾನ ವ್ಯವಸ್ಥಾಪಕರು,...

2022ನೇ ಸಾಲಿನ ಧನವಿನಿಯೋಗ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: 2022ನೇ ಸಾಲಿನ ಧನವಿನಿಯೋಗ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಪೂರಕ ಅಂದಾಜುಗಳ ಮೂರನೇ ಹಾಗೂ ಅಂತಿಮ ಕಂತುಗಳ ಬೇಡಿಕೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಇಂದು ವಿಧಾನಸಭೆಯಲ್ಲಿ, ಪೂರಕ ಅಂದಾಜುಗಳ ಕುರಿತ ಚರ್ಚೆಗೆ ಉತ್ತರಿಸಿದಂತ ಸಿಎಂ ಬಸವರಾಜ್ ಬೊಮ್ಮಾಯಿ‌, ಒಟ್ಟು ಆದಾಯದಲ್ಲಿ ನಾವು ಹೆಚ್ಚಳ ತಂದಿದ್ದೇವೆ, 5584 ಕೋಟಿ ಆದಾಯ ತೆರಿಗೆಯಲ್ಲಿ ಹೆಚ್ಚಳವಾಗಿದೆ, ಬಹುತೇಕವಾಗಿ ಇತ್ತೀಚಿನ ದಿನಗಳಲ್ಲಿ...

ಮೇಕೆದಾಟು ಯೋಜನೆಗಾಗಿ ಕೇಂದ್ರದ ಅರಣ್ಯ- ಪರಿಸರ ಇಲಾಖೆ ಒಪ್ಪಿಗೆ ಪಡೆಯಿರಿ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಕೈಗೊಳ್ಳಲಾಗಿರುವ ವಿವಾದಾತ್ಮಕ ನಿರ್ಣಯಕ್ಕೆ ಪ್ರತಿಯಾಗಿ ರಾಜ್ಯ ವಿಧಾನಸಭೆಯಲ್ಲಿ ಕೈಗೊಂಡಿರುವ ಖಂಡನಾ ನಿರ್ಣಯಕ್ಕೆ ಜೆಡಿಎಸ್ ಪಕ್ಷದ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ವಿಧಾನಸೌಧ ಬಳಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು: ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡರಷ್ಟೇ ಸಾಲದು. ಮೊದಲು ಕೇಂದ್ರದ ಅರಣ್ಯ...

‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನಕ್ಕಾಗಿ ಶಿಕ್ಷಣ ಮತ್ತು ಕ್ರೀಡಾ ಇಲಾಖೆ ಸಮನ್ವಯ – ಸಚಿವ ಬಿ ಸಿ ನಾಗೇಶ್

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ-2020’ರ ಅನ್ವಯ ಶಿಕ್ಷಣದ ಜೊತೆಗೆ ಕ್ರೀಡೆಯನ್ನು ಅಂತರ್ಗತಗೊಳಿಸಲು ಶಿಕ್ಷಣ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪರಸ್ಪರ ಸಹಯೋಗ ಮತ್ತು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ತಿಳಿಸಿದರು. ವಿಧಾನಸೌಧದ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img