ಕಳೆದ ಲೋಕಸಭಾ ಚುನಾವಣೆಯ ವೇಳೆ ಮತದಾರರ ಅಕ್ರಮ ಪ್ರಕ್ರಿಯೆಗೆ ಚುನಾವಣಾ ಆಯೋಗವೇ ಸಹಕಾರ ನೀಡಿದೆ ಎಂಬ ಆರೋಪವನ್ನು ಕಾಂಗ್ರೆಸ್ ಈಗ ಮತ್ತೊಮ್ಮೆ ಮುಂದಿಟ್ಟಿದೆ. ಈ ಬಾರಿ, 2023ರಲ್ಲಿ ನಡೆದ ಕರ್ನಾಟಕದ ಆಳಂದ ವಿಧಾನಸಭಾ ಚುನಾವಣೆಯ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಗಂಭೀರ ಟೀಕೆ ಮಾಡಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಆಳಂದ...
ಧರ್ಮಸ್ಥಳ ಪ್ರಕರಣವನ್ನೇ ಅಸ್ತ್ರ ಮಾಡಿಕೊಂಡಿರುವ ರಾಜಕೀಯ ಪಕ್ಷಗಳು, ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವುದು ಬಿಜೆಪಿಯವರು. ಬುರುಡೆ ಗಿರಾಕಿ ಯಾರು?. ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ. ಹೀಗಂತ ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.
ಬಿಜೆಪಿಯ ಎರಡು ಗುಂಪುಗಳ ನಡುವಿನ ತಿಕ್ಕಾಟಕ್ಕೆ, ಧರ್ಮಸ್ಥಳವನ್ನು...
Hubli News: ಹುಬ್ಬಳ್ಳಿ: ಧಾರವಾಡದಲ್ಲಿ ನರೇಂದ್ರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ, ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದರ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಲಾಠಿ ಚಾರ್ಜ್ ಖಂಡನೀಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ವಿರೋಧಿ ನೀತಿ ಅನುಸರಿಸುತ್ತದೆ. ಇದಕ್ಕೆ ತಾಜಾ ಉದಾಹರಣೆ ಧಾರವಾಡ ನರೇಂದ್ರ ಗ್ರಾಮದ ಲಾಠಿ ಚಾರ್ಜ್....
ಜಾತಿಗಣತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಸಕ್ರಿಯವಾಗಿ ಪಾಲ್ಗೊಳ್ಳಿ. ಹೀಂಗತ ಸಚಿವ ಈಶ್ವರ್ ಖಂಡ್ರೆ ಕರೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸುದ್ದಿಗೋಷ್ಠಿ ನಡೆಸಲಾಯ್ತು. ಈ ವೇಳೆ
ಮಹಾಪ್ರಧಾನ ಕಾರ್ಯದರ್ಶಿ ಆಗಿರುವ ಈಶ್ವರ್ ಖಂಡ್ರೆ ಭಾಗಿಯಾಗಿದ್ರು.
ಮೀಸಲಾತಿಗಾಗಿ ನೀಡುವ ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬರೆಸುವ ಮಾಹಿತಿಗೂ ಸಂಬಂಧ ಇರುವುದಿಲ್ಲ. ನೈಜ...
ವಿಧಾನ ಪರಿಷತ್ತಿನ 4 ಸ್ಥಾನಗಳ ನಾಮ ನಿರ್ದೇಶನದ ಪಟ್ಟಿಗೆ, ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಡಾ. ಆರತಿ ಕೃಷ್ಣ, ಎಫ್.ಹೆಚ್. ಜಕ್ಕಪ್ಪನವರ್, ಮೈಸೂರಿನ ಪತ್ರಕರ್ತ ಶಿವಕುಮಾರ್ ಕೆ. ಅವರ ಹೆಸರುಗಳಿದ್ದ ಪಟ್ಟಿಯನ್ನು, ರಾಜ್ಯ ಸರ್ಕಾರ ಕಳಿಸಿಕೊಟ್ಟಿತ್ತು. ಇದೀಗ ರಾಜ್ಯಪಾಲ ಥಾವರ್ ಚಂದ್...
ರಾಜ್ಯದಲ್ಲಿ ಬಿಡದಿ ಟೌನ್‌ಶಿಪ್ ಜಟಾಪಟಿ ತಾರಕಕ್ಕೇರಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವಿನ ಟಾಕ್ ವಾರ್ ಜೋರಾಗಿದೆ. ಈ ಬಾರಿ ಡಿ.ಕೆ. ಶಿವಕುಮಾರ್ ಆರೋಪಗಳಿಗೆಲ್ಲಾ, ನಿಖಿಲ್ ಕುಮಾರಸ್ವಾಮಿ ಖಡಕ್ ಟಾಂಗ್ ಕೊಟ್ಟಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರದಲ್ಲಿ ನಿಖಿಲ್ ಭಾಗಿಯಾಗಿದ್ರು. ಭಾಷಣದಲ್ಲಿ ಡಿಕೆಶಿ ವಿರುದ್ಧ ಗುಡುಗಿದ್ದಾರೆ.
ಮಿಸ್ಟರ್ ಶಿವಕುಮಾರ್ ಅವರೇ ಸುಳ್ಳು ನಿಮ್ಮನೆ ದೇವರು....
ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದನ್ನು ಬಿಜೆಪಿ ವಿರೋಧಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದು ರಾಜಕೀಯ ದುರುದ್ದೇಶದಿಂದ ಮಾಡಿದ ವಿರೋಧ, ಸರ್ಕಾರವೂ ರಾಜಕೀಯವಾಗಿಯೇ ಉತ್ತರ ನೀಡಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಅವರು ಕನ್ನಡ ಸಾಹಿತ್ಯದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ. ಬಾನು ಮುಷ್ತಾಕ್ ಅವರ ಕೃತಿ ಅನುವಾದಕ್ಕೆ ಬುಕರ್ ಪ್ರಶಸ್ತಿ ದೊರೆತಿದ್ದು, ಅದಕ್ಕಾಗಿ...
ಕೊಪ್ಪಳ, ಬಾದಾಮಿ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಸೂಕ್ತ ಜಾಗವನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ನೀಡಲು ರಾಜ್ಯ ಸಂಪುಟ ಅನುಮೋದನೆ ನೀಡಿದೆ. ಆದರೆ ತುಮಕೂರಿನಲ್ಲಿ ಕಾಂಗ್ರೆಸ್ ಭವನ ಜಾಗದ ಕುರಿತು ವಿವಾದ ತೀವ್ರಗೊಂಡಿದೆ. ನಿಯಮ ಉಲ್ಲಂಘನೆ ಮಾಡಿ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ನಿರ್ಧಾರದ ವಿರುದ್ಧ...
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಟಿಎಂಸಿ ಶಾಸಕರೊಬ್ಬರ ವಿವಾದಾತ್ಮಕ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ತೃಣಮೂಲ ಕಾಂಗ್ರೆಸ್ ಅಧ್ಯಕ್ಷ ಅಬ್ದುರ್ ರಹೀಮ್ ಬಕ್ಷಿ, ಬಿಜೆಪಿ ಶಾಸಕ ಶಂಕರ್ ಘೋಷ್ ಅವರ ಬಾಯಿಗೆ ಆ್ಯಸಿಡ್ ಸುರಿಯುವುದಾಗಿ ಬೆದರಿಕೆ ಹಾಕಿದ್ದಾರೆ.
ಬಂಗಾಳ ಮೂಲದ ವಲಸೆ ಕಾರ್ಮಿಕರ ಮೇಲೆ ಇತರ ರಾಜ್ಯಗಳಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಮ್ಮಿಕೊಂಡಿದ್ದ...
ನಾಡು, ನುಡಿ, ಸಂಸ್ಕೃತಿ ಮತ್ತು ಸಾಹಿತ್ಯದ ಸುಗಂಧವನ್ನು ಮರೆತು, ಕೇವಲ ದ್ವೇಷದ ವಾತಾವರಣವನ್ನು ಹರಡುತ್ತಿರುವ ಬಿಜೆಪಿ ನಾಯಕರು ಒಬ್ಬ ಮಹಿಳೆಯ ವಿಷಯವನ್ನೇ ರಾಜಕೀಯದ ಅಂಗಳಕ್ಕೆ ಎಳೆದಿರುವುದು ಲಜ್ಜಾಸ್ಪದ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಆರೋಪಿಸಿದ್ದಾರೆ.
ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿತರಾದ ಬಾನು ಮುಸ್ತಾಕ್ ಅವರು,...