ಚುನಾವಣಾ ಚತುರ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷಕ್ಕೆ ತೀವ್ರ ಹಿನ್ನಡೆ ಎದುರಾಗಿದೆ. ಮೊದಲ ಹಂತದ ಮತದಾನಕ್ಕೆ ಒಂದು ದಿನ ಮೊದಲು ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಪಕ್ಷ ಬದಲಿಸಿ ಬಿಜೆಪಿ ಸೇರಿದ್ದಾರೆ.
ಮುಂಗೇರ್‌ನಲ್ಲಿ ಜೆಎಸ್‌ಪಿಯಿಂದ ಕಣಕ್ಕಿಳಿದಿದ್ದ ಸಂಜಯ್ ಸಿಂಗ್, ಬಿಜೆಪಿ ಅಭ್ಯರ್ಥಿ ಕುಮಾರ್ ಪ್ರಣಯ್ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಜೆಎಸ್‌ಪಿಯ ಅಭ್ಯರ್ಥಿಗಳ ಸಂಖ್ಯೆ...
ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ಸಿಕ್ತಿಲ್ಲ. RSS ಹಿಡಿದ ಹಠ ಬಿಡ್ತಿಲ್ಲ. ಈ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದೂ ಆಯ್ತು. ಎರಡೆರಡು ಬಾರಿ ಶಾಂತಿ ಸಭೆ ನಡೆಸಿದ್ದು ಆಯ್ತು. ಸದ್ಯ, ನವೆಂಬರ್ 13 ಅಥವಾ 16ರಂದು ಚಿತ್ತಾಪುರದಲ್ಲಿ ಪಥ ಸಂಚಲನಕ್ಕೆ ಅನುಮತಿ ನೀಡುವಂತೆ, ಸರ್ಕಾರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಹೊಸ ಪ್ರಸ್ತಾವನೆ ಸಲ್ಲಿಸಿದೆ.
ಪಥ ಸಂಚನಲಕ್ಕೆ ಅನುಮತಿ...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಪರೋಕ್ಷವಾಗಿ ಅಂಕುಶ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ, ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ, ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು, ಧಾರವಾಡದ ವಿಭಾಗೀಯ ಪೀಠ ತಿಳಿಸಿದ್ದು, ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ...
ಕೆಜಿಎಫ್‌ನ ಚಾಚಾ ಖ್ಯಾತಿಯ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ರು. ತಮ್ಮ ಕೂದಲಿನಿಂದಲೇ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದ ಹರೀಶ್ ರಾಯ್‌ಗೆ, ಓಂ ನಂತರ ಕೆಜಿಎಫ್ ಸಿನಿಮಾದಿಂದ ನನಗೆ ದೊಡ್ಡ ಬ್ರೇಕ್ ಸಿಕ್ಕಿತ್ತು.
ಆದರೆ, ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ 4ನೇ ಹಂತದಲ್ಲಿದ್ದು, ಹೊಟ್ಟೆಗೆ ವ್ಯಾಪಿಸಿದೆ. ಚಿಕಿತ್ಸೆಗೆ ಸುಮಾರು 70 ಲಕ್ಷಕ್ಕೂ ಅಧಿಕ ರೂಪಾಯಿಗಳ ಅಗತ್ಯವಿತ್ತಂತೆ....
ನವೆಂಬರ್ ಕ್ರಾಂತಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಿನ್ನೆಯೇ ದೆಹಲಿಗೆ ಹೋಗಿದ್ದಾರೆ. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾರನ್ನೂ ಭೇಟಿ ಮಾಡಿಲ್ಲ ಎಂದು ಡಿಕೆ ಹೇಳಿದ್ದಾರೆ. ಯಾವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡಿಲ್ಲ. ಸಿಎಂ ಎಲ್ಲವನ್ನೂ ಮಾಡಿಕೊಳ್ಳುತ್ತಾರೆ. ನಾನು ಯಾವುದೇ ಲೀಡರ್‌ಗಳನ್ನು ಭೇಟಿ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿಲ್ಲ. ಆದ್ರೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮತಗಳ್ಳತನದ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕದಲ್ಲೂ ವೋಟ್ ಚೋರಿ ವಿಚಾರದಲ್ಲಿ ಸಹಿ ಸಂಗ್ರಹ ಅಭಿಯಾನ ಮಾಡಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ರಾಜ್ಯದ ಕಾಂಗ್ರೆಸ್ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಲಾಸ್ಟ್ ವಾರ್ನಿಂಗ್ ಕೊಟ್ಟಿದ್ದಾರೆ.
ನಿನ್ನೆಯೂ ಮೀಟಿಂಗ್ ಆಗಿದೆ. ನವೆಂಬರ್ 9ಕ್ಕೆ...
Mandya News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಮಂಡ್ಯಕ್ಕೆ ಆಗಮಿಸಿದ್ದು, ಮೈಷುಗರ್ ಶಾಲೆಗೆ ಭೇಟಿ ನೀಡಿದ್ದಾರೆ. ಈ ಶಾಲೆಯಲ್ಲಿ ಶಿಕ್ಷಕರಿಗೆ ಸಂಬಳ ನೀಡಲಾಗದೇ, ಆಡಳಿತ ಮಂಡಳಿ ಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಇಂದು ಆಡಳಿತ ಮಂಡಳಿ ಜತೆ ಸಭೆ ನಡೆಸಲಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿಯವರು ಈ ಮುನ್ನ ಈ ಬಗ್ಗೆ ಮಾತನಾಡಿದ್ದು, 25 ಕೋಟಿ...
Political News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕರಾದ ಹೆಚ್.ವೈ.ಮೇಟಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಮೇಟಿಯವರು ಈ ಸಂದರ್ಭದಲ್ಲಿ ಇಲ್ಲದಿರುವುದು ವಿಷಾದನೀಯ. ಅವರ ಆಸೆಯಂತೆ ಟೆಂಡರ್ ಕೂಡ ಈಗಾಗಲೇ ಕರೆಯಲಾಗಿದೆ. ಶೀಘ್ರದಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
1983 ರಿಂದ ಹೆಚ್. ವೈ....
ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟಕ್ಕೆ ಜೆಡಿಎಸ್ ಬೆಂಬಲ ಘೋಷಿಸಿದೆ. ಈಗಾಗಲೇ ಮೈತ್ರಿ ಪಕ್ಷವಾದ ಬಿಜೆಪಿ ಅಖಾಡಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಕೂಡ, ಹೋರಾಟಕ್ಕೆ ಧುಮುಕುವ ಮುನ್ಸೂಚನೆ ಕೊಟ್ಟಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ಜೆಡಿಎಸ್ ಸಭೆ ನಡೆಸಲಾಯ್ತು. ಬಳಿಕ ಮಾಧ್ಯಮಗಳ ಜೊತೆ ನಿಖಿಲ್ ಮಾತನಾಡಿದ್ದಾರೆ. ಈ ವೇಳೆ ಅನ್ನದಾತರ...
ಡಿಸಿಎಂ ಡಿ.ಕೆ ಶಿವಕುಮಾರ್ ಡ್ರೀಮ್ ಪ್ರಾಜೆಕ್ಟ್ ಆದ ಬೆಂಗಳೂರಿನ ಟನಲ್ ರೋಡ್‌ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಜೆಡಿಎಸ್ ಕೂಡ ಟನಲ್ ರೋಡ್ ಯೋಜನೆಯನ್ನು ವಿರೋಧಿಸಿದೆ. ಗುಂಡಿ ಮುಚ್ಚುವುದಕ್ಕೆ ಆಗದವರು ಟನಲ್ ರೋಡ್ ಮಾಡ್ತೀರಾ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಆಯ್ತು. ಫಲಿತಾಂಶ ನೋಡಿ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...