ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ವೋಟ್ ಚೋರಿ ಆರೋಪಗಳ ಸಾಲು ಮುಂದುವರೆದಿದೆ. 2024ರ ವಿಧಾನಸಭಾ ಚುನಾವಣೆ ವೇಳೆ, ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ದೆಹಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ, ಭಾರೀ ಪ್ರಮಾಣದ...
ಬೆಂಗಳೂರು ನಗರದ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ, ಬಿಜೆಪಿ ಅಭಿಯಾನ ಕೈಗೊಳ್ಳುತ್ತಿದೆ. 1 ವಾರ ಅಭಿಯಾನ ನಡೆಸುವ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಶಾಸಕರು, ಸಂಸದರ ಜೊತೆಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು, ಎಲ್ಲಾ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ.
ಕಾಂಗ್ರೆಸ್ ಸರ್ಕಾರದ...
ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆಯಾದ್ರೆ ಮುಂದಿನ ಕೆಪಿಸಿಸಿ ಅಧ್ಯಕ್ಷರು ಯಾರಾಗ್ತಾರೆ ಎಂಬ ಚರ್ಚೆಗಳು ಈಗಲೇ ಶುರುವಾಗಿದೆ. ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಡಿ.ಕೆ. ಸುರೇಶ್, ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ನಲ್ಲಿ ನಾನಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಏಕೆ ಹೇಳ್ತೀರಾ? ನಾನು ಆ ರೇಸ್ನಲ್ಲಿ ಇಲ್ಲ. ಈ...
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯ ಟೆನ್ಶನ್ ಶುರುವಾಗಿದೆ. ಈ ಹೊತ್ತಲ್ಲಿ ನವೆಂಬರ್ ಕ್ರಾಂತಿಗೆ ಕ್ಷಣಗಣನೆ ಎಂದು ಬಿಜೆಪಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ. 1 ಕುರ್ಚಿಗೆ ನಾಲ್ಕು ನಾಯಕರು ಓಟ ನಡೆಸುತ್ತಿರುವ ವಿಡಿಯೋವನ್ನು ಹಂಚಿಕೊಂಡು ವ್ಯಂಗ್ಯವಾಡಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಬಗ್ಗೆ, ಕಾಂಗ್ರೆಸ್...
Political News: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ದೇಶದಲ್ಲಿ ಹೇಗೆ ವೋಟ್ ಕಳ್ಳತನವಾಗುತ್ತಿದೆ ಅನ್ನೋ ಬಗ್ಗೆ ಇಂದು ವಿವರಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ...
ಬಿಹಾರದಲ್ಲಿ ರಾಜಕೀಯ ಪೈಪೋಟಿಯ ಶಿಖರವನ್ನೇ ತಲುಪಿರುವ ವಿಧಾನಸಭಾ ಚುನಾವಣೆಗೆ ಈಗ ಕ್ಷಣಗಣನೆ ಆರಂಭವಾಗಿದೆ. ಭಾರೀ ಕುತೂಹಲಕ್ಕೆ ಕಾರಣವಾದ ಈ ಚುನಾವಣೆಯ ಮೊದಲ ಹಂತದ ಮತದಾನ ನವೆಂಬರ್ 6ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಇದೀಗ ಮೊದಲ ಹಂತದ ಚುನಾವಣೆಯ ಪ್ರಚಾರ ಕಾರ್ಯಕ್ಕೆ ತೆರೆಬಿದ್ದಿದೆ. ಎಲ್ಲ ಪಕ್ಷಗಳ...
ಕಬ್ಬಿನ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಆರಂಭವಾಗಿರುವ ಹೋರಾಟದ ಕಿಚ್ಚು, ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಬೆಳಗಾವಿಯಲ್ಲಿ 7ನೇ ದಿನಕ್ಕೆ ಅಹೋರಾತ್ರಿ ಹೋರಾಟ ಮುಂದುವರೆದಿದ್ದು, 7 ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ.
ಕಬ್ಬು ಬೆಳೆಗಾರರ ಬೇಡಿಕೆಗಳು ಏನು ಅನ್ನೋದನ್ನ ನೋಡೋದಾದ್ರೆ..
1) 1 ಟನ್ ಕಬ್ಬಿಗೆ 3,500ಕ್ಕೂ ಹೆಚ್ಚಿನ ದರ ನಿಗದಿ
2) ಕಬ್ಬಿಗೆ ಬೆಂಬಲ ಬೆಲೆ ನೀಡಿ
3) ಕೇಂದ್ರ, ರಾಜ್ಯದಿಂದ...
ನವೆಂಬರ್ನಲ್ಲಿ ದಿನಗಳು ಕಳೆದಂತೆ ರಾಜ್ಯ ಕಾಂಗ್ರೆಸ್ನಲ್ಲಿ ಮಹಾ ಸ್ಫೋಟದ ಸುಳಿವು ಸಿಗುತ್ತಿದೆ. ನವೆಂಬರ್ 15ರ ಬಳಿಕ ಹೊಸ ಆಟದ ಸಂದೇಶವನ್ನು, ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ರವಾನಿಸಿದ್ದರು. ಮತ್ತೆ ಕೋಲಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ನೀಡಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿದ್ದಾರೆ. ಸಂಪುಟ ಪುನಾರಚನೆ...
ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿನ ರಾಜಕೀಯದಲ್ಲಿ, ರಾಷ್ಟ್ರೀಯ ಪಕ್ಷಗಳು ನೆಲೆ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ನ್ಯಾಷನಲ್ ಪಾರ್ಟಿಗಳು ಅಲ್ಲಿ ಸೀಟು ಗೆಲ್ಲಬೇಕು ಅಂದ್ರೆ, ಪ್ರಾದೇಶಿಕ ಪಕ್ಷಗಳ ಬೆಂಬಲ ಬೇಕೇ ಬೇಕು. ಅದು ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ. ಅಷ್ಟರಮಟ್ಟಿಗೆ ಪ್ರಾದೇಶಿಕ ಪಾರ್ಟಿಗಳ ಹಿಡಿತದಲ್ಲಿರುವ, ಭಾರತದ ಕೆಲವೇ ಕೆಲವು ರಾಜ್ಯಗಳಲ್ಲಿ ತಮಿಳುನಾಡು ಒಂದು.
ಡಿಎಂಕೆ ಒಕ್ಕೂಟದ ನೇತೃತ್ವವನ್ನು...
ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದೆ. ಈ ನಡುವೆ, ರಾಜ್ಯದ ರಾಜಕೀಯ ವಲಯವನ್ನು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ.
ಮೃತರನ್ನು ನಿರಂಜನ್ ಅವರ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...