ಸಮಾಜದಲ್ಲಿ RSS ವಿಷಜಂತುಗಳನ್ನ ಬೆಳೆಸಬಾರದು ಅಂತ ಕುಮಾರಸ್ವಾಮಿ ಅವರು RSS ಬ್ಯಾನ್ ಬಗ್ಗೆ ಒಂದು ಆರ್ಟಿಕಲ್ ಬರೆದಿದ್ರು. RSS ಸಹವಾಸ ಬೇಡ ಅಂದಿದ್ದ HD ಕುಮಾರಸ್ವಾಮಿ ಅವ್ರು ಈಗ ಸೈಲೆಂಟ್ ಆಗಿದ್ದಾರೆ. ದೇವೇಗೌಡ್ರು ಕೂಡ RSS ಬ್ಯಾನ್ ಬಗ್ಗೆ ವಿಶ್ಲೇಷಿಸಿದ್ರು. ಆಗಿನಿಂದ ಇಲ್ಲಿಯವರೆಗೂ ಏನು ಬದಲಾವಣೆ ಆಗಿದೆ. ಕುರ್ಚಿ ಗೋಸ್ಕರ ತತ್ವ ಬದಲಾವಣೆ ಮಾಡುವ...
ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಕಿಚ್ಚು ಕ್ಷಣ, ಕ್ಷಣಕ್ಕೂ ಹೆಚ್ಚಾಗುತ್ತಿದೆ. ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ, ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆಯೂ ಮಾತನಾಡಿದ್ದು, ಸತೀಶ್ ಜಾರಕಿಹೊಳಿ ಹೆಸರನ್ನು ಮುನ್ನಲೆಗೆ ತಂದಿದ್ದಾರೆ. ಯತೀಂದ್ರ ಅವರು ಸ್ಫೋಟಕ ಸುಳಿವು ಕೊಟ್ಟ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ತಮ್ಮ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ.
ಎಲ್ಲವನ್ನೂ...
ಡಿಸಿಎಂ ಡಿ.ಕೆ ಶಿವಕುಮಾರ್ ದೀಪಾವಳಿಯ ಬಲಿಪಾಡ್ಯಮಿ ದಿನ, ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜೊತೆಗೆ ರಾಯರ ಅನುಗ್ರಹಕ್ಕಾಗಿ ತುಲಾಭಾರ ಸೇವೆ ನೆರವೇರಿಸಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪಂಚಮುಖಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಮೂಲ ರಾಮ ದೇವರ ದರ್ಶನವನ್ನೂ ಮಾಡಿದ್ದಾರೆ.
ಪಂಚಮುಖಿ ಆಂಜನೇಯನ ದರ್ಶನದ...
ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ. ಸಿದ್ದರಾಮಯ್ಯ ಬಳಿಕ ಉತ್ತರಾಧಿಕಾರಿ ಬಗ್ಗೆ ಹೇಳಿದ್ದ ಎಂಎಲ್‌ಸಿ ಯತೀಂದ್ರ, ತಮ್ಮದೇ ಹೇಳಿಕೆಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕೂಡ ನಂಬಿಕೆ ಇಟ್ಟುಕೊಂಡು ಹೋಗುತ್ತಿದ್ದಾರೆ....
ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಕುಳಿತ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಕೂತಿದ್ದಾರೆ. ಅವರು ಈ ಭಾಗಕ್ಕೆ ಆರ್ಟಿಕಲ್ 371ಜೆ ಕೊಟ್ಟರು. ಅಡ್ವಾಣಿ ಅವರು ಇದು ಸಾಧ್ಯವಿಲ್ಲ ಎಂದು ಹೇಳಿದ್ದನ್ನು, ಖರ್ಗೆ ಅವರು ಮಾಡಿ ತೋರಿಸಿದ್ದಾರೆ ಎಂದು, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿರುವ ಡಿಕೆಶಿ, ಕಾಂಗ್ರೆಸ್ ಸರ್ಕಾರದ ಯೋಜನೆಗಳು ಕೇವಲ ಕಾಂಗ್ರೆಸ್ ಸರ್ಕಾರಕ್ಕೆ...
ಬಿಹಾರದಲ್ಲಿ ಸೀಟು ಹಂಚಿಕೆ ಜಗಳ ಮುಂದುವರೆದಿದ್ರೂ, ಮುಂಬರುವ ವಿಧಾನಸಭೆ ಚುನಾವಣೆಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು, ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲು, ಒಮ್ಮತ ಮೂಡಿದೆ. ಆರ್‌ಜೆಡಿ ಮೂಲಗಳ ಪ್ರಕಾರ, ಮಹಾಘಟಬಂಧನ್‌ನ ಎಲ್ಲಾ ಪಕ್ಷಗಳು ತೇಜಸ್ವಿ ಯಾದವ್ ನಾಯಕತ್ವವನ್ನು ಬೆಂಬಲಿಸಲು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ಇಂದು ಔಪಚಾರಿಕ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ ನಾಯಕತ್ವ ನೀಡಬಲ್ಲ ವ್ಯಕ್ತಿ ಎಂದು ಯತೀಂದ್ರ ಹೇಳಿದ್ದಾರೆ. ಅವರ ಮಾತುಗಳು ಮುಂದಿನ ಮುಖ್ಯಮಂತ್ರಿ ಕುರಿತು ಊಹಾಪೋಹಗಳಿಗೆ ಕಾರಣವಾಗಿವೆ.
ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಕಪ್ಪಲ್ಗುರಿ ಗ್ರಾಮದಲ್ಲಿ ನಡೆದ ಸಂತ...
ಹಠ ಬಿಟ್ಟಿಲ್ಲದ ಟ್ರಬಲ್ ಶೂಟರ್ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದೆ ಹಾಸನಾಂಬ ದೇವಿ ದರ್ಶನ ಮಾಡಿದ ಡಿಕೆಶಿ, ಇದೀಗ ಪತ್ನಿ ಉಷಾ ಮತ್ತು ಕುಟುಂಬದವರ ಜೊತೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಮೂಲ ಬೃಂದಾವನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ...
ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಆರ್‌ಎಸ್‌ಎಸ್ ವಿರುದ್ಧ ಟೀಕೆ ಮಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬದಲ್ಲಿ ಡಿಜೆ ಹಾಕಿಕೊಂಡು ಎಣ್ಣೆ ಹಚ್ಚಿ ಮಸೀದಿ, ಚರ್ಚ್ ಮುಂದೆ ಡ್ಯಾನ್ಸ್ ಮಾಡುತ್ತಾರೆ. ಇದು ಯಾವ ಸಂಸ್ಕೃತಿ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ, ದೇಶಭಕ್ತಿ ಎಂದರೆ ಧ್ವಜ, ರಾಷ್ಟ್ರಗೀತೆ, ಸಂವಿಧಾನಕ್ಕೆ...
ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಬದಲಾವಣೆ ಕುರಿತ ಚರ್ಚೆಗಳು ವೇಗ ಪಡೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಮುಂದಿನ ಮುಖ್ಯಮಂತ್ರಿ...