ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಹೃದಯದ ಕಾಳಜಿ ಬಗ್ಗೆ ಜನರಲ್ಲಿ ಅರಿವು ಜಾಸ್ತಿಯಾಗ್ತಿದೆ. ಸಂಘ ಸಂಸ್ಥೆಗಳಿಂದ ಹೃದಯದ ಬಗ್ಗೆ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.
ಸದ್ಯ, ಜನಪ್ರಿಯ ಆಸ್ಪತ್ರೆ, ಹಾಸನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಐಎಂಎ ಹಾಸನ ಆಶ್ರಯದಲ್ಲಿ, ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್ ಆಯೋಜಿಸಲಾಗಿತ್ತು. ಸಂಸದ...
ಬೆಂಗಳೂರು–ಮುಂಬೈ ನಡುವಿನ ದೀರ್ಘಕಾಲದ ಕನಸು ಶೀಘ್ರದಲ್ಲೇ ನಿಜವಾಗಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೂಪರ್‌ಫಾಸ್ಟ್ ರೈಲು ಘೋಷಣೆ ಮಾಡಿ, 30 ವರ್ಷಗಳಿಂದ ಜನರ ಬೇಡಿಕೆಗೆ ಕೊನೆಗೂ ಸ್ಪಂದಿಸಿದ್ದಾರೆ. ಈ ಘೋಷಣೆಯೊಂದಿಗೆ ಕರ್ನಾಟಕದ ಜನತೆಗೆ ಸಂಸದ ತೇಜಸ್ವಿ ಸೂರ್ಯ ಗುಡ್ ನ್ಯೂಸ್ ನೀಡಿದ್ದಾರೆ.
ಇದುವರೆಗೂ ಈ ಮಾರ್ಗದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ಮಾತ್ರ ಸಂಚರಿಸುತ್ತಿದ್ದು, ಪ್ರಯಾಣಕ್ಕೆ...
ಮೈಸೂರಿನಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶುಕ್ರವಾರ ಐದನೇ ದಿನಕ್ಕೆ ಕಾಲಿಟ್ಟಿತು. ನಗರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಮೀಕ್ಷೆ ಆರಂಭವಾದರೂ, ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗುತ್ತಿದ್ದವು. ಉಳಿದ ತಾಲ್ಲೂಕು ಕೇಂದ್ರಗಳಲ್ಲಿ ಮೊದಲ ದಿನದಿಂದಲೇ ನೆಟ್‌ವರ್ಕ್ ಸಮಸ್ಯೆ ತಲೆದೋರಿದ್ದರೆ, ನಗರ ಪ್ರದೇಶದಲ್ಲಿ ಆ್ಯಪ್ ಸರ್ವರ್ ಸ್ಪಂದಿಸದಿರುವುದೇ ದೊಡ್ಡ ತೊಂದರೆಯಾಯಿತು. ಪರಿಣಾಮವಾಗಿ, ಸಮೀಕ್ಷೆದಾರರು ಒಂದು ಮನೆಯಲ್ಲೇ ಗಂಟೆಗಳ...
ರಾಜ್ಯದಾದ್ಯಂತ ಮಳೆರಾಯನ ಆರ್ಭಟ ಶುರುವಾಗಿದೆ. ಎಲ್ಲೆಡೆ ಪ್ರವಾಹಗಳು ಸಂಭವಿಸುತ್ತಿವೆ. ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕಲಬುರಗಿ ಜಿಲ್ಲೆಯಲ್ಲಿ ಹಲವು ಸೇತುವೆಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 27 ಮತ್ತು 28 ರಂದು ಎರಡು...
ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಾನು ಸಿಎಂ ಆಗೇ ಆಗ್ತೀನಿ ಅನ್ನೋ ವಿಶ್ವಾಸದಲ್ಲಿದ್ದಾರೆ. ಮದ್ದೂರು ಕಲ್ಲು ತೂರಾಟದ ಪ್ರಕರಣದ ಬಳಿಕ ಫೈರ್‌ಬ್ರ್ಯಾಂಡ್ ಖ್ಯಾತಿ, ಯತ್ನಾಳ್ ಹುಮ್ಮಸ್ಸನ್ನ ಮತ್ತಷ್ಟು ಹೆಚ್ಚಿಸಿದೆ. ಸದ್ಯ, ದಾವಣಗೆರೆಯಲ್ಲಿ ನಡೆದ ದಸರಾ ಉತ್ಸವಕ್ಕೆ ಯತ್ನಾಳ್ ಹೋಗಿದ್ರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಲ್ಲದೇ, ನಾನು ಮುಖ್ಯಮಂತ್ರಿಯಾದ್ರೆ ಹಿಂದೂ...
ಇಡೀ ರಾಜ್ಯ ಜಾತಿಗಣತಿ ಗುಂಗಲ್ಲಿ ಇರುವಾಗಲೇ, ಆಪರೇಷನ್ ಬಿಪಿಎಲ್ ಕಾರ್ಡ್ ಶುರುವಾಗಿದೆ. ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳಿವೆಯಂತೆ. ಹೀಗಂತ ಉಡುಪಿಯಲ್ಲಿ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಕೇಂದ್ರ ಸರ್ಕಾರ ನೀಡಿದ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರವೇ ಕಲೆ ಹಾಕಿರುವ ಅಂಕಿ ಅಂಶಗಳನ್ನ ಇಟ್ಕೊಂಡು, ಪಡಿತರ ಕಾರ್ಡ್ ಪರಿಷ್ಕರಣೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ...
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿಯಮ ಮೀರಿ ಕಟ್ಟಿದ್ದ ಕಟ್ಟಡವೊಂದು ವಾಲಿಕೊಂಡಿದೆ. ಈ ದೃಶ್ಯ ನೋಡಿದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಕೋರಮಂಗಲ 1ನೇ ಬ್ಲಾಕ್‌ನ ವೆಂಕಟಾಪುರದಲ್ಲಿ, 750 ಚದರಡಿ ಜಾಗದಲ್ಲಿ ಕಟ್ಟಡವೊಂದನ್ನು ನಿರ್ಮಿಸಲಾಗಿತ್ತು.
ನೆಲಮಹಡಿ ಸೇರಿ 5 ಅಂತಸ್ತುಗಳ ಕಟ್ಟಡ ಕುಸಿಯುವ ಆತಂಕ ಎದುರಾಗಿದೆ. ಈ ಕಟ್ಟಡದ ಗೃಹಪ್ರವೇಶ ಇನ್ನೂ ಆಗಿಲ್ಲ. ಚಿಕ್ಕಪುಟ್ಟ ಕೆಲಸಗಳು ಇನ್ನೂ...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯ, ಸ್ವಇಚ್ಛಾ ಹೇಳಿಕೆ ವೇಳೆ ಉಲ್ಟಾ ಹೊಡೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ನ್ಯಾಯಾಲಯದಲ್ಲಿ, ಕಳೆದ 2 ದಿನಗಳಿಂದ ಚಿನ್ನಯ್ಯನ ಹೇಳಿಕೆ ದಾಖಲು ಮಾಡಿಕೊಳ್ಳಲಾಗ್ತಿದೆ.
ಬಿಎನ್‌ಎಸ್ 183ರ ಅಡಿಯಲ್ಲಿ ಚಿನ್ನಯ್ಯನ ಸ್ವಇಚ್ಛಾ ಹೇಳಿಕೆಗಳನ್ನು ದಾಖಲಿಸಲಾಗಿದೆ. ಸುಮಾರು ಏಳೂವರೆ ಗಂಟೆಗಳ ಕಾಲ ಪ್ರಕ್ರಿಯೆ ನಡೆದಿದ್ದು, ಸೆಪ್ಟೆಂಬರ್ 23ರಂದು 11...
ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ, ಕರ್ನಾಟಕದ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ವಿಜೃಂಬಣೆಯಿಂದ ನೆರವೇರಿದೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮುನ್ನುಡಿ ಬರೆದಿದ್ದಾರೆ.
ಕೆಆರ್‌ಎಸ್ ಅಣೆಕಟ್ಟೆ ಬಳಿ ದೋಣಿ ವಿಹಾರ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಕಾವೇರಿ ಮೂರ್ತಿಗೆ, ಡಿಕೆಶಿ ಆರತಿ ಬೆಳಗೆ ಚಾಲನೆ ನೀಡಿದ್ರು. ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು...
ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಆರ್. ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಹಿಂದೆ ದೇವಸ್ಥಾನಗಳನ್ನು ವಂಶಪಾರಂಪರ್ಯವಾಗಿ ನಡೆಸಲಾಗುತ್ತಿತ್ತು. ನಂತರ ಕುಟುಂಬಗಳಲ್ಲಿ ವ್ಯಾಜ್ಯಗಳು ಹೆಚ್ಚಾಗುತ್ತಿದ್ದಂತೆ, ಬ್ರಿಟಿಷರ ಕಾಲದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಮುಜರಾಯಿ ಇಲಾಖೆ ಪ್ರಾರಂಭವಾಯಿತು. ವಂಶಪಾರಂಪರ್ಯದ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೈಗಾರಿಕಾ ಸ್ಥಾಪನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಕೈಗಾರಿಕೆ ಸ್ಥಾಪನೆಗೆ 800 ಎಕರೆ ಸರ್ಕಾರಿ...