Thursday, June 25, 2026

ರಾಜ್ಯ

Hubli News: ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

Hubli News: ಹುಬ್ಬಳ್ಳಿ ತಾಲೂಕಿನ ಶೆರೇವಾಡ ಗ್ರಾಮದಲ್ಲಿ ಕಳ್ಳರ ಕೈಚಳಕ ಮುಂದುವರಿದಿದೆ. ಮನೆ ಬೀಗ ಮುರಿದು ಒಳನುಗ್ಗಿದ ಖದೀಮರು ₹8.30 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹುಬ್ಬಳ್ಳಿ ತಾಲೂಕಿನ ಶೆರೇವಾಡ...

Hubli News: ರೈತರ ಹೋರಾಟದ ವೇಳೆ ಡಿಸಿಪಿ ರವೀಶ್ ಭಾಷಣಕ್ಕೆ ಭಾರೀ ಮೆಚ್ಚುಗೆ

Hubli News: ಸಾಮಾನ್ಯವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಲ್ಲಿ ಕಾಣಿಸಿಕೊಳ್ಳುವ ಪೊಲೀಸ್ ಅಧಿಕಾರಿಯೊಬ್ಬರು, ರೈತರ ಹೋರಾಟದ ವೇದಿಕೆಯಲ್ಲಿ ಬಸವಣ್ಣನವರ ವಚನಗಳ ಮೂಲಕ ರೈತರ ಮಹತ್ವವನ್ನು ಸಾರಿದ ಅಪರೂಪದ ಕ್ಷಣವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹುಬ್ಬಳ್ಳಿಯ ಡಿಸಿಪಿ ರವೀಶ್ ಅವರ ಭಾಷಣಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹುಬ್ಬಳ್ಳಿಯ ಹೆಸ್ಕಾಂ ಕಚೇರಿ ಎದುರು ನಡೆದ...

Hubli News: ನೀಟ್ ಹಗರಣ ಖಂಡಿಸಿ ಎನ್‌ಎಸ್‌ಯುಐ ಪ್ರತಿಭಟನೆ

Hubli News: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ನೀಟ್ ಹಗರಣ ಖಂಡಿಸಿ ಇಂದು ಬೆಳಿಗ್ಗೆ 11.30ಕ್ಕೆ ಹುಬ್ಬಳ್ಳಿಯ ಬಿವಿಬಿ ವಿಶ್ವವಿದ್ಯಾಲಯ ವೃತ್ತದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ...

Koppala News: ಕನಕಗಿರಿ ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಬೃಹತ್ ಪ್ರತಿಭಟನೆ

Koppala News: ಕನಕಗಿರಿ ತಾಲೂಕಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಮಣ್ಣು ಸಾಗಣೆ, ಓಸಿ-ಮಟ್ಕಾ, ಇಸ್ಪೀಟ್ ಜೂಜಾಟ ಹಾಗೂ ಅಕ್ರಮ ಮದ್ಯ ಮಾರಾಟದಂತಹ ಸಮಾಜಘಾತುಕ ಚಟುವಟಿಕೆಗಳನ್ನು ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ) ಚಂದ್ರಕಾಂತ ಎಸ್. ಕಾದ್ರೊಳ್ಳಿ ಬಣ ಸಂಘಟನೆ ವತಿಯಿಂದ ಇಂದು ಕನಕಗಿರಿ ನಗರದಲ್ಲಿ...

Koppala News: ಕೊಪ್ಪಳ ಜಿಲ್ಲೆಯ ಸಿದ್ನೇಕೊಪ್ಪ ಗ್ರಾಮದಲ್ಲಿ ವಿನೂತನ ಶಾಲಾ ಪ್ರಾರಂಭೋತ್ಸವ

Koppala News: ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳ ವ್ಯಾಮೋಹದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕುಸಿಯುತ್ತಿದೆ. ಈ ಆತಂಕಕಾರಿ ಬೆಳವಣಿಗೆಗೆ ಬ್ರೇಕ್ ಹಾಕಲು ಮತ್ತು ಪೋಷಕರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಜಾಗೃತಿ ಮೂಡಿಸಲು ಕೊಪ್ಪಳ ಜಿಲ್ಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ಒಂದು ವಿಶಿಷ್ಟ ಹೆಜ್ಜೆ ಇಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ಸಿದ್ನೇಕೊಪ್ಪ ಗ್ರಾಮದ ಸರ್ಕಾರಿ ಹಿರಿಯ...

ವಿದ್ಯುತ್ ಸಮಸ್ಯೆ: ಎತ್ತಿನ ಬಂಡಿ- ಟ್ರ್ಯಾಕ್ಟರ್ ಮೂಲಕ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಸಾವಿರಾರು ರೈತರು

Hubli News: ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಸಾವಿರಾರು ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗಳು ಹಾಳಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ತಬೀಬ್‌ ಲ್ಯಾಂಡ್‌ನಲ್ಲಿರುವ ಹೆಸ್ಕಾಂ ಕಚೇರಿ ಆವರಣದಲ್ಲಿ ಇಂದು ರೈತರ ಆಕ್ರೋಶ ಭುಗಿಲೆದ್ದಿತ್ತು. ಎತ್ತಿನ ಬಂಡಿಗಳು, ಟ್ರ್ಯಾಕ್ಟರ್‌ಗಳು ಹಾಗೂ...

Rain update: ರಾಜ್ಯಕ್ಕೆ ಮತ್ತೆ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Rain Update: ರಾಜ್ಯದ ಜನರೇ ಗಮನಿಸಿ, ಬಿಸಿಲಿನ ಝಳದ ನಡುವೆ ಮತ್ತೆ ಮಳೆರಾಯನ ಆಗಮನಕ್ಕೆ ವೇದಿಕೆ ಸಜ್ಜಾಗಿದೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕೃತವಾಗಿ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’...

IIT-IIM ಪದವೀಧರರ ಸಾಹಸ! ಅಮೆರಿಕದ ಉದ್ಯೋಗ ತೊರೆದು ಬೆಂಗಳೂರಿನಲ್ಲಿ ಸ್ವಂತ ಕೆಫೆ

ದೇಶದ ಪ್ರತಿಷ್ಠಿತ ಐಐಟಿ ಮತ್ತು ಐಐಎಂ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿ, ಅಮೆರಿಕದಲ್ಲಿ ಹೆಚ್ಚಿನ ಸಂಬಳದ ಉದ್ಯೋಗದಲ್ಲಿದ್ದ ಇಬ್ಬರು ಸ್ನೇಹಿತರು ಇದೀಗ ತಮ್ಮ ಕನಸಿನ ಉದ್ಯಮಕ್ಕಾಗಿ ಎಲ್ಲವನ್ನೂ ತೊರೆದು ಬೆಂಗಳೂರಿನಲ್ಲಿ ಸ್ವಂತ ಕೆಫೆ ಆರಂಭಿಸಿದ್ದಾರೆ. ಇವರ ಈ ಸಾಹಸಮಯ ನಿರ್ಧಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ಸುದ್ದಿಯಲ್ಲಿದೆ. ಐಐಟಿ ಖರಗ್‌ಪುರ ಮತ್ತು ಐಐಎಂ ಬೆಂಗಳೂರು ಪದವೀಧರರಾಗಿರುವ ಇಬ್ಬರು...

ಚಿನ್ನದ ಬೆಲೆಯಲ್ಲಿ ದೊಡ್ಡ ಇಳಿಕೆ! ಬರೋಬ್ಬರಿ ₹8,200 ಇಳಿಕೆ

ಚಿನ್ನದ ಇಂದು ಮಹತ್ವದ ಬೆಳವಣಿಗೆ ಕಂಡುಬಂದಿದೆ. ಹಲವು ದಿನಗಳಿಂದ ನಿರಂತರ ಏರಿಕೆಯಲ್ಲಿದ್ದ ಚಿನ್ನದ ಬೆಲೆ ಇಂದು ಇಳಿಕೆ ದಾಖಲಿಸಿದ್ದು, ಆಭರಣ ಖರೀದಿದಾರರು ಮತ್ತು ಹೂಡಿಕೆದಾರರ ಗಮನ ಸೆಳೆದಿದೆ. ಬೆಳ್ಳಿ ದರ ಮಾತ್ರ ಸ್ಥಿರವಾಗಿದೆ. ದೇಶೀಯ ಇಂದು ಚಿನ್ನದ ಬೆಲೆಯಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ಮಾರುಕಟ್ಟೆ ಮಾಹಿತಿಯ ಪ್ರಕಾರ, 24 ಕ್ಯಾರಟ್ 100 ಗ್ರಾಂ ಚಿನ್ನದ ದರದಲ್ಲಿ...

ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

ಈ ವರ್ಷದ ಮುಂಗಾರು ಜೂನ್ 4 ರಿಂದ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ, ಆರಂಭಿಕ ಹಂತದಲ್ಲಿ ಅದು ದುರ್ಬಲ ಸ್ವರೂಪದಲ್ಲಿರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜೂನ್ 7 ರಿಂದ 8 ರೊಳಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆಗಳು ಚುರುಕಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img